NEWSನಮ್ಮಜಿಲ್ಲೆನಮ್ಮರಾಜ್ಯ

ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ – ರೈತ ಮುಖಂಡರ ಆಗ್ರಹ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ಭತ್ತದ ಬೆಂಬಲ ಬೆಲೆಗೆ ಹೆಚ್ಚುವರಿಯಾಗಿ ಕ್ವಿಂಟಾಲ್‌ಗೆ 500 ರೂ ಪ್ರೋತ್ಸಾಹ ಧನ ನೀಡಿ ತುರ್ತಾಗಿ ಖರೀದಿ ಕೇಂದ್ರ ತೆರೆಯಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್ ಸುರೇಶ್‌ ಆಚಾರ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಇಂದು ಪಟ್ಟಣದ ತಹಸೀಲ್ದಾರ್ ಕಚೇರಿ ಮುಂದೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್‌ ನೇತೃತ್ವದಲ್ಲಿ ಜಮಾಯಿಸಿದ ರೈತ ಮುಖಂಡರು ಹಾಗೂ ರೈತರು, ಈ ಸಂಬಂಧ ಮೈಸೂರು ಜಿಲ್ಲೆಯಲ್ಲಿ ಕೆ.ಆರ್.ನಗರ, ನಂಜನಗೂಡು, ತಿ.ನರಸೀಪುರದ ಹೆಚ್ಚು ಪ್ರದೇಶದಲ್ಲಿ ರೈತರು ಭತ್ತದ ಬೆಳೆದಿದ್ದಾರೆ.

ಹೀಗಾಗಿ ರಾಜ್ಯ ಸರ್ಕಾರ ಕನಿಷ್ಠ ಬೆಂಬಲ ಬೆಲೆ 2320 ರೂ.ಗಳು ನಿಗದಿ ಪಡಿಸಲಾಗಿದ್ದು ಇದು ರೈತರ ಉತ್ಪಾದನಾ ವೆಚ್ಚಕ್ಕಿಂತ ಕಡಿಮೆಯಾಗಿದೆ, ಆದ್ದರಿಂದ ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್‌ಗೆ 500 ರೂ. ಹೆಚ್ಚುವರಿಯಾಗಿ ಪ್ರೋತ್ಸಾಹ ಧನ ನೀಡುವ ಮೂಲಕ ರೈತರಿಗೆ ಆಗುವ ನಷ್ಟ ತಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈಗಾಗಲೇ ಕೇರಳ, ಒಡಿಸಾ, ತೆಲಂಗಾಣ ರಾಜ್ಯಗಳು ಇದೇ ರೀತಿ ಪ್ರೋತ್ಸಾಹ ಧನ ನೀಡುತ್ತಿವೆ, ಆದ್ದರಿಂದ ತಾವು ತಾಲೂಕಿನ ರೈತರ ರಕ್ಷಣೆಗಾಗಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ತಾಲೂಕಿನ ಕಬಿನಿ – ಕಾವೇರಿ ಅಚ್ಚು ಕಟ್ಟು ಭಾಗದಲ್ಲಿ ಭತ್ತದ ಬೆಳೆ ಕಟಾವು ಕೆಲವೇ ದಿನಗಳಲ್ಲಿ ಆರಂಭವಾಗುತ್ತಿದ್ದು ಭತ್ತದ ಬೆಲೆ ದಿನೇದಿನೇ ಕುಸಿಯುತ್ತಿದೆ, ಭತ್ತದ ಬೆಲೆ ಮತ್ತಷ್ಟು ಕುಸಿತವಾದರೆ ರೈತರು ತೀವ್ರ ನಷ್ಟ ಅನುಭವಿಸಬೇಕಾಗುತ್ತದೆ, ಆದ್ದರಿಂದ ತಾವು ಮುಂಜಾಗ್ರತಾ ಕ್ರಮ ಕೈಗೊಂಡು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಕೂಡಲೇ ಆರಂಭಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಅಲ್ಲದೆ ಭತ್ತಕ್ಕೆ ಕೇಂದ್ರ ಸರ್ಕಾರ ನಿಗದಿ ಪಡಿಸಿರುವ ಕನಿಷ್ಠ ಬೆಂಬಲ ಬೆಲೆ 2320 ರೂ.ಗಿಂತ ಕಡಿಮೆ ಬೆಲೆಗೆ ರೈತರು ಮಾರಾಟ ಮಾಡಬಾರದು, ರೈತರನ್ನು ವಂಚಿಸಿ ಬಂಡವಾಳ ಶಾಹಿಗಳು ಹಾಗೂ ಮಧ್ಯವರ್ತಿಗಳು ಕಡಿಮೆ ಬೆಲೆಗೆ ಖರೀದಿ ಮಾಡಿದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕಿರಗಸೂರು ಶಂಕರ್, ಜಿಲ್ಲಾ ಕಾರ್ಯದರ್ಶಿ ಬಿ.ಪಿ.ಪರಶಿವಮೂರ್ತಿ, ತಾಲೂಕು ಉಪಾಧ್ಯಕ್ಷ ಹೆಗ್ಗುರು ರಂಗರಾಜು, ತಾಲೂಕು ಪ್ರಧಾನ ಕಾರ್ಯದರ್ಶಿ ಪ್ರಸಾದ್ ನಾಯಕ್, ತಾಲೂಕು ಸಂಘಟನಾ ಕಾರ್ಯದರ್ಶಿ ಕುರುಬೂರು ಪ್ರದೀಪ್, ರೈತ ಮುಖಂಡರಾಗ ಅರುಣ್ ಕುಮಾರ್, ಬನ್ನೂರು ಸೂರಿ, ಕುಂತನಹಳ್ಳಿ ಕುಳ್ಳೇಗೌಡ ಮತ್ತಿತರರು ಇದ್ದರು.

Leave a Reply

error: Content is protected !!
LATEST
2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ