NEWSಕ್ರೀಡೆದೇಶ-ವಿದೇಶ

ಆಡಿಲೇಡ್: ಟಿ20 ವಿಶ್ವಕಪ್‍ನ 2ನೇ ಸೆಮಿಫೈನಲ್: ಭಾರತ – ಇಂಗ್ಲೆಂಡ್ ನಡುವೆ ಸೆಣೆಸಾಟ

ವಿಜಯಪಥ ಸಮಗ್ರ ಸುದ್ದಿ

ಆಡಿಲೇಡ್: ಟಿ20 ವಿಶ್ವಕಪ್‍ನ ಎರಡನೇ ಸೆಮಿಫೈನಲ್ ಕಾದಾಟದಲ್ಲಿ ಇಂದು ಭಾರತ ಹಾಗೂ ಇಂಗ್ಲೆಂಡ್ ನಡುವೆ ಸೆಣೆಸಾಟವಿದೆ. ಹೀಗಾಗಿ ವಿಶ್ವಕ್ರಿಕೆಟ್ ಪ್ರೇಮಿಗಳ ಚಿತ್ತ ಇಂದು ಆಡಿಲೇಡ್‍ನತ್ತ ನೆಟ್ಟಿದೆ.

ಇನ್ನು ಇಂದು ಗೆದ್ದ ತಂಡ ಫೈನಲ್‍ನಲ್ಲಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಈಗಾಗಲೇ ಎರಡು ತಂಡಗಳು ಬಲಿಷ್ಠ ಬ್ಯಾಟಿಂಗ್ ಮತ್ತು ಬೌಲಿಂಗ್ ಪಡೆಯನ್ನು ಹೊಂದಿವೆ. ಭಾರತಕ್ಕೆ ಬ್ಯಾಟಿಂಗ್ ಬಲವಾದರೆ, ಅತ್ತ ಇಂಗ್ಲೆಂಡ್‍ಗೆ ಆಲ್‍ರೌಂಡರ್‌ಗಳ ಬಲವಿದೆ. ಹೀಗಾಗಿ ಇಂದು ನಡೆಯುವ ಈ ಪಂದ್ಯ ಬಹಳ ರೋಚಕತೆ ಮೂಡಿಸಲಿದೆ ಎಂದೇ ಅಭಿಮಾನಿಗಳು ಹೇಳುತ್ತಿದ್ದಾರೆ.

ಭಾರತಕ್ಕೆ ರೋಹಿತ್, ರಾಹುಲ್, ಕೊಹ್ಲಿ, ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಶಕ್ತಿಯಾದರೆ, ಅತ್ತ ಅಲೆಕ್ಸ್ ಹೇಲ್ಸ್, ಬಟ್ಲರ್, ಅಲಿ, ಬೆನ್‍ಸ್ಟೋಕ್ಸ್ ಬ್ಯಾಟಿಂಗ್ ಬಿರುಗಾಳಿಗಳು ಹಾಗಾಗಿ ಆಡಿಲೇಡ್‍ನಲ್ಲಿ ರನ್ ಮಳೆ ಸುರಿಯುವ ಸಾಧ್ಯತೆ ಇದೆ. ಇಂದು ಗೆದ್ದ ತಂಡ ನ.13 ರಂದು ಈಗಾಗಲೇ ಫೈನಲ್ ಪ್ರವೇಶಿಸಿರುವ ಪಾಕಿಸ್ತಾನ ತಂಡವನ್ನು ಎದುರಿಸಲಿದ್ದು, ಸೋತ ತಂಡ ಮನೆ ದಾರಿ ಹಿಡಿಯಲಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಪಂದ್ಯ ಅತ್ಯಂತ ಮಹತ್ವ ಪಡೆದುಕೊಂಡಿದ್ದು, 2013ರ ಚಾಂಪಿಯನ್ಸ್ ಟ್ರೋಫಿ ಗೆಲುವಿನ ಬಳಿಕ ಟೀಂ ಇಂಡಿಯಾ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ.

ಇದೀಗ ಇಂಗ್ಲೆಂಡ್ ಮಣಿಸಿ, ಫೈನಲ್ ಪ್ರವೇಶಿಸಿ ಟ್ರೋಫಿ ಗೆಲ್ಲುವ ಇರಾದೆಯಲ್ಲಿ ಭಾರತವಿದ್ದರೆ, ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಮಣಿಸಬೇಕಾದ ಸವಾಲು ಟೀಂ ಇಂಡಿಯಾ ಮುಂದಿದೆ. ಇತ್ತ ಅಭಿಮಾನಿಗಳೂ ಕೂಡ ಇದೆ ಆಸೆಯಲ್ಲಿದ್ದಾರೆ.

Leave a Reply

error: Content is protected !!
LATEST
KSRTC ನೌಕರರ ಮೇಲೆ ತಿಪಟೂರು ಘಟಕ ವ್ಯವಸ್ಥಾಪಕರ ದರ್ಪ, ಏಕ ವಚನ ಪ್ರಯೋಗ! ವಂಚಕರ ನಂಬಿ ಹಣ ದುಪ್ಪಟ್ಟು ಆಸೆಗೆ ಬಿದ್ದ ಮಹಿಳೆ ಕೋಟಿ ರೂ. ಕಳೆದುಕೊಂಡರು!! ಮೊಮ್ಮಗನ ಹಗರಣ ತಾತನಿಗೆ ಮುಳುವಾಯಿತೇ!! ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರ ಬೆನ್ನೆಲ್ಲೇ ಮಾಜಿ ಸಚಿವ ಎಚ್.ಡಿ.ರೇವಣ್ಣ ಬಂಧನ ಪ್ರಜ್ವಲ್ ರೇವಣ್ಣ ಸರಣಿ ಅತ್ಯಾಚಾರ ಪ್ರಕರಣದ ನೊಂದ ಮಹಿಳೆಯರ ಬೆಂಬಲಕ್ಕೆ ನಿಂತ ಆಮ್ ಆದ್ಮಿ ಪಾರ್ಟಿ ಬಿಜೆಪಿ ಗೆದ್ದರೆ ಸರ್ವಾಧಿಕಾರ ಆಡಳಿತ ಬರುವುದರಲ್ಲಿ ಯಾವುದೇ ಸಂಶಯವಿಲ್ಲ: ಮುಖ್ಯಮಂತ್ರಿ ಚಂದ್ರು ಬಿಸಿಲ ಝಳಕ್ಕೆ ಬಿಎಂಟಿಸಿ ನಿರ್ವಾಹಕ ಸೇರಿ ಇಬ್ಬರು ಮೃತ ಬೇಸಿಗೆಯ ಬಿರು ಬಿಸಿಲು- ತಂಪೆರೆದ ಭರಣಿ ಮಳೆ: ರೈತರ ಮುಖದಲ್ಲಿ ಮಂದಹಾಸ ಬೇಟಿ ಬಚಾವೋ ಬೇಟಿ ಪಢಾವೋ ಎಂದರೆ ಅತ್ಯಾಚಾರಿಗಳಿಗೆ ಟಿಕೆಟ್‌ ನೀಡುವುದೇ?:  ಮುಖ್ಯಮಂತ್ರಿ ಚಂದ್ರು ಪ್ರಶ್ನೆ ಪ್ರಜ್ವಲ್ ರೇವಣ್ಣನಿಂದ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ರಕ್ಷಣೆ ನೀಡಿ: ಮೋಹನ್ ದಾಸರಿ ಆಗ್ರಹ