NEWSರಾಜಕೀಯಶಿಕ್ಷಣ-

ಮಧ್ಯಂತರ ರಜೆ ರದ್ದು- ಶಿಕ್ಷಕರ ವಿರುದ್ಧ ಸರ್ಕಾರದ ದರ್ಪಾದೇಶ: ಎಚ್‌ಡಿಕೆ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ ಅಕ್ಟೋಬರ್ 1ರಂದು ಮಧ್ಯಂತರ ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆದು ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಎತ್ತಿಗೆ ಜ್ವರ ಬಂದರೆ ಕೊಟ್ಟಿಗೆಗೆ ಬರೆಹಾಕು ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಸರ್ಕಾರ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಈ ದಿನದ ತನಕ ಕೆಲಸ ಮಾಡಿದ್ದಾರೆ. ಆದರೆ ರಾಜ್ಯ ಸರ್ಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದು ಟ್ವೀಟ್‌ ಮೂಲಕ ಆರೋಪಿಸಿದ್ದಾರೆ.

ಕೊರೊನಾದ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ. ಆದರೂ ಈ ವರ್ಷದ ಅಕ್ಟೋಬರ್‌ 3 ರಿಂದ 26 ರವರೆಗೆ ನೀಡಬೇಕಿದ್ದ ಮಧ್ಯಂತರ ರಜೆಯನ್ನು ಸರ್ಕಾರ ರದ್ದು ಮಾಡಿರುವುದಕ್ಕೆ ಆಧಾರ ಏನು? ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೆ ಎಂದೂ ಕೂಡ ಪ್ರಶ್ನಿಸಿದ್ದಾರೆ.

ಕೊರೊನಾ ಕಾರಣಕ್ಕೆ ಮಕ್ಕಳು ಶಾಲೆಗೆ ಬಾರದಿದ್ದರೂ ಶಿಕ್ಷಕರನ್ನು ಅನ್ಯ ಸೇವೆಗೆ ಯಥೇಚ್ಛವಾಗಿ ಬಳಸಲಾಗುತ್ತಿದೆ. ಆದಾಗ್ಯೂ ಮಧ್ಯಂತರ ರಜೆ ರದ್ದುಪಡಿಸಿ ಸರ್ಕಾರ ಯಾವ ಪುರುಷಾರ್ಥ ಸಾಧನೆಗೆ ಹೊರಟಿದೆ ಎಂದು ಕಿಡಿಕಾರಿದ್ದಾರೆ.

ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರ್ಕಾರ, ದರ್ಪದ ಆದೇಶಗಳನ್ನು ಜಾರಿ ಮಾಡಿ, ಶಾಪಕ್ಕೆ ಗುರಿಯಾಗುತ್ತಿದೆ. ‘ಹರ ಮುನಿದರೂ ಗುರು ಕಾಯ್ವನು’ ಎಂಬುದನ್ನು ಸರ್ಕಾರ ಮರೆಯಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್