Vijayapatha - ವಿಜಯಪಥ > NEWS > Crime > ಭೀಕರ ಕಾರು ಅಪಘಾತ: ಮೂವರು ಬೆಸ್ಕಾಂ ಸಿಬ್ಬಂದಿ ಮೃತ, ಪ್ರಾಣಾಪಾಯದಿಂದ ಓರ್ವ ಪಾರು
ಭೀಕರ ಕಾರು ಅಪಘಾತ: ಮೂವರು ಬೆಸ್ಕಾಂ ಸಿಬ್ಬಂದಿ ಮೃತ, ಪ್ರಾಣಾಪಾಯದಿಂದ ಓರ್ವ ಪಾರು
DevaJune 7, 2024
ಗೌರಿಬಿದನೂರು: ಭೀಕರ ಕಾರು ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಓರ್ವ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೆಪಿಟಿಸಿಎಲ್ ಸಿಬ್ಬಂದಿಗಳಾದ ವೇಣಗೋಪಾಲ್ (34), ಶ್ರೀಧರ್ (35), ಬೆಸ್ಕಾಂ ಲೈನ್ಮ್ಯಾನ್ ಮಂಜಪ್ಪ (35) ಮೃತರು ಎಂದು ಗುರುತಿಸಲಾಗಿದೆ.
ಬೆಸ್ಕಾಂ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಬ್ರಿಜಾ ಕಾರು ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಕಾಲುವೆಗೆ ಕಾರು ಉರುಳಿದೆ. ಕಳೆದ ರಾತ್ರಿಯೇ ಈ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.
ಅಪಘಾತದ ತೀವ್ರತೆಗೆ ಕಾರಿನಿಂದ ಹಾರಿದ ಓರ್ವ ಸಿಬ್ಬಂದಿ ಮರಕ್ಕೆ ಸಿಲುಕಿ ನೇತಾಡಿದ್ದು, ಅಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.
Related
Deva
Leave a reply