CRIMENEWSನಮ್ಮಜಿಲ್ಲೆ

ರಸ್ತೆ ಅಪಘಾತ ತಡೆ, ಅನಧಿಕೃತ ಹೆದ್ದಾರಿ ಫಲಕಗಳ ತೆರವಿಗೆ ಕ್ರಮ ಕೈಗೊಳ್ಳಿ: ಡಿಸಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ಕ್ರಮಬದ್ಧ ಯೋಜನೆ ರೂಪಿಸಿ ಕಾರ್ಯರೂಪಕ್ಕೆ ತನ್ನಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಹೇಳಿದರು.

ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಗರಕ್ಕೆ ಹೊಂದಿಕೊಂಡಿರುವ ಜಿಲ್ಲೆಯಾದ್ದರಿಂದ ವಾಹನ ಸಂಚಾರ ದಟ್ಟಣೆ ಹೆಚ್ಚಿರುತ್ತದೆ. ನೆಲಮಂಗಲ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚು ಅಪಘಾತಗಳಾಗುತ್ತಿವೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾರ್ವಜನಿಕ ಸಂಚಾರ ಹೆಚ್ಚಿರುವ, ಶಾಲಾ ಕಾಲೇಜು, ಅಪಘಾತ ವಲಯಗಳಲ್ಲಿ ಶೀಘ್ರ ಸ್ಕೈ ವಾಕ್ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದರು.

ನೆಲಮಂಗಲ ಸರ್ಕಲ್ ನಲ್ಲಿ ವಾಹನ ಸಂಚಾರ ದಟ್ಟಣೆಯಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು ಕುಣಿಗಲ್ ಗೆ ಹೋಗುವ ಕಡೆ ರಸ್ತೆ ಅಗಲೀಕರಣ ಮಾಡಿದರೆ ವಾಹನ ಸಂಚಾರ ಸುಗಮವಾಗುತ್ತದೆ ಎಂದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೈನ್ ಬೋರ್ಡ್ಗಳನ್ನು ಅಳವಡಿಸಬೇಕು, ರಸ್ತೆಗಳಲ್ಲಿ ಅಮ್ಸ್ ಗಳನ್ನು ಹಾಕಬೇಕು, ಸರ್ವಿಸ್ ರಸ್ತೆಗಳಲ್ಲಿ ಅತಿಕ್ರಮಣವಾಗಿ ಹಾಕಿರುವ ಅಂಗಡಿಗಳು, ವಾಹನ ಪಾರ್ಕಿಂಗ್ ತೆರವುಗೊಳಿಸಲು ಸೂಚಿಸಿದರು.

ಜಿಲ್ಲೆಯಲ್ಲಿ ಅನಧಿಕೃತವಾಗಿ ಎಲ್ಲೆಂದರಲ್ಲಿ ಹಾಕಿರುವ ಜಾಹಿರಾತು ಫಲಕಗಳನ್ನು ತೆರವುಗೊಳಿಸಿ, ಯಾರ ಒತ್ತಡಕ್ಕೂ ಮಣಿಯಬೇಡಿ. ತೆರವುಗೊಳಿಸುವ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ರಕ್ಷಣೆ ಪಡೆಯಿರಿ. ಯಾವುದಾದರು ಬೆದರಿಕೆ ಕರೆಗಳು ಬಂದಲ್ಲಿ ದೂರು ನೀಡಿ ಎಂದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಎಲ್ಲೆಂದರಲ್ಲಿ ಪ್ಲಾಸ್ಟಿಕ್, ಕಸದ ತ್ಯಾಜ್ಯ, ಹಳೇ ಕಟ್ಟಡಗಳ ತ್ಯಾಜ್ಯ ಸುರಿಯುತ್ತಿದ್ದು ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದರು.

ರಸ್ತೆ ಅಪಘಾತದಿಂದ 297 ಸಾವು,ಹೆಚ್ಚು ಅಪಘಾತಗಳು ಸಂಭವಿಸುವ 38 ಬ್ಲಾಕ್ ಸ್ಪಾಟ್ ಗುರುತು-ಎಸ್ಪಿ
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ ಅವರು ಮಾತನಾಡಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ರಸ್ತೆ ಅಪಘಾತಗಳಿಂದ 297 ಜನ ಸಾವನ್ನಪ್ಪಿದ್ದಾರೆ. ಹೆಚ್ಚು ಅಪಘಾತಗಳು ಸಂಭವಿಸುವ 38 ಅಪಾಯಕಾರಿ ಸ್ಥಳ(ಬ್ಲಾಕ್ ಸ್ಪಾಟ್)ಗಳನ್ನು ಗುರುತಿಸಲಾಗಿದ್ದು ಅದರಲ್ಲಿ 35 ರಾಷ್ಟ್ರೀಯ ಹೆದ್ದಾರಿ ಅಪಾಯಕಾರಿ ಸ್ಥಳಗಳಾದರೆ, 3 ರಾಜ್ಯ ಹೆದ್ದಾರಿಗಳಾಗಿವೆ.

ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲ ತಾಲ್ಲೂಕಿನ ಕುಲುವನಹಳ್ಳಿ ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತವೆ. ರಸ್ತೆಯಲ್ಲಿ ಶಾಲೆ ಒಂದು ಬದಿ ಆದರೆ ಊರು ಮತ್ತೊಂದು ಬದಿ , ದಿನನಿತ್ಯ ರಸ್ತೆ ದಾಟುವಾಗ ವಾಹಾನಗಳ ವೇಗದ ಚಾಲನೆ ಯಿಂದ ಅಫಘಾತಗಳು ಸಂಭವಿಸುತ್ತಿವೆ. ಹಾಗಾಗಿ ನಾವೆಲ್ಲ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ.

ಟೋಲ್ ಗಳಲ್ಲಿ ವಿಐಪಿಗಳಿಗೆ ಹಾಗೂ ಅಂಬುಲೆನ್ಸ್ ಓಡಾಟಕ್ಕೆ ಮೀಸಲಿರುವ ಲೈನ್ ಗಳಲ್ಲಿ ಯಾವುದೇ ಕಾರಣಕ್ಕೂ ಸಾರ್ವಜನಿಕರ ವಾಹನಗಳಿಗೆ ಪ್ರವೇಶ ಕಲ್ಪಿಸಬೇಡಿ ಎಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಪಿಡಬ್ಲ್ಯೂಡಿ ನ ಎಕ್ಸಿಕ್ಯುಟಿವ್ ಇಂಜಿನಿಯರ್ ಚಂದ್ರಶೇಖರ್, ಪ್ರೋಫೆಸರ್ ಅರ್ಚನ, ತಾಲೂಕು ಟ್ರಾಫಿಕ್ ಇನ್ಸ್ಪೆಕ್ಟರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
ನಾಲ್ಕೂ ರಸ್ತೆ ಸಾರಿಗೆ ಸಂಸ್ಥೆ ಎಂಡಿಗಳಿಗೆ ಪತ್ರ ಬರೆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ