NEWSದೇಶ-ವಿದೇಶನಮ್ಮರಾಜ್ಯ

ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಸುಪ್ರೀಂ ಕೋರ್ಟ್ ವಿಭಾಗೀಯ ಪೀಠದ ಮುಂದೆ ಪಾರ್ಟಿ ಇನ್ ಪರ್ಸನ್ ಆಗಿ ಹಾಜರಾದ ವಕೀಲರೊಬ್ಬರು ಹಿಂದಿಯಲ್ಲಿ ವಾದ ಮಂಡಿಸಿದರು. ವಾದ ಮುಗಿಸಿದ ನಂತರ ವಕೀಲರಿಗೆ ಕೋರ್ಟ್‌ ಅಧಿಕೃತ ಭಾಷೆ ಇಂಗ್ಲಿಷ್ ಎಂದು ಸುಪ್ರೀಂ ಕೋರ್ಟ್ ವಿಭಾಗೀಯ ಪೀಠ ಮೌಖಿಕವಾಗಿ ನೆನಪಿಸಿತು.

ನ್ಯಾಯಮೂರ್ತಿ ಹೃಷಿಕೇಶ್ ರಾಯ್ ಮತ್ತು ನ್ಯಾಯಮೂರ್ತಿ ಎಸ್.ವಿ.ಎನ್. ಭಟ್ಟಿ ಅವರಿದ್ದ ವಿಭಾಗೀಯ ಪೀಠದ ಮುಂದೆ ಈ ಘಟನೆ ನಡೆಯಿತು.

ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕೋರ್ಟ್ ಭಾಷೆ ಇಂಗ್ಲಿಷ್ ಎಂಬುದನ್ನು ವಕೀಲರಿಗೆ ನೆನಪಿಸಿದ ಸುಪ್ರೀಂ ಕೋರ್ಟ್, ಮೊದಲು ನೀವು ಮಂಡಿಸಿದ ವಾದವನ್ನು ನ್ಯಾಯಾಲಯ ಅರ್ಥ ಮಾಡಿಕೊಳ್ಳುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿ ಹೇಳಿತು.

ನೀವು ಪಾರ್ಟಿ ಇನ್ ಪರ್ಸನ್ ಆಗಿ ವಾದ ಮಾಡಲು ಬಂದಿದ್ದೀರಿ. ಆದ್ದರಿಂದ ನಿಮ್ಮನ್ನು ಮಧ್ಯದಲ್ಲಿ ನಿಲ್ಲಿಸಿಲ್ಲ. ನೀವು ಏನನ್ನು ಹೇಳಲು ಬಯಸಿದ್ದೀರಿ ಎಂಬುದನ್ನು ಹೇಳಿದ್ದೀರಿ. ಆದರೆ, ನ್ಯಾಯಾಲಯದಲ್ಲಿ ವಿಚಾರಣೆಗಳು ಇಂಗ್ಲಿಷ್‌ನಲ್ಲಿ ಇವೆ ಎಂದು ಕಕ್ಷಿದಾರರಿಗೆ ನ್ಯಾಯಪೀಠ ಮೌಖಿಕವಾಗಿ ಹೇಳಿತು.

ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್ ಪತ್ನಿಯ ಕೋರಿಕೆ ಮೇರೆಗೆ ಕೇಸನ್ನು ಮತ್ತೊಂದು ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ವಕೀಲರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಹಾಕಿದ್ದು, ಇದರ ವಿಚಾರಣೆಯಲ್ಲಿ ಅವರು ಪಾರ್ಟಿ ಇನ್ ಪರ್ಸನ್ ಆಗಿ ಪೀಠದೆದುರು ಹಾಜರಾಗಿದ್ದರು.

Leave a Reply

error: Content is protected !!
LATEST
ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ KSRTC: ವಾರದೊಳಗೆ ವೇತನ ಹೆಚ್ಚಳದ 38ತಿಂಗಳ ಹಿಂಬಾಕಿ ನಿವೃತ್ತ ನೌಕರರ ಬ್ಯಾಂಕ್‌ ಖಾತೆಗೆ ಜಮಾ!