CrimeNEWSನಮ್ಮಜಿಲ್ಲೆ

ಭೀಕರ ಸರಣಿ ಅಪಘಾತ: ಗಾಯಾಳುಗಳ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ – ಸಿಎಂ ಭರವಸೆ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಜಿಲ್ಲೆಯ ಅರಸೀಕೆರೆಯಲ್ಲಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ 9 ಮಂದಿ ಮೃತರಾಗಿರುವುದು ತೀವ್ರ ದುಃಖದಾಯಕ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಲಾಗುವುದು ಮತ್ತು ಗಾಯಾಳುಗಳ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ನಿನ್ನೆ ರಾತ್ರಿ ಟೆಂಪೋ ಟ್ರಾವೆಲರ್, ಹಾಲಿನ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಾಂಧಿನಗರದಲ್ಲಿ ನಡೆದಿದೆ.

ಅಪಘಾತದಲ್ಲಿ 12 ಜನರು ಗಾಯಗೊಂಡಿದ್ದು, ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟ 9 ಜನರ ಮೃತದೇಹಗಳನ್ನು ಅರಸೀಕೆರೆ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದ್ದು, ಶವಗಾರದಲ್ಲಿ ಮಕ್ಕಳನ್ನು ಕಳೆದುಕೊಂಡ ತಂದೆ-ತಾಯಿ ಹಾಗೂ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಅಪಘಾತದಲ್ಲಿ ಹಳ್ಳಿಕೆರೆ ಗ್ರಾಮದ ಲೀಲಾವತಿ (50), ಚೈತ್ರಾ (33), ಸಮರ್ಥ (10), ಡಿಂಪಿ (12), ತನ್ಮಯ್ (10), ದ್ರುವ (2), ವಂದನಾ (20), ದೊಡ್ಡಯ್ಯ (60), ಭಾರತಿ (50) ಮೃತರು. ಇವರೆಲ್ಲರೂ ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ತೆರಳಿ, ಅಲ್ಲಿಂದ ಹಾಸನಕ್ಕೆ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆದು ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.

ಇನ್ನು ಪ್ರತ್ಯಕ್ಷದರ್ಶಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ ಭದ್ರಾವತಿ ಮೂಲದ ಶಾರದಮ್ಮ ಅಪಘಾತದ ಬಗ್ಗೆ ವಿವರಿಸಿದ್ದು, ನನ್ನ ಮೊಮ್ಮಗ ಮತ್ತು ನಾನು 2 ಸೀಟ್‌ ಇರುವ ಕಡೆ ಕುಳಿತಿದ್ದೆವು. ಅಕ್ಕಪಕ್ಕದವರು ಮಾತನಾಡಿಕೊಂಡು ಚೆನ್ನಾಗಿದ್ದರು. ಭಾರೀ ಶಬ್ಧ ಬಂತು. ಅಪಘಾತದ ರಭಸಕ್ಕೆ ನಾನು ಮುಂದಿನ ಸೀಟ್‌ಗೆ ಹೋಗಿ ಬಿದ್ದೆ. ನನ್ನ ಮೊಮ್ಮಗನಿಗೆ ಡ್ರೈವರ್ ಪಕ್ಕದ ರಾಡ್‌ ಹೊಡೆದು, ಕಾಲು ಹಾಗೂ ಎದೆಗೆ ಗಾಯವಾಗಿದೆ ಎಂದು ಅಪಘಾತದ ಭೀಕರತೆಯನ್ನು ತಿಳಿಸಿದರು.

ಘಟನೆ ನಡೆದ ಒಂದು ಕ್ಷಣದಲ್ಲಿ ಅಯ್ಯೋ ಅಂತ ಕಣ್ಣು ಬಿಡುವಷ್ಟರಲ್ಲಿ ನಮಗೆ ದಿಗ್ಭ್ರಮೆ ಆಗಿತ್ತು. ಮುಂದಿನ ಸೀಟ್‌ನಲ್ಲಿ ತಾಯಿಯೊಬ್ಬಳು ಮಗು ಎತ್ತಿಕೊಂಡು ಕುಳಿತಿದ್ದಳು. ಅಪಘಾತವಾದಾಗ ಅವಳು ಅಷ್ಟು ದೂರ ಹೋಗಿ ಬಿದ್ದಳು. ಕೂಡಲೇ ಅಕ್ಕಪಕ್ಕದವರು ಆಕೆಯನ್ನು ಎಳೆದುಕೊಂಡರು ಎಂದು ವಿವರಿಸಿದರು.

ಅಪಘಾತ ಸ್ಥಳಕ್ಕೆ ಅರಸೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಹಾಲಿನ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗುತ್ತಿದ್ದು, ಚಾಲಕ ಸ್ಥಳದಲ್ಲೇ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು