Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

NWKRTC: ನೌಕರರಲ್ಲಿ ಆತ್ಮಸ್ಥೆರ್ಯ ತುಂಬಿ, ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ- ಎಂಡಿಗೆ ನೌಕರರ ಸಂಘ ಮನವಿ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ವಾಯವ್ಯಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಸಮಸ್ಯೆ ಕುರಿತು ಈಗಾಗಲೆ ಹಲವು ಬಾರಿ ಅಧಿಕಾರಿಗಳು ಮತ್ತು ಸರ್ಕಾರದೊಂದಿಗೆ ಚರ್ಚೆ ಮಾಡಿದ್ದು ಶೀಘ್ರದಲ್ಲೇ ಪ್ರಮುಖ ಸಮಸ್ಯೆ ಮತ್ತು ಬೇಡಿಕೆಗಳನ್ನು ನಿವಾರಿಸಲಾಗುವುದು ಎಂದು ವ್ಯವಸ್ಥಾಪಕ ನಿರ್ದೇಶಕ ಎಸ್‌. ಭರತ್‌ ಭರವಸೆ ನೀಡಿದ್ದಾರೆ.

ಇಂದು ಸಂಸ್ಥೆಯ ಕೇಂದ್ರ ಕಚೇರಿ ಹುಬ್ಬಳಿಯಲ್ಲಿ ತಮ್ಮನ್ನು ಭೇಟಿಯಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘದ ಪದಾಧಿಕಾರಿಗಳ ಮನವಿ ಸ್ವೀಕರಿಸಿ ಮಾತನಾಡಿದರು.

ಈಗಾಗಲೇ ಮುಷ್ಕರದ ಸಮಯದಲ್ಲಿ ಆಗಿದ್ದ ವಜಾ, ವರ್ಗಾವಣೆ ಸಂಬಂಧ ಬಹುತೇ ಎಲ್ಲ ಸಮಸ್ಯೆಗಳು ನಿವಾರಣೆಯಾಗಿವೆ. ಮುಷ್ಕರ ಮೂರ್ವದ ಪ್ರಕರಣಗಳು ಮತ್ತು 6 ತಿಂಗಳ ಗೈರು ಹಾಜರಿಯಾದ 6-8 ನೌಕರರ ಪ್ರಕರಣ ಮಾತ್ರ ಬಾಕಿ ಇದ್ದು ಅವುಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ತಿಳಿಸಿದರು.

ಇನ್ನು ಸಂಘದ ಪದಾಧಿಕಾರಿಗಳು ಸಂಸ್ಥೆಯಲ್ಲಿ ಮುಷ್ಕರದ ಸಮಯದಲ್ಲಿ ಅಂತರ್ ನಿಗಮಗಳಿಗೆ ವರ್ಗಾವಣೆಗೊಂಡ ನೌಕರರನ್ನು ಮೂಲ ಘಟಕಕ್ಕೆ ಹಾಗೂ ನೌಕರರ ಮೇಲೆ ವಿಧಿಸಿರುವ ಷರತ್ತುಗಳ ರದ್ದುಗೊಳಿಸಬೇಕು. ಈ ಮೂಲಕ 6-4-2021 ರ ಯಥಾಸ್ಥಿತಿಯನ್ನು ಕಾಪಾಡಬೇಕೆಂದು ಮನವಿ ಮಾಡಿದರು.

ಅದರ ಜತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು. ಅವುಗಳಲ್ಲಿ ಪ್ರಮುಖವಾದವೆಂದರೆ. 1) ಮುಷ್ಕರದ ಸಮಯದಲ್ಲಿ ಅಂತರ್‌ ನಿಗಮಗಳಿಗೆ ವರ್ಗಾವಣೆಗೊಂಡ ನೌಕರರನ್ನು ಕ.ರಾ.ರ. ಸಾರಿಗೆ ನಿಗಮ ಹಾಗೂ ಕ.ಕ.ರಾ.ರ.ಸಾರಿಗೆ ಸಂಸ್ಥೆಗಳಲ್ಲಿ ವರ್ಗಾವಣೆಗೊಂಡಿದ್ದ ನೌಕರರನ್ನು ಸಂಪೂರ್ಣವಾಗಿ ಮೂಲಘಟಕಕ್ಕೆ ಮರು ವರ್ಗಾವಣೆ ಮಾಡುವ ಮೂಲಕ ಯಥಾಸ್ಥಿತಿಯನ್ನು ಕಾಪಾಡಿದ್ದಾರೆ.

ಆದರೆ ವಾ.ಕ.ರಾ.ರ.ಸಾ. ಸಂಸ್ಥೆಯಲ್ಲಿ ಮಾತ್ರ ನೌಕರರನ್ನು ಅವರ ಮೂಲ ಘಟಕಕ್ಕೆ ಇದೂವರೆಗೂ ವರ್ಗಾವಣೆ ಮಾಡಿರುವುದಿಲ್ಲ. ಇದರಿಂದ ನೌಕರರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಮಾನವೀಯತೆಯ ದೃಷ್ಟಿಯಿಂದ ಕೂಡಲೇ ಸಂಬಂಧಪಟ್ಟ ನೌಕರರನ್ನು ಅವರ ಮೂಲ ಘಟಕಕ್ಕೆ ಮರು ವರ್ಗಾವಣೆ ಮಾಡಬೇಕು.

2) ಸಂಸ್ಥೆಯಲ್ಲಿ ಘಟಕ ಮಟ್ಟದಿಂದ ಕೇಂದ್ರ ಕಚೇರಿಯವರೆಗೂ ಬ್ರಹ್ಮಾಂಡ ಭ್ರಷ್ಟಾಚಾರದ ಕೂಗು ನೌಕರರಿಂದ ಕೇಳಿ ಬಂದಿದ್ದು, ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ ಭ್ರಷ್ಟ ಅಧಿಕಾರಿಗಳು ಮತ್ತು ಮಧ್ಯವರ್ತಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕು.

3) .ಸರಕಾರಿ ನೌಕರರಿಗೆ ನೀಡುವ ಹಾಗೆ ಸಾರಿಗೆ ನೌಕರರಿಗೂ ಸಹ ನಗದು ರಹಿತ ಆರೋಗ್ಯ ಭಾಗ್ಯ ಅಥವಾ ಆರೋಗ್ಯ ಸಂಜೀವಿನಿ ಯೋಜನೆಗಳನ್ನು ಅಳವಡಿಸಿಕೊಳ್ಳಬೇಕು. 4) ಸರಕಾರಿ ನೌಕರರಿಗೆ ನೀಡುವ ವೇತನದ ಮಾದರಿಯಂತೆ ಸಾರಿಗೆ ನೌಕರರಿಗೂ ಸಹ ಸರಿಸಮಾನ ವೇತನ ಜಾರಿಗೊಳಿಸಬೇಕು.

5) ವಾ.ಕ.ರಾ.ರ.ಸಾ.ಸಂಸ್ಥೆಯಲ್ಲಿ ಏಕರೂಪ ಕಾನೂನು ಜಾರಿಗೊಳಿಸಿ. (ಸಿ & ಆರ್ ತಿದ್ದುಪಡಿ ಮಾಡುವುದು) ನಿರ್ದಿಷ್ಟ ಸಮಯದಲ್ಲಿ ಎಲ್ಲ ಪ್ರಕರಣಗಳನ್ನು ಇತ್ಯರ್ಥಪಡಿಸುವುದು. 6) ಸಂಸ್ಥೆಯಲ್ಲಿ ನಿವೃತ್ತಿ ಹೊಂದಿರುವ ಎಲ್ಲ ನೌಕರರಿಗೂ ನೀಡಬೇಕಿರುವ ಬಾಕಿ ಹಣವನ್ನು ಬಿಡುಗಡೆ ಮಾಡುವುದು. ಅವರಿಗೂ ಸಹ ಆರೋಗ್ಯ ಭಾಗ್ಯ ಅಥವಾ ಆರೋಗ್ಯ ಸಂಜೀವಿನಿ ಯೋಜನೆಗಳನ್ನು ಜಾರಿಮಾಡಬೇಕು.

7) ಸಂಸ್ಥೆಯಲ್ಲಿ ಮುಷ್ಕರದ ಸಮಯದಲ್ಲಿ ವಜಾಗೊಂಡು ಮರು ನೇಮಕವಾಗದೆ ಉಳಿದಿರುವ 7-10 ನೌಕರರನ್ನು ಮಾನವೀಯತೆಯ ದೃಷ್ಟಿಯಿಂದ ಕೂಡಲೇ ಮರುನೇಮಕ ಮಾಡಿಕೊಳ್ಳಬೇಕು.

8) ಇತ್ತೀಚಿನ ದಿನಗಳಲ್ಲಿ ಸಾರಿಗೆ ಸಂಸ್ಥೆಯ ನೌಕರರ ಮೇಲೆ ಮಾನಸಿಕ ಒತ್ತಡ ಹಾಗೂ ಅಧಿಕಾರಿಗಳ ಕಿರುಕುಳ ಹೆಚ್ಚಾಗಿದ್ದು, ಅನೇಕ ನೌಕರರು ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ. ಮುಂದಿನ ದಿನಗಳಲ್ಲಿ ಈ ಆತ್ಮಹತ್ಯೆಯಂತಹ ಪ್ರಕರಣಗಳು ಮರುಕಳಿಸದಂತೆ ನೌಕರರಲ್ಲಿ ಆತ್ಮಸ್ಥೆರ್ಯ ತುಂಬಿ, ಕಿರುಕುಳ ನೀಡುವ ಅಧಿಕಾರಿಗಳ ಮೇಲೆ ಸೂಕ್ತ ಶಿಸ್ತು ಕ್ರಮ ಜರುಗಿಸಬೇಕು.

ನೌಕರರ ಹಿತದೃಷ್ಟಿಯಿಂದ, ಕಾರ್ಮಿಕರು ಮತ್ತು ಕಾರ್ಮಿಕ ಮುಖಂಡರು ಹಾಗೂ ಉನ್ನತ ಅಧಿಕಾರಿಗಳನ್ನು ಒಳಗೊಂಡಂತೆ ಒಂದು ನೂತನ ಸಮಿತಿ ರಚಿಸುವುದು ಆ ಸಮಿತಿಯ ಮೂಲಕ ಉತ್ತಮ ಆಡಳಿತ ವ್ಯವಸ್ಥೆ ರೂಪಿಸಬೇಕು ಎಂಬ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಸಲ್ಲಿಸಿದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...