Please assign a menu to the primary menu location under menu

NEWSನಮ್ಮರಾಜ್ಯಶಿಕ್ಷಣ-

ಸರ್ವೇ ನಂ-97 ಪುಸ್ತಕ ಮನುಷ್ಯನ ಬದುಕಿನ ಸಂಕಟಗಳಿಗೆ ಕನ್ನಡಿ ಇದ್ದಂತೆ: ರಘುನಾಥ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅನಿಲ್ ಗುನ್ನಾಪೂರ ಅವರು ಬರೆದ ‘ಸರ್ವೇ ನಂಬರ್-97’ ಎಂಬ ಕಥಾಸಂಕಲನವನ್ನು ಹೊಂಗಿರಣ ಪ್ರಕಾಶನ, ಬುಕ್ ಬ್ರಹ್ಮ ಹಾಗೂ ನ್ಯಾಯ ಸ್ಪಂದನ ಬೆಂಗಳೂರು, ಓದು ಗೆಳೆಯರ ಬಳಗ, ಬಾಗಲಕೋಟೆ ಇವರ ಸಹಯೋಗದಲ್ಲಿ ಭಾನುವಾರ ಬೆಳಗ್ಗೆ 10.30ಕ್ಕೆ ಕನ್ನಡ ಸಾಹಿತ್ಯ ಪರಿಷತ್ ನ ಶ್ರೀಕೃಷ್ಣರಾಜ ಪರಿಷತ್ತು ಮಂದಿರದಲ್ಲಿ  ಬಿಡುಗಡೆ ಮಾಡಲಾಯಿತು.

ಹಿರಿಯ ಕವಿ ಹಾಗೂ ಚಿಂತಕ ಡಾ. ಮೂಡ್ನಾಕೂಡು ಚಿನ್ನಸ್ವಾಮಿ, ರಘುನಾಥ ಚ.ಹ ಹಾಗೂ ಬಿಬಿಎಂಪಿ ವಲಯ ಆಯುಕ್ತರು ಮತ್ತು ಯಲಹಂಕ ವಲಯದ ಕರೀಗೌಡ (ಐಎಎಸ್), ಕವಯಿತ್ರಿ ಜ.ನಾ.ವೇಜಶ್ರೀ ಮತ್ತಿತರರು ಗಣ್ಯರು ಬಿಡುಗಡೆಗೊಳಿಸಿದರು.

ಈ ವೇಳೆ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಮಾತನಾಡಿ, ನಮ್ಮ ಭೂ ಮಾಪನ ಇಲಾಖೆಯ ಇತಿಹಾಸವು ಕನ್ನಡ ಸಾಹಿತ್ಯದಲ್ಲಿ ಹೆಚ್ಚೆಚ್ಚು ಬರಲೆಂದು ಆಶಿಸುತ್ತ, ಅನಿಲ ಅವರು ಬರೆದ ಕತೆಗಳು ಹಲವು ವಿಶ್ವವಿದ್ಯಾಲಯಗಳಿಗೆ ಪಠ್ಯವಾಗಿವೆ ಹಾಗೂ ಪ್ರತಿಷ್ಠಿತ ಬಹುಮಾನವನ್ನು ಪಡೆದಿರುವ ಅನಿಲ ಗುನ್ನಾಪೂರ ಅವರಂತಹ ಲೇಖಕರನ್ನು ಮತ್ತು ಸಾಹಿತ್ಯಾಸಕ್ತರನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.

ಅಧ್ಯಕ್ಷತೆ ವಹಿಸಿದ ರಘುನಾಥ ಚ.ಹ. ಮಾತನಾಡಿ, ಇಂಡಿ ತಾಲೂಕಿನ ಲೇಖಕರು, ಪ್ರಸ್ತುತ ಬಾಗಲಕೋಟೆಯಲ್ಲಿ ಭೂಮಾಪಕರಾಗಿ ಸೇವೆ ಸಲ್ಲಿಸುತ್ತಿರುವ ಅನಿಲ್ ಗುನ್ನಾಪೂರ ಅವರ ಎರಡನೇ ಪುಸ್ತಕದಲ್ಲಿ ತಮ್ಮ ಅನುಭವಕ್ಕೆ ನಿಲುಕಿದ ಜೊತೆಯ ಜೀವಗಳ ಜೀವನವನ್ನು ಬೇರೆ ಜೀವಗಳಿಗೆ ಮುಟ್ಟಿಸುವಲ್ಲಿ ಯಶಸ್ವಿಯಾಗಿರುವುದು ಇದೊಂದು ವಿಶಿಷ್ಟವಾದದ್ದು, ಹಾಗೆ ಇನ್ನುಳಿದ ಕಥೆಗಳಲ್ಲೂ ಮನುಷ್ಯನ ಬದುಕಿನ ಸಂಕಟಗಳಿಗೆ ಕನ್ನಡಿ ಹಿಡಿದಿರುವರು ವಿಶೇಷವಾಗಿದೆ ಎಂದರು.

ಇದೇ ಕಾರ್ಯಕ್ರಮದಲ್ಲಿ ಶೋಭಾ ಗುನ್ನಾಪುರ, ಹೈಕೋರ್ಟ್ ನ್ಯಾಯವಾದಿ ಸುನಿಲ್ ಗುನ್ನಾಪುರ, ವಿಶ್ವವಿದ್ಯಾಲಯದ ಪ್ರಾಧ್ಯಾಪಕರು, ಸಾಹಿತ್ಯ ಆಸಕ್ತರು, ಮತ್ತಿತರು ಭಾಗವಹಿಸಿದ್ದರು.

ಫೋಟೋ ಕ್ಯಾಪ್ಶನ್: ಕನ್ನಡ ಸಾಹಿತ್ಯ ಪರಿಷತ್ ನ ಶ್ರೀಕೃಷ್ಣರಾಜ ಪರಿಷತ್ತು ಮಂದಿರದಲ್ಲಿ ಅನಿಲ್ ಗುನ್ನಾಪೂರ ಅವರ ‘ಸರ್ವೇ ನಂಬರ್-97’ ಪುಸ್ತಕವನ್ನು ಚಿಂತಕ ಡಾ. ಮೂಡ್ನಾಕೂಡು ಚಿನ್ನಸ್ವಾಮಿ, ರಘುನಾಥ ಚ.ಹ ಹಾಗೂ ಬಿಬಿಎಂಪಿ ವಲಯ ಆಯುಕ್ತ ಕರೀಗೌಡ (ಐಎಎಸ್), ಕವಯಿತ್ರಿ ಜ.ನಾ.ತೇಜಶ್ರೀ, ಲೇಖಕ ಅನಿಲ್ ಗುನ್ನಾಪುರ ಗಣ್ಯರು ಬಿಡುಗಡೆಗೊಳಿಸಿದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಕೊಟ್ಟ ಚುನಾವಣೆ ಪ್ರಣಾಳಿಕೆಯ ಭರವಸೆ ಈಡೇರಿಸುವತ್ತಾ ಕಾಂಗ್ರೆಸ್‌ ಸರ್ಕಾರ...!? KSRTC 4 ನಿಗಮಗಳ ಬಸ್‌ ಚೀಟಿ ದರ ಪರಿಷ್ಕರಣೆಯಿಂದ ತಲೆದೋರಿದ ಚಿಲ್ಲರೆ ಸಮಸ್ಯೆ-ನಿರ್ವಾಹಕರು ಪ್ರಯಾಣಿಕರ ನಡುವೆ ಫೈಟ್‌ KSRTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ NWKRTC: ನಿರ್ವಾಹಕ ಆತ್ಮಹತ್ಯೆಗೆ ಯತ್ನ- ಅಮಾನತು ಮಾಡುವ ಉದ್ದೇಶದಿಂದಲೇ ಮೆಮೋ ಕೊಟ್ಟ ಆರೋಪ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನೈರ್ಮಲ್ಯದ ಕೊರತೆ: ಕಸ ಮುಕ್ತ ಅಭಿಯಾನ ಕನ್ನಡ ನುಡಿ ಪ್ರತಿಯೊಬ್ಬ ಕನ್ನಡಿಗನ ಉಸಿರಾಗಬೇಕು: ಅಂದಾನೆಪ್ಪ ವಿಭೂತಿ ಸರ್ವೇ ನಂ-97 ಪುಸ್ತಕ ಮನುಷ್ಯನ ಬದುಕಿನ ಸಂಕಟಗಳಿಗೆ ಕನ್ನಡಿ ಇದ್ದಂತೆ: ರಘುನಾಥ ನ್ಯೂಡೆಲ್ಲಿ: ದಲೈವಾಲ ಪ್ರಾಣಕ್ಕೆ ಕುತ್ತು ಬಂದರೆ ದೇಶದ ರೈತರು ಕೇಂದ್ರ ಸರ್ಕಾರದ ಮರಣ ಶಾಸನ ಬರೆಯಬೇಕಾಗುತ್ತದೆ ಎಚ್ಚರ ಜ್ವರ ಬಂದಾಗ ಎಳನೀರು ಕುಡಿಯುವುದು ಒಳ್ಳೆಯದೇ..ಏಕೆಂದರೆ? ಬಿಜೆಪಿ ಸರ್ಕಾರದಲ್ಲಿ ನಿರಂತರವಾಗಿ ವರ್ಷಕ್ಕೆ ಎರಡೆರಡು ಬಾರಿ ಬಸ್ ಟಿಕೆಟ್‌ ದರ ಹೆಚ್ಚಳ: ಪಟ್ಟಿ ರಿಲೀಸ್​ ಮಾಡಿದ ಸಾರಿಗ...