CrimeNEWSದೇಶ-ವಿದೇಶ

ಕೋರ್ಟ್‌ ಆವರಣದಲ್ಲೇ ವಕೀಲರಿಂದ ಪೇಟಿಎಂ ಕ್ಯೂಆರ್‌ ಕೋಡ್‌ ಮೂಲಕ ಭಕ್ಷೀಸು ಪಡೆಯುತ್ತಿದ್ದ ನೌಕರ ಮಾನತು

ವಿಜಯಪಥ ಸಮಗ್ರ ಸುದ್ದಿ

ಅಲಹಾಬಾದ್: ಕೋರ್ಟ್‌ ಆವರಣದಲ್ಲೇ ವಕೀಲರಿಂದ ಇನಾಮಿನ ರೂಪದಲ್ಲಿ ಪೇಟಿಎಂನಲ್ಲಿ ಹಣ ಸಂಗ್ರಹಿಸುತ್ತಿದ್ದ ಜಮಾದಾರ್‌ ಒಬ್ಬರನ್ನು ಗುರುವಾರ ಅಲಹಾಬಾದ್‌ ಹೈಕೋರ್ಟ್‌ ಅಮಾನತು ಮಾಡಿದೆ.

ನ್ಯಾಯಮೂರ್ತಿ ಅಜಿತ್‌ ಸಿಂಗ್‌ ಅವರ ನ್ಯಾಯಾಲಯದ ಜಮಾದಾರ್‌ ಆಗಿರುವ ರಾಜೇಂದ್ರ ಕುಮಾರ್‌ ಎಂಬುವರೆ ಅಮಾನತುಗೊಂಡವರು. ಪೇಟಿಎಂನಲ್ಲಿ ಹಣ ಸಂಗ್ರಹಿಸುತ್ತಿದ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ರಾಜೇಶ್‌ ಬಿಂದಾಲ್‌ ಅವರು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ನ್ಯಾಯಾಲಯದಲ್ಲಿ ಪ್ರಾಕ್ಟೀಸ್‌ ಮಾಡುತ್ತಿರುವ ವಕೀಲರಿಂದ ಭಕ್ಷೀಸು ಪಡೆಯಲು ಪೇಟಿಎಂ ವಾಲೆಟ್‌/ ಕ್ಯೂಆರ್‌ ಕೋಡ್‌ ಅನ್ನು ಜತೆಗಿಟ್ಟುಕೊಂಡಿದ್ದ ಜಮಾದಾರ್‌ ರಾಜೇಂದ್ರ ಕುಮಾರ್‌ ವಿರುದ್ದ ಕ್ರಮಕೈಗೊಳ್ಳಲು ಮುಖ್ಯ ನ್ಯಾಯಮೂರ್ತಿ ಬಿಂದಾಲ್‌ ಅವರಿಗೆ ನ್ಯಾ. ಅಜಿತ್ ಸಿಂಗ್‌ ಪತ್ರ ಬರೆದಿದ್ದರು.

ರಿಜಿಸ್ಟ್ರಾರ್‌ ಜನರಲ್‌ ಆಶೀಷ್‌ ಗರ್ಗ್‌ ಅವರು ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, “ನ್ಯಾ. ಅಜಿತ್‌ ಸಿಂಗ್‌ ಅವರು ಪತ್ರದ ಮುಖೇನ ಮುಖ್ಯ ನ್ಯಾಯಮೂರ್ತಿ ಅವರಿಗೆ ರಾಜೇಂದ್ರ ಕುಮಾರ್‌ ಅವರು ಪೇಟಿಎಂ ಮೂಲಕ ಹಣ ಸಂಗ್ರಹಿಸುತ್ತಿರುವ ವಿಷಯ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣಕ್ಕೆ ಜಾರಿಗೆ ಬರುವಂತೆ ಅವರನ್ನು ಅಮಾನತು ಮಾಡಲಾಗಿದೆ ಎಂದು ವಿವರಿಸಿದರು.

ಅಮಾನತು ಸಂದರ್ಭದಲ್ಲಿ ರಾಜೇಂದ್ರ ಕುಮಾರ್‌ ಅವರನ್ನು ನಜರತ್‌ ವಿಭಾಗಕ್ಕೆ ಹಾಕಲಾಗಿದ್ದು, ರಿಜಿಸ್ಟ್ರಾರ್‌ ಅನುಮತಿ ಪಡೆಯದೇ ಹೊರಹೋಗದಂತೆ ಆದೇಶ ಮಾಡಲಾಗಿದೆ. ಬೇರೆ ಯಾವುದೇ ಉದ್ಯೋಗ, ವ್ಯವಹಾರ, ವೃತ್ತಿಯಲ್ಲಿ ತೊಡಗಿಕೊಂಡಿಲ್ಲ ಎಂಬುದರ ಕುರಿತು ಸರ್ಟಿಫಿಕೇಟ್‌ ಸಲ್ಲಿಸಿದ ಬಳಿಕ ರಾಜೇಂದ್ರ ಕುಮಾರ್‌ಗೆ ಜೀವನ ಭತ್ಯೆ ಪಾವತಿಸಲಾಗುವುದು ಎಂದು ಅಮಾನತು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ