NEWSಆರೋಗ್ಯನಮ್ಮಜಿಲ್ಲೆ

ಡೆಂಗ್ಯೂ, ಮಲೇರಿಯಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ಶಿವಶಂಕರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಾದ್ಯಂತ ಉತ್ತಮ ಮಳೆ ಆಗುತ್ತಿದ್ದು, ಈ ಸಂದರ್ಭದಲ್ಲಿ ತೊಟ್ಟಿ, ಚರಂಡಿ ಹಾಗೂ ಇನ್ನಿತರ ಘನ ತ್ಯಾಜ್ಯಗಳಲ್ಲಿ ನೀರು ಶೇಖರಣೆ ಯಾಗಿ ಸೊಳ್ಳೆಗಳು ಉತ್ಪತ್ತಿಗೊಂಡು ಡೆಂಗ್ಯೂ ಮಲೇರಿಯಾ ನಂತಹ ರೋಗಗಳು ಕಂಡು ಬರುವ ಸಂಭವ ಹೆಚ್ಚಿದ್ದು ಡೆಂಗ್ಯೂ ಮಲೇರಿಯಾ ರೋಗವನ್ನು ನಿಯಂತ್ರಿಸಲು ಮುಂಜಾಗ್ರತಾವಾಗಿ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ವಿಶ್ವ ಮಲೇರಿಯಾ ದಿನಾಚರಣೆ ಹಾಗೂ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯ ಅಂತರ್ ಇಲಾಖಾ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲೂಕು ಕೇಂದ್ರಗಳಲ್ಲಿ ರಕ್ತ ಲೇಪನ ಸಂಗ್ರಹ ಕಾರ್ಯ ಹೆಚ್ಚು, ಹೆಚ್ಚು ಆದಲ್ಲಿ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ ಜ್ವರದಂತಹ ಪ್ರಕರಣಗಳನ್ನು ತ್ವರಿತವಾಗಿ ಪತ್ತೆ ಹಚ್ಚಿ ಶೀಘ್ರ ಚಿಕಿತ್ಸೆ ಕೈಗೊಳ್ಳಬಹುದು. ಆದ್ದರಿಂದ ಈ ಎಲ್ಲ ಜ್ವರ ಪ್ರಕರಣಗಳಿಗೆ ಸಂಬಂಧಿಸಿದಂತೆ ತ್ವರಿತವಾಗಿ ರಕ್ತ ಮಾದರಿ ಸಂಗ್ರಹಿಸಿ ಪ್ರಯೋಗಾಲಯಗಳಿಗೆ ತಲುಪಿಸಿ ರೋಗ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.

ಕಲ್ಲು ಗಣಿಗಾರಿಕೆಗಳು, ಕಟ್ಟಡ ನಿರ್ಮಾಣ ಪ್ರದೇಶಗಳು, ಹೊರ ರಾಜ್ಯಗಳಿಂದ ವಲಸೆ ಬರುವ ಕಾರ್ಮಿಕರಿಗೆ ಕಡ್ಡಾಯ ರಕ್ತಲೇಪನ ಸಂಗ್ರಹಿಸಿ ದೃಢಪಟ್ಟ ಪ್ರಕರಣಗಳಿಗೆ ವೈದ್ಯಾಧಿಕಾರಿಗಳು ತ್ವರಿತ ಚಿಕಿತ್ಸೆ ನೀಡುವಂತೆ ಸೂಚಿಸಿದರು.

ಸೊಳ್ಳೆ ಉತ್ಪತ್ತಿ ತಾಣಗಳಾದ ತೆರೆದ ತೊಟ್ಟಿ, ಮೇಲ್ಚಾವಣಿ ಇಲ್ಲದ ತೊಟ್ಟಿಗಳು ಕಿರು ನೀರು ಸರಬರಾಜು ಮಾಡುವಂತಹ ತೊಟ್ಟಿಗಳನ್ನು ಭದ್ರವಾದ ಮುಚ್ಚಳ ಅಥವಾ ಬಟ್ಟೆಯನ್ನು ಮುಚ್ಚಬೇಕು ಶಾಲೆ ಅಂಗನವಾಡಿ ಕೇಂದ್ರಗಳಲ್ಲಿ ತೆರೆದ ತೊಟ್ಟಿ ಗಳಿದ್ದಲ್ಲಿ ಮುಂಜಾಗ್ರತಾ ಕ್ರಮವಾಗಿ ಅವುಗಳ ಮೇಲ್ಭಾಗವನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕು ಎಂದರು.

ಆರೋಗ್ಯ ಇಲಾಖೆ ಪೋಸ್ಟರ್, ಬ್ಯಾನರ್‌ಗಳ ಮೂಲಕ, ಮಾಹಿತಿ- ಶಿಕ್ಷಣ-ಸಂವಹನ ಚಟುವಟಿಕೆಗಳ ಮೂಲಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಚ್ಚರಿಕೆ ಹಾಗೂ ಜನಜಾಗೃತಿ ಮೂಡಿಸಬೇಕು ಎಂದರು.

ಕುಡಿಯುವ ನೀರು ಸರಬರಾಜು ಮಾಡುವ ಮೊದಲು ಸೂಕ್ತ ವಾದ ಪ್ರಮಾಣದಲ್ಲಿ ಕ್ಲೋರಿನೇಷನ್ ಮಾಡುವುದು, ಗುಂಡಿಗಳು, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಕೊಳವೆಬಾವಿಗಳಿಂದ ಅಥವಾ ಸಾರ್ವಜನಿಕ ನಲ್ಲಿಗಳಲ್ಲಿ ನೀರು ಸೋರಿಕೆಯಾಗುತ್ತಿದ್ದಲ್ಲಿ ದುರಸ್ತಿಗೊಳಿಸಿ ಸರಬರಾಜು ಮಾಡಬೇಕು.

ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡುವುದು, ಸೊಳ್ಳೆ ಉತ್ಪತ್ತಿ ತಾಣಗಳನ್ನು ನಿವಾರಿಸುವ ನಿಟ್ಟಿನಲ್ಲಿ ಗ್ರಾಮ-ನಗರ ಪ್ರದೇಶಗಳಲ್ಲಿ ಗಳಲ್ಲಿ ಉತ್ಪತ್ತಿಯಾಗುವ ಘನ ತ್ಯಾಜ್ಯ ವಸ್ತುಗಳು, ನೀರು ಶೇಖರಣೆ ಗೊಳ್ಳುವ ಇತರೆ ಅನುಪಯುಕ್ತ ವಸ್ತುಗಳ ಸೂಕ್ತ ವಿಲೇವಾರಿ ಕೈಗೊಳ್ಳುವುದು.

ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸೊಳ್ಳೆ ನಾಶಕ ದ್ರಾವಣ ಸಿಂಪಡಿಸುವುದು. ಸರ್ಕಾರಿ ಖಾಸಗಿ ಕಟ್ಟಡ ಕಾಮಗಾರಿಗಳಲ್ಲಿ ತೊಡಗುವ ವಲಸೆ ಕಾರ್ಮಿಕರನ್ನು ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ತಪಾಸಣೆ ಮಾಡಬೇಕು.

ವಸತಿ ನಿಲಯಗಳ, ಸಮುಚ್ಚಯಗಳ ಒಳಾಂಗಣ ಹೊರಾಂಗಣಗಳಲ್ಲಿ ಶುಚಿತ್ವ ಕಾಪಾಡುವುದು, ಆಶಾ, ಅಂಗನವಾಡಿ ಕಾರ್ಯಕರ್ತೆಯರ ಸಹಯೋಗದಲ್ಲಿ ಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ ಮೂಡಿಸುವುದು ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ರೋಗ ನಿಯಂತ್ರಣಕ್ಕೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ಅವರು ವಿವರಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನೀಲ್ ಕುಮಾರ್, ಜಿಲ್ಲಾ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ