NEWSನಮ್ಮರಾಜ್ಯರಾಜಕೀಯ

ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ ವಕೀಲ ಶಿವರಾಜು ಸ್ಪರ್ಧೆ..!

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಗೆ ಇನ್ನು ಬೆರಳೆಣಿಕೆ ತಿಂಗಳುಗಳಷ್ಟೇ ಬಾಕಿ ಇರುವಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಕಾರ್ಯಕರ್ತರಲ್ಲಿ ಉತ್ಸಾಹ ಗರಿಗೆದರುತ್ತಿದ್ದು ಈಗಾಗಲೇ ರಥಯಾತ್ರೆ, ಸಮಾವೇಶ ಇತ್ಯಾದಿಗಳಲ್ಲಿ ತೊಡಗಿದ್ದಾರೆ.

ಇನ್ನು ರಾಜ್ಯಕೀಯ ಪಕ್ಷಗಳಿಗಿಂತ ತಾವೇನು ಕಮ್ಮಿ ಇಲ್ಲ ಎಂಬಂತೆ ಹಲವೆಡೆ ಸ್ವತಂತ್ರ ಅಭ್ಯರ್ಥಿಗಳು ಈಗಿನಿಂದಲೇ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಅದರಂತೆ ಸುಪ್ರೀಂ ಕೋರ್ಟ್‌ ಮತ್ತು ಹೈ ಕೋರ್ಟ್‌ ವಕೀಲರಾದ ಎಚ್‌.ಬಿ.ಶಿವರಾಜು ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ದತೆ ನಡೆಸುತ್ತಿದ್ದಾರೆ.

ಅದಷ್ಟೇ ಅಲ್ಲದೆ ಈ ಹಿಂದೆ ಜಿಲ್ಲಾ ಪಂಚಾಯಿತಿ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅನುಭವವಿರುವ ಜತೆಗೆ ವಕೀಲ ಶಿವರಾಜು ಅವರು ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎಂದು ತಿಳಿಸಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸುವುದು ಗ್ಯಾರಂಟಿಯಾಗಿರುವುದರಿಂದ ಈಗಾಗಲೇ ಕ್ಷೇತ್ರಪ್ರವಾಸವನ್ನು ವಾರಕ್ಕೊಮ್ಮೆ ಇಲ್ಲ 15 ದಿನಗಳಿಗೊಮ್ಮೆ ಮಾಡುತ್ತಿದ್ದಾರೆ. ಈ ವೇಳೆ ಕ್ಷೇತ್ರದ ಮದೆನಾಡು, ಆಕತ್ತೂರು, ಮೂರ್ನಾಡು, ಚರಂಬಾಎಇ, ಸೋಮವಾರಪೇಟೆ, ಸುಂಟಿಕೊಪ್ಪ ಸೇರಿದಂತೆ ಹಲವು ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಹಲವು ಗ್ರಾಮಪಂಚಾತಿ ಸದಸ್ಯರು ಮತ್ತು ತಮ್ಮ ಬೆಂಬಲಿಗರನ್ನು ಭೇಟಿ ಮಾಡಿ ಚುನಾವಣೆಯ ರೂಪುರೇಷೆಗಳ ಬಗ್ಗೆ ಚರ್ಚೆಯಲ್ಲಿ ತೊಡಗಿರುವುದಾಗಿ ವಿಜಯಪಥಕ್ಕೆ ತಿಳಿಸಿದ್ದಾರೆ.

ಇನ್ನು ರಾಜ್ಯದಲ್ಲಿ ಬಿಜೆಪಿಯ ಆಡಳಿತದಿಂದ ಬೇಸತ್ತಿರುವ ಸಾರಿಗೆ ನೌಕರರು ಸಾಮಾನ್ಯ ಜನರು ಈ ಚುನಾವಣೆಯಲ್ಲಿ ಯಾರನ್ನು ಗೆಲ್ಲಿಸಬೇಕು ಎಂಬ ಗೊಂದಲದಲ್ಲಿ ಇದ್ದಾರೆ. ಹೀಗಾಗಿ ಮತರಾರರಿಗೆ ಹತ್ತಿರವಿರುವ ಪ್ರಯತ್ನವನ್ನು ಈ ವಕೀಲರು ಮಾಡುತ್ತಿದ್ದಾರೆ.

ಹೀಗಾಗಿ ಈಗಾಗಲೇ ಮಡಿಕೇರಿಯವರೇ ಆದ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರೊಬ್ಬರು ಮಡಿಕೇರಿಗೆ ಭೇಟಿ ನೀಡಿದ ವೇಳೆ ಇವರನ್ನು ಚುನಾವಣೆಗೆ ಸ್ಪರ್ಧಿಸುವುದಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ಇದರ ಜತೆಗೆ ಕಾಂಗ್ರೆಸ್‌ನ ಹಲವು ಶಾಸಕರ ಪ್ರಕರಣಗಳನ್ನು ಸುಪ್ರೀಂ ಕೋರ್ಟ್‌ ಮತ್ತು ಬೆಂಗಳೂರಿನ ವಿವಿಧ ನ್ಯಾಯಾಲಯಗಳ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪರಿಚಿತರಾಗಿದ್ದು, ಅವರೊಂದಿಗೂ ಚರ್ಚಿಸಿ ಅಭ್ಯರ್ಥಿಯಾಗಿ ನಿಲ್ಲುವುದಕ್ಕೆ ಮುಂದಾಗಿದ್ದಾರೆ.

ಇವರಿಗೆ ಮಡಿಕೇರಿ ನಂಟು: ಮಡಿಕೇರಿಯಲ್ಲಿ ಸುಮಾರು 1996ರಿಂದ ಈವರೆಗೂ ಹಲವಾರು ಹಿರಿಯ ವ್ಯಕ್ತಿಗಳ ಜತೆ ಒಡನಾಟ ಹೊಂದಿದ್ದಾರೆ. ಅದರ ಜತೆಗೆ ಈ ಭಾಗದ ಹಲವಾರು ಮಂದಿಯ ಹೈ ಕೋರ್ಟ್‌ ಪ್ರಕರಣಗಳನ್ನು ನಡೆಸಿಕೊಟ್ಟಿರುವುದರಿಂದ ಈ ಭಾಗದ ಜನರೂ ಕೂಡ ಇವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವುದಕ್ಕೆ ಬೆಂಬಲ ನೀಡುತ್ತಿದ್ದಾರೆ. ಹೀಗಾಗಿ ಮಡಿಕೇರಿಯ ನಂಟನ್ನು ಕಳೆದ ಮೂರು ದಶಕಕ್ಕೂ ಹೆಚ್ಚು ಕಾಲದಿಂದಲೂ ಹೊಂದಿದ್ದು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?