Please assign a menu to the primary menu location under menu

CrimeNEWSಶಿಕ್ಷಣ-

ಕಾಲೇಜು ಬಸ್‌ – ಲಾರಿ ನಡುವೆ ಭೀಕರ ಅಪಘಾತ : ಇಬ್ಬರೂ ಚಾಲಕರು ಮೃತ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕೋಡಿ: ಖಾಸಗಿ ಕಾಲೇಜು ಬಸ್‌ ಮತ್ತು ಲಾರಿ ನಡುವೆ ಇಂದು ಸಂಭವಿಸಿದ ಅಪಘಾತದಲ್ಲಿ ಇಬ್ಬರೂ ಚಾಲಕರು ಮೃತಪಟ್ಟಿದ್ದು ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದ ಅಪಘಾತದಲ್ಲಿ ಲಾರಿ ಚಾಲಕ ವಿಜಯಪುರ ಜಿಲ್ಲೆಯ ಕನಮಡಿ ಗ್ರಾಮದ ನಿವಾಸಿ ಮಲ್ಲಿಕ್ ಮುಜಾವರ್ (40) ಹಾಗೂ ಕಾಲೇಜು ಬಸ್ ಚಾಲಕ ಅಥಣಿ ನಿವಾಸಿ ರಘುನಾಥ್ ಅವತಾಡೆ (45) ಇಬ್ಬರು ಸ್ಥಳದಲ್ಲೆ ಅಸುನೀಗಿದ್ದಾರೆ.

ಎರಡು ವಾಹನಗಳ ಇಬ್ಬರು ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದು, ಅಥಣಿ ಹೊರವಲಯದಲ್ಲಿನ ಬನಜವಾಡ ಶಿಕ್ಷಣ ಸಂಸ್ಥೆಗೆ ಸೇರಿದ್ದ ಕಾಲೇಜು ಬಸ್‍ನಲ್ಲಿದ್ದ 75 ವಿದ್ಯಾರ್ಥಿನಿಯರು ಹಾಗೂ 3 ಜನ ಸಿಬ್ಬಂದಿಗಳಲ್ಲಿ 39 ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕಾಲೇಜು ಬಸ್ ಹಾಸ್ಟೆಲ್‍ನಿಂದ ಕಾಗವಾಡ – ವಿಜಯಪುರ ಹೆದ್ದಾರಿ ಪಕ್ಕದ ಕಾಲೇಜಿನ ಗೇಟ್ ಒಳಗಡೆ ಹೋಗಲು ತಿರುಗುತ್ತಿದ್ದಾಗ ಲಾರಿ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ 39ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗಳಾಗಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಾಲಗಿದೆ.

ಓರ್ವ ಶಿಕ್ಷಕಿಗೆ ಗಂಭೀರ ಗಾಯವಾಗಿದ್ದು, ಬೆಳಗಾವಿಗೆ ರವಾನಿಸಲಾಗಿದೆ ಹಾಗೂ ಇಬ್ಬರು ವಿದ್ಯಾರ್ಥಿನಿಯರಿಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಆದರೆ, ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ್ ಪರಿಶೀಲನೆ ನಡೆಸಿದರು. ಬಸ್‌ನಲ್ಲಿ ಪ್ರಮಾಣಕ್ಕಿಂತ ಹೆಚ್ಚಿನ ವಿದ್ಯಾರ್ಥಿನಿಯರನ್ನು ಕರೆತರಲಾಗುತ್ತಿತ್ತು ಎನ್ನುವ ಆರೋಪ ಬಂದ ಹಿನ್ನೆಲೆಯಲ್ಲಿ ಅಥಣಿಯ ಎಲ್ಲ ಶಾಲಾ ಕಾಲೇಜುಗಳಿಗೆ ನೋಟಿಸ್‌ ಜಾರಿ ಮಾಡಿರುವುದಾಗಿ ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ