CrimeNEWSದೇಶ-ವಿದೇಶ

ನಟಿ ಲೀನಾ ಪೌಲೋಸ್‌ಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ವಂಚನೆ ಪ್ರಕರಣಗಳಲ್ಲಿ ಬಂಧಿತನಾಗಿರುವ ಬೆಂಗಳೂರು ಮೂಲದ ಸುಕೇಶ್‌ ಚಂದ್ರಶೇಖರ್‌ ಪ್ರಮುಖ ಆರೋಪಿಯಾಗಿರುವ 200 ಕೋಟಿ ರೂ. ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಪತ್ನಿ ನಟಿ ಲೀನಾ ಪೌಲೋಸ್‌ಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ

ಲೀನಾ ಪೌಲೋಸ್ ಮತ್ತು ದೆಹಲಿಯ ಸರ್ಕಾರ ನಡುವಣ ಪ್ರಕರಣ ಇದ್ದಾಗಿದ್ದು, ದೆಹಲಿ ಹೈಕೋರ್ಟ್‌ ಈ ಹಿಂದೆ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಆಗಿನಿಂದಲೂ ಪರಿಸ್ಥಿತಿಯಲ್ಲಿ ಬದಲಾವಣೆಯಾಗಿದೆ ಎಂದು ತೋರಿಸಲು ಯಾವುದೇ ಆಧಾರ ಇಲ್ಲ ಎಂದ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ. ತ್ರಿವೇದಿ ಅವರಿದ್ದ ದ್ವಿಸದಸ್ಯ ನ್ಯಾಯಪೀಠ ಈ ಆದೇಶ ನೀಡಿತು.

ದೆಹಲಿ ಹೈಕೋರ್ಟ್ ಈ ವರ್ಷದ ಜುಲೈನಲ್ಲಿ ಆಕೆಯ ಜಾಮೀನು ಅರ್ಜಿ ತಿರಸ್ಕರಿಸಿತ್ತು, ಹೀಗಾಗಿ ಆಕೆ ಸುಪ್ರೀಂ ಕೋರ್ಟ್‌ಗೆ ಪ್ರಸ್ತುತ ಅರ್ಜಿ ಸಲ್ಲಿಸಿದ್ದರು. ಮೇಲ್ನೋಟಕ್ಕೆ ಆರೋಪಿಗಳು ಅಪರಾಧದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ ಮತ್ತು ಅವರು ಸಲ್ಲಿಸಿದ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಯಾವುದೇ ಲೋಪವಿಲ್ಲ ಎಂದು ಹೈಕೋರ್ಟ್ ತಿಳಿಸಿತ್ತು.

ಲೀನಾ ಪೌಲೋಸ್ ಸಲ್ಲಿಸಿರುವ ಜಾಮೀನು ಅರ್ಜಿಯು ದೆಹಲಿ ಪೊಲೀಸರ ಆರ್ಥಿಕ ಅಪರಾಧ ದಳ (ಇಒಡಬ್ಲ್ಯು) ತನಿಖೆ ನಡೆಸುತ್ತಿರುವ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದೆ. ದೇಶದ ಬಹುರಾಷ್ಟ್ರೀಯ ಔಷಧ ಕಂಪನಿಯಾದ ರಾನ್‌ಬಾಕ್ಸಿಯ ಮಾಜಿ ಪ್ರವರ್ತಕರಾದ ಶಿವಿಂದರ್ ಸಿಂಗ್ ಮತ್ತು ಮಲ್ವಿಂದರ್ ಸಿಂಗ್ ಅವರ ಪತ್ನಿಯರಿಗೆ ಚಂದ್ರಶೇಖರ್ 200 ಕೋಟಿ ರೂ. ವಂಚಿಸಿದ್ದ ಎಂದು ದೆಹಲಿ ಪೊಲೀಸರು ಆರೋಪಿಸಿದ್ದರು.

ಕಾನೂನು ಸಚಿವಾಲಯದ ಅಧಿಕಾರಿಯಂತೆ ನಟಿಸಿದ್ದ ಸುಕೇಶ್‌, ಪ್ರಕರಣವೊಂದರಲ್ಲಿ ಶಿವಿಂದರ್ ಸಿಂಗ್ ಮತ್ತು ಮಲ್ವಿಂದರ್ ಸಿಂಗ್ ಅವರಿಗೆ ಜಾಮೀನು ಕೊಡಿಸಲು ತಮ್ಮಿಂದ ಕೋಟ್ಯಂತರ ರೂಪಾಯಿ ಪಡೆದಿದ್ದ ಎಂದು ಸಿಂಗ್‌ದ್ವಯರ ಪತ್ನಿಯರು ಆರೋಪಿಸಿದ್ದರು.

ಐಪಿಸಿ ಸೆಕ್ಷನ್ 170, 186, 384, 386, 388, 419, 420, 406, 409, 420, 468, 471, 353, 506, 120 ಬಿ, ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್‌ 66ಡಿ ಮತ್ತು 1999ರ ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯಿದೆಯ ಸೆಕ್ಷನ್‌ 3 ಮತ್ತು 4ರ ಅಡಿಯಲ್ಲಿ ಲೀನಾ ಪೌಲೋಸ್ ವಿರುದ್ಧ ಆರ್ಥಿಕ ಅಪರಾಧ ದಳ ಆರೋಪಪಟ್ಟಿ ಸಲ್ಲಿಸಿದೆ.

ನಕಲಿ ಕಂಪನಿಗಳನ್ನು ಸೃಷ್ಟಿಸಿ ತಮ್ಮ ಕೃತ್ಯದಿಂದ ದೊರೆತ ಹಣವನ್ನು ವಿನಿಯೋಗಿಸಲು ಪೌಲೋಸ್, ಚಂದ್ರಶೇಖರ್ ಮತ್ತಿತರರು ಹವಾಲಾ ಮಾರ್ಗಗಳನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.

Leave a Reply

error: Content is protected !!
LATEST
KKRTC ಬಸ್‌ನಲ್ಲಿ ಮರೆತುಹೋಗಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ ಮರಳಿಸಿ ಮಾನವೀಯತೆ ಮೆರೆದ ಕಂಡಕ್ಟರ್‌ ಪಿಡಿಒ ಹುದ್ದೆಗೆ ಸಿದ್ದಪಡಿಸಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ : ಅಭ್ಯರ್ಥಿಗಳಿಂದ ಪ್ರತಿಭಟನೆ ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷೆ ಸಕ್ಸಸ್‌ – ಈ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆ ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್