CrimeNEWSದೇಶ-ವಿದೇಶ

5 ದಿನದ ಹಿಂದಷ್ಟೇ ಉದ್ಘಾಟನೆಯಾಗಿದ್ದ ತೂಗು ಸೇತುವೆ ಕುಸಿದು 132 ಮಂದಿ ಸಾವು, ನೂರಾರು ಜನರಿಗೆ ಗಾಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಅಹಮದಾಬಾದ್: ಗುಜರಾತ್‍ನ ಮೊರ್ಬಿ ಜಿಲ್ಲೆಯಲ್ಲಿ ಐದು ದಿನಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದ ಕೇಬಲ್‌ ಸೇತುವೆ (ತೂಗು ಸೇತುವೆ ) ಕುಸಿದು ಸಂಭವಿಸಿದ ದುರಂತದಲ್ಲಿ ಈವರೆಗೂ 132 ಮಂದಿ ಬಲಿಯಾಗಿದ್ದಾರೆ.

ಮಚ್ಚು ನದಿಗೆ ನಿರ್ಮಿಸಿರುವ ಮೊರ್ಬಿ ತೂಗು ಸೇತುವೆ ಭಾನುವಾರ ಕುಸಿದು ಬಿದ್ದು ದುರಂತ ಸಂಭವಿಸಿದೆ. ನಾಪತ್ತೆಯಾದವರಿಗಾಗಿ, ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಎನ್‍ಡಿಆರ್‌ಎಫ್, ವಾಯುಪಡೆ, ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯ ಮುಂದುವರಿದಿದೆ. ದೋಣಿ, ಬೋಟ್‍ಗಳ ಸಹಾಯದಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ. ಈಗಾಗಲೇ 177ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದ್ದಾರೆ.

140ಕ್ಕೂ ಅಧಿಕ ವರ್ಷಗಳ ಇತಿಹಾಸ ಇರುವ ಈ ತೂಗು ಸೇತುವೆ ಹಲವು ಅಚ್ಚರಿಗಳಿಗೆ ಕಾರಣವಾಗಿದೆ. ಕೇಬಲ್‍ಗಳ ಸಹಾಯದಿಂದ ಬ್ರಿಟಿಷರು ನಿರ್ಮಿಸಿರುವ ಅತಿ ಉದ್ದದ ತೂಗು ಸೇತುವೆ ಇದಾಗಿದೆ. ನಿನ್ನೆ ರಜೆ ದಿನದ ಹಿನ್ನೆಲೆ ಈ ಪ್ರದೇಶದಲ್ಲಿ ಜನ ದಟ್ಟನೆ ಇತ್ತು. ನೂರು ಜನರ ಸಾಮರ್ಥ್ಯಯುಳ್ಳ ಸೇತುವೆ ಮೇಲೆ ಐದು ನೂರಕ್ಕೂ ಅಧಿಕ ಮಂದಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕೇಬಲ್ ಕಟ್ ಆಗಿ ಧರಗೆ ಉರುಳಿದೆ ಎನ್ನಲಾಗುತ್ತಿದೆ.

ಶಿಥಿಲಗೊಂಡಿದ್ದ ಹಿನ್ನೆಲೆ 2 ಕೋಟಿ ರೂ. ವೆಚ್ಚದಲ್ಲಿ ನವೀಕರಿಸಲಾಗಿತ್ತು. ನವೀಕರಣಗೊಂಡ ಸೇತುವೆಯನ್ನು ಐದು ದಿನಗಳ ಹಿಂದೆ ಉದ್ಘಾಟಿಸಲಾಗಿತ್ತು. ಮೂರು ದಿನದ ಹಿಂದೆ ಜನರ ಪ್ರವೇಶಕ್ಕೆ ಮುಕ್ತಗೊಳಿಸಲಾಗಿತ್ತು. ಈಗ ಏಕಾಏಕಿ ಕುಸಿದಿರುವುದು ಅಕ್ರಮ ಕಾಮಗಾರಿ ಅನುಮಾನಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ. ಇದನ್ನೂ ಓದಿ: 5 ದಿನಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದ ಗುಜರಾತ್‌ನ ಕೇಬಲ್‌ ಸೇತುವೆ ಕುಸಿತ – ಅಪಾಯದಲ್ಲಿ 100ಕ್ಕೂ ಹೆಚ್ಚು ಮಂದಿ

ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಸಾಧ್ಯತೆ ಇದೆ. ಈಗಾಗಲೇ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿರುವ ಅವರು ಎರಡು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ಐವತ್ತು ಸಾವಿರ ಪರಿಹಾರ ನೀಡಿದ್ದಾರೆ. ಪ್ರಕರಣ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ.

ಇತ್ತ ಗಾಯಾಳುಗಳಿಗೆ ತಕ್ಷಣದ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದರ್ ಪಟೇಲ್ ಹೇಳಿದ್ದಾರೆ.

ಮೋರ್ಬಿಯಲ್ಲಿ ತೂಗು ಸೇತುವೆ ಕುಸಿತದ ದುರಂತದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ವ್ಯವಸ್ಥೆಯಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಗಾಯಾಳುಗಳಿಗೆ ತಕ್ಷಣದ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ನಾನು ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ