NEWSಕೃಷಿದೇಶ-ವಿದೇಶ

ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕುರುಬೂರು ಶಾಂತಕುಮಾರ್ ಆಗ್ರಹ

ಕರ್ನಾಟಕ ಸರ್ಕಾರ 4450 ರೂ. ನಿಗದಿ ಮಾಡಬೇಕೆಂದು ವರದಿ ನೀಡಿದೆ ಇದನ್ನು ಗಮನಿಸಿ ಹೆಚ್ಚುವರಿ ಬೆಲೆ ನಿಗದಿ ಮಾಡಬೇಕಾಗಿತ್ತು. ಇದು ರೈತರನ್ನು ಕಬ್ಬು ಬೆಳೆಯಿಂದ ಒಕ್ಕಲಿಬಿಸುವ ಕಾರ್ಯವಾಗಿದೆ. ಕೂಡಲೇ ಎಫ್‌ಆರ್‌ಪಿ ದರ ಪುನರ್ ಪರಿಸಿಲಿಸಿ ಟನ್ ಕಬ್ಬಿಗೆ 4500 ರೂ. ನಿಗದಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಕಬ್ಬು ಬೆಳೆಗಾರ ರೈತರಿಗೆ ನ್ಯಾಯಸಮತವಲ್ಲ ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೇಂದ್ರ ಸಚಿವ ಸಂಪುಟ ನಿನ್ನೆ ತೀರ್ಮಾನಿಸಿ ಘೋಷಣೆ ಮಾಡಿರುವ 2026- 27ನೇ ಸಾಲಿಗೆ 10.25 ಸಕ್ಕರೆ ಇಳುವವರಿ ಟನ್ ಕಬ್ಬಿಗೆ 3650 ರೂ. ರೈತರ ಉತ್ಪಾದನ ವೆಚ್ಚಕಿಂತ ಕಡಿಮೆಯಾಗಿದೆ ಎಂದು ಕಿಡಿಕಾರಿದ್ದಾರೆ.

ಇನ್ನು ಕರ್ನಾಟಕ ಸರ್ಕಾರ 4450 ರೂ. ನಿಗದಿ ಮಾಡಬೇಕೆಂದು ವರದಿ ನೀಡಿದೆ ಇದನ್ನು ಗಮನಿಸಿ ಹೆಚ್ಚುವರಿ ಬೆಲೆ ನಿಗದಿ ಮಾಡಬೇಕಾಗಿತ್ತು. ಇದು ರೈತರನ್ನು ಕಬ್ಬು ಬೆಳೆಯಿಂದ ಒಕ್ಕಲಿಬಿಸುವ ಕಾರ್ಯವಾಗಿದೆ. ಕೂಡಲೇ ಎಫ್‌ಆರ್‌ಪಿ ದರ ಪುನರ್ ಪರಿಸಿಲಿಸಿ ಟನ್ ಕಬ್ಬಿಗೆ 4500 ರೂ. ನಿಗದಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಕಬ್ಬಿನಿಂದ ಸಕ್ಕರೆ ಎಥಾನಾಲ್‌, ವಿದ್ಯುತ್, ಕಾಂಪೋಸ್ಟ್ ಗೊಬ್ಬರ ಇನ್ನು ಇತರ ಉತ್ಪನ್ನಗಳನ್ನು ಉತ್ಪಾದಿಸುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ನಿರಂತರವಾಗಿ ವಂಚನೆ ಮಾಡುತ್ತಿವೆ. ಸರ್ಕಾರದ ಆದೇಶಗಳನ್ನು ವಾಮ ಮಾರ್ಗದಲ್ಲಿ ನಿರ್ಲಕ್ಷಿಸುತ್ತಿವೆ ಎಂದು ಆರೋಪಿಸಿದ್ದಾರೆ.

ಇನ್ನು ಕಬ್ಬಿನ ಹಣ ಪಾವತಿ ಸಕಾಲಕ್ಕೆ ಸಮರ್ಪಕವಾಗಿ ಮಾಡುತ್ತಿಲ್ಲ. ಇಂತಹ ವಿಚಾರದಲ್ಲಿ ಕೇಂದ್ರ ಸರ್ಕಾರ ಸಕ್ಕರೆ ನಿಯಂತ್ರಣ ಕಾಯ್ದೆ 1966 ತಿದ್ದುಪಡಿ ಮಾಡಬೇಕು. ಈ ಮೂಲಕ ಕಾನೂನು ಉಲ್ಲಂಗಿಸುವ ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಶಿಕ್ಷೆ ನೀಡುವ ಕಠಿಣ ಕಾಯ್ದೆ ಜಾರಿಗೆ ತರಬೇಕು ಎಂದು ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC: ಅತೀ ಶೀಘ್ರದಲ್ಲೇ ಶೇ.15ರಿಂದ 20ರಷ್ಟು ಬಸ್‌ ಪ್ರಯಾಣ ದರ ಏರಿಕೆ- ಸುಳಿವುಕೊಟ್ಟ ಮುಖ್ಯಮಂತ್ರಿ ಡಿಕೆಶಿ ವಿದ್ಯುತ್‌ ಖಾಸಗೀಕರಣ ನಿಲ್ಲಿಸಲು ಆಗ್ರಹಿಸಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಪ್ರತಿಭಟನೆ NWKRTC: ಡೋರ್‌ ಹಾಕದಿದ್ದರೆ, ಚಾಲಕರ ಬಳಿ ಕುಳಿತಿದ್ದರೆ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಿಸಿ- ತನಿಖಾಧಿಕಾರಿಗಳಿ ಡಿಸ... ಇದು ನಿಗಮಗೆ ಗೊತ್ತೆ? ಗ್ರಾಚ್ಯುಟಿ, ರಜೆ ನಗದೀಕರಣ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸುವಂತಿಲ್ಲ 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ