ಕೆಎಸ್‌ಆರ್‌ಟಿಸಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕುರಿತ ಸಂಪೂರ್ಣ ಮಾಹಿತಿ: https://ksrtcarogya.in/ 
ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೂತ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ಸುಶೀಲಾ ಅವರನ್ನು ನೇಮಿಸಿ ಸರ್ಕಾರ ಮಂಗಳವಾರ (ಜು.8) ಆದೇಶ ಹೊರಡಿಸಿದೆ.
ಪ್ರಸ್ತುತ ಯಾದಗಿರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿರುವ IAS ಅಧಿಕಾರಿ ಸುಶೀಲಾ ಅವರನ್ನು ಕೂಡಲೇ ಜಾರಿಗೆ ಬರುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ರಾಚಪ್ಪ (KAS ಹಿರಿಯ ಶ್ರೇಣಿ) ಈವರೆಗೂ ಸೇವೆ ಸಲ್ಲಿಸಿದ್ದಾರೆ. ಇನ್ನು ನೂತನ ಎಂಡಿ ಅವರಿಗೆ ಪ್ರಮುಖವಾಗಿ ನೌಕರರ ವೇತನ ಹೆಚ್ಚಳ ಹಾಗೂ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಕೊಡಿಸುವುದು ಸೇರಿದಂತೆ ಹಲವು ಸವಾಲುಗಳನ್ನು ಎದುರಿಸಬೇಕಿದೆ.
ಸರ್ಕಾರದ ಮಟ್ಟದಲ್ಲಿ ಮಾತುಕತೆ ಮಾಡಿ ನೌಕರರಿಗೆ ಕಾನೂನಾತ್ಮಕವಾಗಿ ಸಿಗಬೇಕಿರುವ ಸೌಲಭ್ಯಗಳನ್ನು ಕೊಡಿಸುವ ಜತೆಗೆ ನಿಗಮದಲ್ಲಿರುವ ಆಂತರಿಕ ಕಲಹ ನೌಕರರ ಮೇಲೆ ಕೆಲ ಅಧಿಕಾರಿಗಳು ಎಸಗುತ್ತಿರುವ ದೌರ್ಜನ್ಯವನ್ನು ತಡೆಯುವ ನಿಟ್ಟಿನಲ್ಲಿ ಪ್ರಮುಖ ಪಾತ್ರವಹಿಸುವ ಸವಾಲು ಕೂಡ ಇದೆ.
ಈ ಎಲ್ಲ ಸವಾಲುಗಳನ್ನು ನೀರು ಕುಡಿದಷ್ಟೆ ಸಲಿಸಾಗಿ ನಿಭಾಹಿಸುವ ಶಕ್ತಿ ಮತ್ತು ಯುಕ್ತಿ ನಿಮಗೆ ಸಿಗಲಿ ಎಂದು ಸಮಸ್ತ ನಿಗಮದ ನೌಕರರ ಪರವಾಗಿ ವಿಜಯಪಥದ ಹಾರೈಕೆ.
Related
