NEWSಸಂಸ್ಕೃತಿ

ಶಿಕ್ಷಕರ ದಿನ: ಶಿಕ್ಷಕರನ್ನು ಗೌರವಿಸಲು ವಂಡರ್‌ ಲಾ ದಿಂದ 300 ಶಿಕ್ಷಕರಿಗೆ ಉಚಿತ ಪ್ರವೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಭಾರತದ ಅತಿದೊಡ್ಡ ಅಮ್ಯೂಸ್‌ಮೆಂಟ್ ಪಾರ್ಕ್ ವಂಡರ್‌ ಲಾ ಹಾಲಿಡೇಸ್ ಲಿಮಿಟೆಡ್, ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಗೌರವ ಸಮರ್ಪಿಸುವ ಸಲುವಾಗಿ 150 ಶಾಲೆಗಳಿಂದ 300 ಶಿಕ್ಷಕರನ್ನು ಆಹ್ವಾನಿಸುತ್ತಿದೆ.

ಈ ಆಯ್ದ ಶಾಲೆಯಿಂದ ವಂಡರ್‌ ಲಾ ಪಾರ್ಕ್‌ಗೆ ಬರುವ ಈ 300 ಶಿಕ್ಷಕರಿಗೆ ವಂಡರ್‌ಲಾ ವತಿಯಿಂದ ಉಚಿತ ಪ್ರವೇಶ ನೀಡಲಾಗುತ್ತದೆ. ಈ ಕೊಡುಗೆಯು ಕೊಚ್ಚಿ, ಬೆಂಗಳೂರು ಮತ್ತು ಹೈದರಾಬಾದ್ ಪಾರ್ಕ್‌ಗಳಲ್ಲಿ ಸೆಪ್ಟೆಂಬರ್ 3 ರಿಂದ ಸೆಪ್ಟೆಂಬರ್ 5ವರೆಗೆ ಇರಲಿದೆ.

ಈ ಉಪಕ್ರಮದ ಕುರಿತು ಮಾತನಾಡಿದ ವಂಡರ್‌ ಲಾ ಹಾಲಿಡೇಸ್‌ನ ವ್ಯವಸ್ಥಾಪಕ ನಿರ್ದೇಶಕ ಅರುಣ್ ಕೆ ಚಿಟ್ಟಿಲಪಿಲ್ಲಿ, ಸಾಂಕ್ರಾಮಿಕ ರೋಗದ ಉದ್ದಕ್ಕೂ, ಶಿಕ್ಷಕರು ಆನ್‌ಲೈನ್‌ ತರಗತಿ ಹೆಸರಿನಲ್ಲಿ ಮನೆ ಹಾಗೂ ಶಾಲೆ ಎರಡೂ ಸೇವೆಗಳನ್ನು ಸಮರ್ಪಕವಾಗಿ ನಿಭಾಯಿಸಿದ್ದಾರೆ ಎಂದು ಹೇಳಿದರು.

ಇನ್ನು ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು. ಜೀವನದ ಪಾಠ ಕಲಿಸುವ ಈ ಮಾರ್ಗದರ್ಶಕರನ್ನು ವಂಡರ್‌ ಲಾ ಗೌರವಿಸುವ ಉದ್ದೇಶದಿಂದ ಈ ಕೊಡುಗೆ ನೀಡುತ್ತಿದೆ. ಇದಷ್ಟೇ ಅಲ್ಲದೆ, ಆಗಸ್ಟ್ 29 ರಿಂದ ಸೆಪ್ಟೆಂಬರ್ 05 ರ ಅವಧಿಯಲ್ಲಿ ವಂಡರ್‌ ಲಾ ಪಾರ್ಕ್‌ಗೆ ಭೇಟಿ ನೀಡುವ ಎಲ್ಲಾ ಶಿಕ್ಷಕರಿಗೂ ತಮ್ಮ ಬುಕಿಂಗ್‌ಗಳ ಮೇಲೆ ಶೇ. 20ರಷ್ಟು ರಿಯಾಯಿತಿ ಘೋಷಿಸಿದೆ. ಈ ಕೊಡುಗೆಯನ್ನು ಪಡೆಯಲು ಕಡ್ಡಾಯವಾಗಿ ಗುರುತಿನ ಚೀಟಿ ತರಬೇಕು ಎಂದು ತಿಳಿಸಿದರು.

ಹೆಚ್ಚಿನ ಮಾಹಿತಿಗಾಗಿ www.wonderla.com ಗೆ ಭೇಟಿ ನೀಡಿ ಅಥವಾ ಕರೆ ಮಾಡಿ: ಬೆಂಗಳೂರು – 080 37230333, 080 35073966

Leave a Reply

error: Content is protected !!
LATEST
ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ