Please assign a menu to the primary menu location under menu

NEWSನಮ್ಮರಾಜ್ಯಶಿಕ್ಷಣ-

ವರ್ಲ್ಡ್ ಆಫ್ ರೆಕಾರ್ಡ್ಸ್: ವಿಶ್ವ ದಾಖಲೆ ಸೇರಿದ 1.9 ವರ್ಷದ ಜನ್ವಿತಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಉದ್ದೇಬೋರನಹಳ್ಳಿ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿರುವ ದಿವ್ಯ ಮತ್ತು ಲೋಹಿತ್ ಅವರ 1 ವರ್ಷ 9ತಿಂಗಳ ಮಗು ಜನ್ವಿತಾಳನ್ನು ಅಂತಾ ರಾಷ್ಟ್ರೀಯ ವರ್ಲ್ಡ್ ಆಫ್ ರೆಕಾರ್ಡ್ಸ್ ಸಂಸ್ಥೆ ಅಸಾಧಾರಣ ಗ್ರಹಣ ಶಕ್ತಿ ಪ್ರತಿಭೆ ಎಂದು ಗುರುತಿಸಿ ತಮ್ಮ ಪುಸ್ತಕದಲ್ಲಿ ದಾಖಲಿಸಿದ್ದಾರೆ.

ಕಳೆದ ನವೆಂಬರ್ 23ರಂದು ರಂದು ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಸಂಸ್ಥೆಯವರು ವಿಶ್ವ ದಾಖಲೆ ಗೌರವ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಮಗುವಿನ ತಾಯಿ ಗೃಹಿಣಿಯಾಗಿದ್ದು, ತಂದೆ ಬೆಂಗಳೂರಿನ ಐಟಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಜನ್ವಿತಾ 50ಕ್ಕೂ ಹೆಚ್ಚು ಸಾಮಾನ್ಯ ಜ್ಞಾನ ಪ್ರಶ್ನೆಗಳಿಗೆ ಉತ್ತರಿಸಿದ್ದು, ಗ್ರಹಗಳು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಹೆಸರುಗಳು, ಕೇಂದ್ರಾಡಳಿತ ಪ್ರದೇಶಗಳು, ಕರ್ನಾಟಕ ಐತಿಹಾಸಿಕ ಸ್ಥಳಗಳು, ಹಿಂದೂ ಪಂಚಾಗದ ಮಾಸಗಳು, ಆಕಾರ ಗಳು, ಋತುಗಳು, ತಿಂಗಳು, ವಾರ ಹಾಗೂ ಕನ್ನಡ , ಇಂಗ್ಲಿಷನಲ್ಲಿ ರೈಮ್ಸ್ ಗಳನ್ನು ಹೇಳಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಅಲ್ಲದೆ ಇದರ ಜತೆಗೆ 50 ಮೀಟರ್ ಅಂತರವನ್ನು 40 ಸೆಕೆಂಡುಗಳಲ್ಲಿ ಪೂರ್ಣಗೊಳಿಸಿದ್ದಕ್ಕಾಗಿ ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಸಂಸ್ಥೆಯು “ಸೂಪರ್ ಟ್ಯಾಲೆಂಟೆಡ್ ಕಿಡ್” ಎಂಬ ಪ್ರಶಸ್ತಿಯನ್ನೂ ನೀಡಿ “ಒನ್ ಇನ್ ಎ ಮಿಲಿಯನ್” ಎಂದು ಪರಿಗಣಿಸಿದೆ.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...