ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಉದ್ದೇಬೋರನಹಳ್ಳಿ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿರುವ ದಿವ್ಯ ಮತ್ತು ಲೋಹಿತ್ ಅವರ 1 ವರ್ಷ 9ತಿಂಗಳ ಮಗು ಜನ್ವಿತಾಳನ್ನು ಅಂತಾ ರಾಷ್ಟ್ರೀಯ ವರ್ಲ್ಡ್ ಆಫ್ ರೆಕಾರ್ಡ್ಸ್ ಸಂಸ್ಥೆ ಅಸಾಧಾರಣ ಗ್ರಹಣ ಶಕ್ತಿ ಪ್ರತಿಭೆ ಎಂದು ಗುರುತಿಸಿ ತಮ್ಮ ಪುಸ್ತಕದಲ್ಲಿ ದಾಖಲಿಸಿದ್ದಾರೆ.
ಕಳೆದ ನವೆಂಬರ್ 23ರಂದು ರಂದು ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಸಂಸ್ಥೆಯವರು ವಿಶ್ವ ದಾಖಲೆ ಗೌರವ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಮಗುವಿನ ತಾಯಿ ಗೃಹಿಣಿಯಾಗಿದ್ದು, ತಂದೆ ಬೆಂಗಳೂರಿನ ಐಟಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಜನ್ವಿತಾ 50ಕ್ಕೂ ಹೆಚ್ಚು ಸಾಮಾನ್ಯ ಜ್ಞಾನ ಪ್ರಶ್ನೆಗಳಿಗೆ ಉತ್ತರಿಸಿದ್ದು, ಗ್ರಹಗಳು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಹೆಸರುಗಳು, ಕೇಂದ್ರಾಡಳಿತ ಪ್ರದೇಶಗಳು, ಕರ್ನಾಟಕ ಐತಿಹಾಸಿಕ ಸ್ಥಳಗಳು, ಹಿಂದೂ ಪಂಚಾಗದ ಮಾಸಗಳು, ಆಕಾರ ಗಳು, ಋತುಗಳು, ತಿಂಗಳು, ವಾರ ಹಾಗೂ ಕನ್ನಡ , ಇಂಗ್ಲಿಷನಲ್ಲಿ ರೈಮ್ಸ್ ಗಳನ್ನು ಹೇಳಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಅಲ್ಲದೆ ಇದರ ಜತೆಗೆ 50 ಮೀಟರ್ ಅಂತರವನ್ನು 40 ಸೆಕೆಂಡುಗಳಲ್ಲಿ ಪೂರ್ಣಗೊಳಿಸಿದ್ದಕ್ಕಾಗಿ ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಸಂಸ್ಥೆಯು “ಸೂಪರ್ ಟ್ಯಾಲೆಂಟೆಡ್ ಕಿಡ್” ಎಂಬ ಪ್ರಶಸ್ತಿಯನ್ನೂ ನೀಡಿ “ಒನ್ ಇನ್ ಎ ಮಿಲಿಯನ್” ಎಂದು ಪರಿಗಣಿಸಿದೆ.
Related
You Might Also Like
KSRTC 4 ಸಾರಿಗೆ ನಿಗಮಗಳ ಬಸ್ ಪ್ರಯಾಣದ ಟಿಕೆಟ್ ದರ ಹೆಚ್ಚಳ ಕಾಲಕಾಲಕ್ಕೆ ಆಗಬೇಕು: ಸಚಿವ ಚಲುವರಾಯಸ್ವಾಮಿ
ಬೆಂಗಳೂರು: ಡಿಸೇಲ್, ಅಕ್ಕಿ, ಬಟ್ಟೆಗೆ ಜಾಸ್ತಿ ಆದ್ರೆ ದುಡ್ಡು ಕೊಡ್ತೀರಾ.. ಮಟನ್ 100 ರೂ. ಇದ್ದದ್ದು 500 ರೂ. ಆದ್ರೆ ತಗೋತೀರ ಆದರೆ, ಅದೇ ಒಂದು ಸರ್ಕಾರ...
ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿರುವ ರಸ್ತೆಗಳ ಗುರುತಿಸಿ: ತುಷಾರ್ ಗಿರಿನಾಥ್
ಬೆಂಗಳೂರು: ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಮಾರ್ಗಸೂಚಿಯ ಅನುಸಾರ ಗುರುತಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ...
ಬಿಬಿಎಂಪಿಯ 2025-26ನೇ ಸಾಲಿನ ಬಜೆಟ್‌ಗೆ ಸಲಹೆ ಕೊಡಿ: ಡಾ. ಹರೀಶ್ ಕುಮಾರ್
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2025-26ನೇ ಸಾಲಿನ ಕರಡು ಆಯವ್ಯಯದ ತಯಾರಿಕೆಯ ಸಿದ್ಧತೆ ಕಾರ್ಯ ಪ್ರಗತಿಯಲ್ಲಿದ್ದು, ಅದಕ್ಕಾಗಿ ಅತ್ಯಮೂಲ್ಯವಾದ ಸಲಹೆಗಳನ್ನು ನೀಡುವ ಸಲುವಾಗಿ ನಾಗರೀಕರಿಗೆ 10ನೇ...
ಜ.5ರಂದು ಇಪಿಎಸ್ ಪಿಂಚಣಿದಾರರ 84ನೇ ಮಾಸಿಕ ಸಭೆ: ನಂಜುಂಡೇಗೌಡ
ಬೆಂಗಳೂರು: ಸಸ್ಯಕಾಶಿ ಲಾಲ್ ಬಾಗ್ ಆವರಣದಲ್ಲಿ 84ನೇ ಇಪಿಎಸ್ ಪಿಂಚಣಿದಾರರ ಮಾಸಿಕ ಸಭೆ ಇದೇ ಜನವರಿ 5ರ ಭಾನುವಾರ ಹಮ್ಮಿಕೊಳ್ಳಲಾಗಿದೆ ಎಂದು ಬಿಎಂಟಿಸಿ & ಕೆಎಸ್ಆರ್ಟಿಸಿ ನಿವೃತ್ತ...
ಸೌತೆಕಾಯಿ ಗಲಾಟೆ: ತಂಗಿ ಕುತ್ತಿಗೆ ಕೊಯ್ದು ಭೀಕರವಾಗಿ ಕೊಲೆ ಮಾಡಿದ ಅಣ್ಣ
ಕೊಳ್ಳೇಗಾಲ: ಕೇವಲ ಸೌತೆಕಾಯಿಗಾಗಿ ಅಣ್ಣನೊಬ್ಬ ತನ್ನ ತಂಗಿಯ ಕುತ್ತಿಗೆಯನ್ನು ಕತ್ತಿಯಿಂದ ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಈದ್ಗಾ ಮೊಹಲ್ಲದಲ್ಲಿ ನಡೆದಿದೆ....
ಜ.19-BMTC ನೌ.ಸ.ಸಂ.ಚುನಾವಣೆ: ಭ್ರಷ್ಟ, ಕಮಿಷನ್ ಮುಕ್ತ 20 ಭರವಸೆಗಳ ಪ್ರಣಾಳಿಕೆ ಬಿಡುಗಡೆ ಮಾಡಿದ ಸಾಮಾನ್ಯ ನೌಕರರ ತಂಡ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೌಕರರ ಸಹಕಾರ ಸಂಘದ ಚುನಾವಣೆ ಇದೇ ಜನವರಿ 19 ರಂದು ನಡೆಯಲಿದ್ದು, ಈಗಾಗಲೇ ಚುನಾವಣಾ ಕಾವು ಏರುತ್ತಿದೆ, ನೌಕರರ ಸಂಘಟನೆಗಳ...
ಬನ್ನೂರು- ಭತ್ತ ಖರೀದಿ ಕೇಂದ್ರ ತೆರೆದು ನೋಂದಣಿಯಲ್ಲೆ ಕಾಲಹರಣ: ಸಿಟ್ಟಿಗೆದ್ದ ರೈತರಿಂದ ರಸ್ತೆಗೆ ಭತ್ತ ಸುರಿದು ಪ್ರತಿಭಟನೆ
ಬನ್ನೂರು: ಸರ್ಕಾರ ಭತ್ತ ಖರೀದಿ ಕೇಂದ್ರ ತೆರೆದು ಖರೀದಿ ಮಾಡದೆ ಕೇವಲ ನೋಂದಣಿ ಪ್ರಕ್ರಿಯೆಯಲ್ಲೆ ಕಾಲಹರಣ ಮಾಡಿದ ಕಾರಣ ಭತ್ತ ಬೆಳೆಗಾರ ರೈತರು ಸಂಕಷ್ಟಕ್ಕೆ ಸಿಲುಕಿ ನಷ್ಟ...
KSRTC: ಪುರುಷ ನೌಕರರಿಗೂ ಶಿಶುಪಾಲನಾ ರಜೆ ಸೌಲಭ್ಯ- ಇಂದಿನಿಂದಲೇ ಜಾರಿ- ಎಂಡಿ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುರುಷ ನೌಕರರಿಗೂ ಶಿಶುಪಾಲನಾ ರಜೆ ಸೌಲಭ್ಯವನ್ನು ಮಂಜೂರು ಮಾಡುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಇಂದು ಆದೇಶ ಹೊರಡಿಸಿದ್ದಾರೆ. ಒಂಟಿ...
KSRTC: ಶೇ.15ರಷ್ಟು ಬಸ್ ಟಿಕೆಟ್ ದರ ಹೆಚ್ಚಳ- ಜ.5ರಿಂದ ಜಾರಿಗೆ ಸಚಿವ ಸಂಪುಟ ಸಭೆ ಅಸ್ತು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರ ನಿಗಮಗಳ 10 ವರ್ಷದ ಮನವಿಗೆ ಸ್ಪಂದಿಸಿದೆ....
KSRTCಗೆ ರಾಷ್ಟ್ರದ ಮಟ್ಟದ ಒಂಬತ್ತು ಪ್ರಶಸ್ತಿಗಳು- 3ರಾಜ್ಯಗಳಲ್ಲಿ ಪ್ರದಾನ
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) 9 ರಾಷ್ಟ್ರದ ಮಟ್ಟದ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಸಂಸ್ಥೆಗೆ 5 ಆಡ್ ವರ್ಲ್ಡ್ ಶೌಡೌನ್ ಚಿನ್ನದ ಪ್ರಶಸ್ತಿ, 2 ಗೌಕೇರ್...
KSRTC 4 ನಿಗಮಗಳ ನಷ್ಟ ಪರಿಹಾರಕ್ಕೆ ಬಸ್ ಪ್ರಯಾಣ ದರ ಹೆಚ್ಚಿಸುವುದು ಅನಿವಾರ್ಯ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ರಾಜ್ಯದ ನಾಲ್ಕು ಬಸ್ ನಿಗಮಗಳು ಶೇ.15ರಷ್ಟು ಪ್ರಯಾಣ ದರವನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಿ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದು, ಈ ಕುರಿತು ಸರಕಾರ ಚರ್ಚೆ...