NEWSದೇಶ-ವಿದೇಶನಮ್ಮರಾಜ್ಯ

ಪ್ರಜಾಪ್ರಭುತ್ವಕ್ಕೆ ಸ್ವಾತಂತ್ರ್ಯ ನ್ಯಾಯಾಂಗವೇ ಅಡಿಪಾಯ: ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮದನ್ ಬಿ.ಲೋಕೂರ್

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೇಶದಲ್ಲಿ ನ್ಯಾಯಾಂಗದ ಸ್ವಾತಂತ್ರ್ಯವನ್ನು ಉಲ್ಲಂಘಿಸುವ ಪ್ರಯತ್ನ ಯಶಸ್ವಿಯಾಗದು ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮದನ್ ಬಿ. ಲೋಕೂರ್ ಅಭಿಪ್ರಾಯಪಟ್ಟಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನ್ಯಾಯಾಂಗ ನೇಮಕಾತಿ ಸಂಬಂಧ ಸರ್ಕಾರ ಹಾಗೂ ನ್ಯಾಯಾಂಗದ ನಡುವೆ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಎನ್‍ಡಿಟಿವಿ ಜತೆ ಮಾತನಾಡಿದ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.

ದೇಶದ ನ್ಯಾಯವ್ಯವಸ್ಥೆಯನ್ನು ಟೀಕಿಸಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರನ್ನು ತರಾಟೆಗೆ ತೆಗೆದುಕೊಂಡ ಅವರು, “ಇದು ಅಪ್ರಚೋದಿತ ಮತ್ತು ಆಘಾತಕಾರಿ” ಎಂದು ಬಣ್ಣಿಸಿದರು. ಯಾವುದೇ ಶಾಸನ ಅಥವಾ ಸಂವಿಧಾನ ತಿದ್ದುಪಡಿ ಮೂಲಕ ನ್ಯಾಯಾಂಗದ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲು ಸರ್ಕಾರಕ್ಕೆ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ನ್ಯಾಯಾಂಗ ಸ್ವಾತಂತ್ರ್ಯ ಸಂವಿಧಾನದ ಮೂಲ ಸಂರಚನೆಯ ಭಾಗ. ಪ್ರಜಾಪ್ರಭುತ್ವಕ್ಕೆ ಸ್ವಾತಂತ್ರ್ಯ ನ್ಯಾಯಾಂಗವೇ ಅಡಿಪಾಯ. ಆದ್ದರಿಂದ ಯಾವುದೇ ವಿಧದಲ್ಲಿ ನ್ಯಾಯಾಂಗದ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವ ಪ್ರಯತ್ನ ನಡೆದರೆ, ಅದು ಪ್ರಜಾಪ್ರಭುತ್ವದ ಮೇಲೆ ನಡೆಯುವ ಹಲ್ಲೆ ಎನಿಸುತ್ತದೆ ಎಂದು ನ್ಯಾಯಮೂರ್ತಿ ಲೋಕೂರ್ ಹೇಳಿದರು.

ಇದಕ್ಕೂ ಮುನ್ನ ಎನ್‍ಡಿಟಿವಿ ನಡೆಸಿದ ಸಂದರ್ಶನದಲ್ಲಿ ಹಿರಿಯ ವಕೀಲ ಕಪಿಲ್ ಸಿಬಾಲ್ ಅವರು, ದೇಶದ ನ್ಯಾಯಾಂಗ ಸ್ವಾತಂತ್ರ್ಯ, ಅವರು ವಶಪಡಿಸಿಕೊಳ್ಳಬೇಕಾದ ಕೊನೆಯ ಕೋಟೆ. ಚುನಾವಣಾ ಆಯೋಗದಿಂದ ಹಿಡಿದು ರಾಜ್ಯಪಾಲರು, ವಿವಿಗಳ ಕುಲಪತಿಗಳು, ಕಾನೂನು ಜಾರಿ ನಿರ್ದೇಶನಾಲಯ, ಸಿಬಿಐ, ಎನ್‍ಐಎ ಹಾಗೂ ಮಾಧ್ಯಮವೂ ಸೇರಿದಂತೆ ಇತರ ಎಲ್ಲ ಸಂಸ್ಥೆಗಳನ್ನು ಅವರು ವಶಪಡಿಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದರು.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ