CrimeNEWSದೇಶ-ವಿದೇಶ

ತಮಿಳುನಾಡು: ಚಲಿಸುತ್ತಿದ್ದ ರೈಲು ಹತ್ತಲು ಹೋದ ಮಹಿಳೆ ಟ್ರೈನ್‌ಗೆ ಸಿಲುಕಿ ಸಾವು

ವಿಜಯಪಥ ಸಮಗ್ರ ಸುದ್ದಿ

ಚೆನ್ನೈ: ಚಲಿಸುತ್ತಿದ್ದ ರೈಲು ಹತ್ತಲು ಹೋದ ಮಹಿಳೆ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಭಯಾನಕ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ತಮಿಳುನಾಡಿನ ತಿರುಪುರ ರೈಲ್ವೆ ನಿಲ್ದಾಣದಲ್ಲಿ ಈ ಅವಘಡ ಸಂಭವಿಸಿದ್ದು, ಮಹಿಳೆ ಪ್ರಾಣ ಕಳೆದುಕೊಂಡಿದ್ದು, ಇಬ್ಬರು ಮಕ್ಕಳು ಬಚಾವ್‌ ಆಗಿದ್ದಾರೆ.

ಆಗಿದ್ದೇನು: ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳ ಜೊತೆ ಚಲಿಸುವ ಟ್ರೈನ್​ ಹತ್ತಲು ಮುಂದಾಗಿದ್ದಾರೆ. ಒಬ್ಬ ಮಗನನ್ನು ಟ್ರೈನ್​ ಹತ್ತಿಸಿದ್ದಾರೆ. ಇನ್ನೊಂದು ಮಗುವನ್ನು ಕಂಕುಳಲ್ಲಿ ಹಿಡಿದುಕೊಂಡು ಟ್ರೈನ್​ ಹತ್ತಲು ಮುಂದಾಗಿದ್ದಾರೆ. ಈ ವೇಳೆ ಕಾಲು ಜಾರಿ ಬಿದ್ದಿದ್ದಾರೆ. ಕೂಡಲೇ ನಿಲ್ದಾಣದಲ್ಲಿದ್ದ ಜನರು ಆಕೆಯನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಆದರೆ, ಅದು ಸಾಧ್ಯವಾಗಿಲ್ಲ.

ಕೂಡಲೇ ರಕ್ಷಣೆಗೆ ಮುಂದಾದರೂ ಟ್ರೈನ್​ ಚಲಿಸುತ್ತಿದ್ದ ಕಾರಣಕ್ಕೆ ಮಹಿಳೆ ಟ್ರೈನ್​ ಕೆಳಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಭಯಾನಕವಾದ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಇದನ್ನು ನೋಡಿದ ನೆಟ್ಟಿಗರು ಫುಲ್​ ಶಾಕ್​ ಆಗಿದ್ದಾರೆ.

ಚಲಿಸೋ ರೈಲಿಗೆ ಹತ್ತುವುದು ಮತ್ತು ಇಳಿಯುವುದು ತುಂಬಾ ಅಪಾಯಕಾರಿ. ಅದು ಗೊತ್ತಿದ್ದು ಕೆಲವರು ಈ ರೀತಿಯ ಸಹಾಸ ಮಾಡಲು ಹೋಗಿ ಜೀವ ಕಳೆದುಕೊಳ್ಳುತ್ತಾರೆ. ನೋಡಿ ಸ್ವಲ್ಪ ಯಾಮಾರಿದ್ದಕ್ಕೆ ಪ್ರಾಣ ಪಕ್ಷಿಯೇ ಹಾರಿ ಹೋಯಿತು.

 

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ