NEWSಕೃಷಿನಮ್ಮಜಿಲ್ಲೆ

ತಾಳವಾಡಿ: ಜಮೀನಿಗೆ ನುಗ್ಗುತ್ತಿರುವ ಕಾಡಾನೆ ಹಿಮ್ಮೆಟ್ಟಿಸಿದ ರೈತರು

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಬೇಸಿಗೆಯ ದಿನವಾಗಿರುವುದರಿಂದ ಕಾಡಿನಲ್ಲಿ ನೀರು ಮತ್ತು ಮೇವು ಸಿಗದ ಕಾರಣ ಕಾಡಾನೆಗಳು ನೇರವಾಗಿ ನಾಡಿಗೆ ಬಂದು ರೈತರ ಜಮೀನಿಗೆ ನುಗ್ಗುತ್ತಿವೆ.

ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗದ ಕಾರಣ ಜಿಲ್ಲೆಯ ಗಡಿಯಂಚಿನ ತಾಳವಾಡಿ ಬಳಿಯ ಗ್ರಾಮಸ್ಥರು ಆಕ್ರೋಶಗೊಂಡು ಜಮೀನಿಗೆ ನುಗ್ಗಿದ ಕಾಡಾನೆಯನ್ನು ಟ್ರ್ಯಾಕ್ಟರ್ ಮೂಲಕ ಕಾಡಿಗೆ ಓಡಿಸಿದ್ದಾರೆ.

ಈಗಾಗಲೇ ಈ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿಯಿಂದ ರೈತರು ಸಂಕಷ್ಟ ಅನುಭವಿಸುತ್ತಿದ್ದು, ಕಷ್ಟಪಟ್ಟು ಬೆಳೆದ ಬೆಳೆ ಫಸಲಿಗೆ ಬರುತ್ತಿದ್ದಂತೆಯೇ ಕಾಡಾನೆಗಳು ಸೇರಿದಂತೆ ವಿವಿಧ ವನ್ಯ ಪ್ರಾಣಿಗಳು ಜಮೀನಿಗೆ ನುಗ್ಗಿ ಫಸಲನ್ನು ತಿಂದು ಹಾಳು ಮಾಡುತ್ತಿವೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಈ ನಡುವೆ ಕೃಷಿ ಜಮೀನಿಗೆ ನುಗ್ಗಿ ಫಸಲು ನಾಶ ಮಾಡಲು ಬರುತ್ತಿದ್ದು, ಅದರಂತೆ ಕಾಡಾನೆಯೊಂದು ಜಮೀನಿಗೆ ಬಂದಿದ್ದನ್ನು ಗಮನಿಸಿದ ರೈತರು ತಮ್ಮ ಟ್ರ್ಯಾಕ್ಟರ್‌ನಲ್ಲಿ ಭಾರಿ ಶಬ್ದದ ಜತೆಗೆ ಚಾಲನೆ ಮಾಡಿಕೊಂಡು ಹೋಗುವ ಮೂಲಕ ಹಿಮ್ಮೆಟ್ಟಿಸಿದ್ದಾರೆ.

ಇದು ಅಪಾಯಕಾರಿಯಾಗಿದ್ದರೂ ಅನ್ಯ ಮಾರ್ಗವಿಲ್ಲದೆ ಪ್ರಾಣದ ಹಂಗು ತೊರೆದು ರೈತರು ಈ ಕೆಲಸವನ್ನು ಮಾಡಿದ್ದಾರೆ.ಇನ್ನಾದರೂ ಸಂಬಂಧಪಟ್ಟ ಅರಣ್ಯ ಇಲಾಖೆ ಇತ್ತ ಗಮನಹರಿಸಿ ಕಾಡಾನೆಗಳು ಕೃಷಿ ಜಮೀನಿಗೆ ನುಗ್ಗಿ ಫಸಲು ನಾಶ ಮಾಡುವುದನ್ನು ತಡೆಯಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ ನಾಗಮಂಗಲ ಕೋಮುಗಲಭೆ ಪ್ರಕರಣ: ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅಮಾನತು KSRTC ಸಿಬ್ಬಂದಿಯಿಂದಲೇ ಡಿಸಿಗೆ ಇರಿಯಲು ಯತ್ನ- ಕೈ ಅಡ್ಡಹಾಕಿ ಪ್ರಾಣಾಪಾಯದಿಂದ ಪಾರಾದ ಜಗದೀಶ್ ಕುಮಾರ್‌ "ARM" ಸಿನಿಮಾ ಇಂದು ಪ್ರಪಂಚದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆ ಸೆ.14ರಂದು ಸಾರಿಗೆ ಸಿಬ್ಬಂದಿಗಳಿಗೆ ಔಷಧೀಯ ಸಸ್ಯಗಳ  ಉಚಿತ ವಿತರಣೆ: ಅಧಿಕಾರಿಗಳು ಭಾಗಿ ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್! ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಬಂಧನ ಅವಧಿ ಮತ್ತೆ ಒಂದು ದಿನ ವಿಸ್ತರಣೆ KSRTC ಚಿಕ್ಕಮಗಳೂರು: ಘಟಕದ ಗೇಟ್‌ ಬಳಿ ತ್ಯಾಜ್ಯಗಳ ನಡುವೆ ಚಾಲಕನ ಪಾರ್ಥಿವ ಶರೀರವಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ-... ವಾಲ್ಮೀಕಿ ಹಗರಣ: ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ - ಛಲವಾದಿ ನಾರಾಯಣಸ್ವಾಮಿ