NEWSದೇಶ-ವಿದೇಶನಮ್ಮರಾಜ್ಯ

ಭಾರತದ ಸುಪ್ರೀಂ ಕೋರ್ಟ್ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ. ಚಂದ್ರಚೂಡ್ ಪ್ರಮಾಣವಚನ ಸ್ವೀಕಾರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಭಾರತದ ಸುಪ್ರೀಂ ಕೋರ್ಟ್ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ ಚಂದ್ರಚೂಡ್ ಇಂದು ಪ್ರಮಾಣವಚನ ಸ್ವೀಕರಿಸಿದರು.

ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಚಂದ್ರಚೂಡ್ ಅವರು ಉದಯ್ ಉಮೇಶ್ ಲಲಿತ್ ಅವರ ಉತ್ತರಾಧಿಕಾರಿಯಾಗಿ ಎರಡು ವರ್ಷಗಳ ಅವಧಿಗೆ ಸಿಜೆಐ ಆಗಿ ಸೇವೆ ಸಲ್ಲಿಸಲಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ದ್ರೌಪದಿ ಮುರ್ಮು (Droupadi Murmu) ಅವರು ಪ್ರಮಾಣವಚನ ಬೋಧಿಸಿದರು.

ನಿವೃತ್ತ ನ್ಯಾಯಮೂರ್ತಿ ಎನ್.ವಿ.ರಮಣ ಅವರ ನಿವೃತ್ತಿಯ ನಂತರ 49ನೇ ಸಿಜೆಐ ಆಗಿ ಅಧಿಕಾರ ಸ್ವೀಕರಿಸಿದ್ದ ಯು.ಯು.ಲಲಿತ್ ಮಂಗಳವಾರ (ನ.8) ತಮ್ಮ ಕರ್ತವ್ಯ ಮುಕ್ತಾಗೊಳಿಸಿದರು.

ನ್ಯಾಯಮೂರ್ತಿ ಚಂದ್ರಚೂಡ್ – ಭಾರತದ ಸುದೀರ್ಘ ಸೇವೆ ಸಲ್ಲಿಸಿದ ಮುಖ್ಯ ನ್ಯಾಯಮೂರ್ತಿ ವೈ.ವಿ.ಚಂದ್ರಚೂಡ್ ಅವರ ಪುತ್ರ. ಇಂದು 50ನೇ ನ್ಯಾಯಮೂರ್ತಿಯಾಗಿ ಚಂದ್ರಚೂಡ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಹಿಂದೆಯೇ ಚಂದ್ರಚೂಡ್ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು.

ಯಾರಿದು ಚಂದ್ರಚೂಡ್: 1959 ನವೆಂಬರ್ 11 ರಂದು ಜನಿಸಿದ ಡಿ.ವೈ ಚಂದ್ರಚೂಡ್ ಸುಪ್ರೀಂ ಕೋರ್ಟ್ ಮತ್ತು ಬಾಂಬೆ ಹೈಕೋರ್ಟ್ನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡಿದ್ದರು. ನಂತರ ಬಾಂಬೆ ಹೈಕೋರ್ಟ್ ಅವರಗೆ 1998ರ ಜೂನ್‌ನಲ್ಲಿ ಹಿರಿಯ ವಕೀಲರಾಗಿ ಪದೋನ್ನತಿ ನೀಡಿತ್ತು.

2000 ದಲ್ಲಿ ಬಾಂಬೆ ಹೈ ಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕವಾಗುವುದಕ್ಕೂ ಮೊದಲು 1998ರಿಂದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಅವರು ಕೆಲಸ ಮಾಡಿದ್ದರು.

2013ರ ಅಕ್ಟೋಬರ್ 31ರಂದು ನ್ಯಾ. ಚಂದ್ರಚೂಡ್ ಅವರನ್ನು ಅಲಾಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿತ್ತು. 2016ರ ಮೇ 13ರಂದು ನ್ಯಾ. ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದರು.

Leave a Reply

error: Content is protected !!
LATEST
BMTC ದಕ್ಷಿಣ ವಿಭಾಗದ 7 ಘಟಕಗಳಲ್ಲೂ ಚಾಲನಾ ಸಿಬ್ಬಂದಿಯೇ ಕಸಗುಡಿಸಬೇಕು- ಕಂಡು ಕಾಣದಂತೆ ವರ್ತಿಸುವ ಡಿಸಿ ಆಶಾಲತಾ ಮೇಡಂ! KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ