NEWSನಮ್ಮಜಿಲ್ಲೆ

KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು

ವಿಜಯಪಥ ಸಮಗ್ರ ಸುದ್ದಿ

ಕೊಪ್ಪಳ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೊಪ್ಪಳ ಘಟಕಕ್ಕೆ ಭೇಟಿ ನೀಡಿದ ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (RTO) ತಂಡ ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ ಅಂಗವಾಗಿ ವಿಶೇಷವಾಗಿ ವಿನ್ಯಾಸಗೊಳಿಸಿರುವ ಜಾಗೃತಿ ಮೂಡಿಸುವ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿತು.

ಬಳಿಕ ಸಂಸ್ಥೆಯ ಎಲ್ಲ ಬಸ್‌ಗಳಿಗೆ ಅಂಟಿಸಲಾಯಿತು. ಪ್ರಾದೇಶಿಕ ಸಾರಿಗೆ ಅಧಿಕಾರಿ ಲಕ್ಷ್ಮಿಕಾಂತ ಭೀ ನಾಲವಾರ, ವಿಭಾಗೀಯ ನಿಯಂತ್ರಣ ಅಧಿಕಾರಿ ಎಂ.ವೆಂಕಟೇಶ್ ಅವರಿಗೆ ಪೋಸ್ಟರ್‌ಗಳನ್ನು ಈ ತಂಡ ಹಸ್ತಾಂತರಿಸಿತು.

ಈ ಸಂದರ್ಭದಲ್ಲಿ ಘಟಕದ ಎಲ್ಲ ಮೆಕ್ಯಾನಿಕ್‌ಗಳು, ಚಾಲಕರು ಮತ್ತು ನಿರ್ವಾಹಕರಿಗೆ ವಾಹನಗಳಿಂದ ಉಂಟಾಗುವ ವಾಯುಮಾಲಿನ್ಯ ಹಾಗೂ ಅದರ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು.

ವಿಭಾಗಿಯ ಸಂಚಾರ ಅಧಿಕಾರಿ ಜಾಧವ್, ವಿಭಾಗಿಯ ತಾಂತ್ರಿಕ ಶಿಲ್ಪಿ ಅಶ್ರಫ್ ಅಲಿ, ಘಟಕ ವ್ಯವಸ್ಥಾಪಕ ಪಿ.ಬಿ.ಭಟ್ಟೂರ ಮತ್ತು ಹಿರಿಯ ಮೋಟಾರು ವಾಹನ ನಿರೀಕ್ಷಕ ವಿನಾಯಕ ನಾಯಕ್, ಘಟಕದ ಸಹಾಯಕ ಸಿಬ್ಬಂದಿ ಸಂತೋಷ್ ಉಪಸ್ಥಿತರಿದ್ದರು.

Leave a Reply

error: Content is protected !!
LATEST
KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ KSRTC: ವಾರದೊಳಗೆ ವೇತನ ಹೆಚ್ಚಳದ 38ತಿಂಗಳ ಹಿಂಬಾಕಿ ನಿವೃತ್ತ ನೌಕರರ ಬ್ಯಾಂಕ್‌ ಖಾತೆಗೆ ಜಮಾ! ಚೆಂಡು ಹೂವಿನ ಬೆಲೆ ತೀವ್ರ ಕುಸಿತ- ರಸ್ತೆ ಬದಿ ಹೂ ಸುರಿದು ಬೆಳೆಗಾರ ರೈತರ ಅಕ್ರೋಶ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಿ: ತುಷಾರ್ ಗಿರಿನಾಥ್ ನಲ್‌ಜಲ್ ಮಿತ್ರ ತರಬೇತಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಅನುರಾಧ ಚಾಲನೆ ನ.19 ರಿಂದ ಡಿ.10ರವರೆಗೆ ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನಕ್ಕೆ ಚಾಲನೆ