Please assign a menu to the primary menu location under menu

NEWSಸಂಸ್ಕೃತಿ

ಕೈ ಮುಗಿದು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಸ್ವಾಗತ ಕೋರಿದ ಸಿಎಂ, ರಾಜ್ಯಪಾಲರು

ವಿಜಯಪಥ ಸಮಗ್ರ ಸುದ್ದಿ

ಮೈಸೂರು : ನಗರದ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯದ ಪರವಾಗಿ ಬರ ಮಾಡಿಕೊಳ್ಳಲಾಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೈ ಮುಗಿದು ಸ್ವಾಗತಿಸಿದರು.

ಬಳಿಕ ಜಿಲ್ಲಾಡಳಿತ ಪರವಾಗಿ ಸ್ವಾಗತಿಸಲಾಯಿತು. ನಂತರ ರಸ್ತೆ ಮಾರ್ಗವಾಗಿ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ರಾಷ್ಟ್ರಪತಿ ಅವರನ್ನು ಆದಿವಾಸಿ ನೃತ್ಯಗಳ ಮೂಲಕ ಸಾಂಪ್ರದಾಯಿಕವಾಗಿ ಬರಮಾಡಿಕೊಂಡರು. ಕೊಡವರ ನೃತ್ಯ, ಜೇನುಕುರುವ, ಕೊರಗ ಸಮುದಾಯದ ಕಲಾವಿದರು ಆಕರ್ಷಣೆಯ ಹೆಜ್ಜೆ ಹಾಕಿ ಮೆರಗುತುಂಬಿದರು.

ಇನ್ನು ಇದೇ ಮೊದಲ ಬಾರಿಗೆ ದಸರಾ ಉದ್ಘಾಟನೆಗೆ ರಾಷ್ಟ್ರಪತಿಯವರು ಆಗಮಿಸಿರುವುದು ನಾಡಿನ ಜನತೆಗೆ ಮತ್ತು ದೇಶಕ್ಕೆ ಹೆಮ್ಮೆ ವಿಷಯವಾಗಿದೆ.

ವಿಶ್ವವಿಖ್ಯಾತ ಮೈಸೂರು ದಸರಾ 2022ರ ಅಂಗವಾಗಿ ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಆಗಮಿಸಿದ ಹಿನ್ನೆಲೆಯಲ್ಲಿ ಬುಡಕಟ್ಟು ಸಮುದಾಯದವರು ಚಾಮುಂಡಿಬೆಟ್ಟದಲ್ಲಿ ನೃತ್ಯದ ಮೂಲಕ ಗಮನಸೆಳೆದರು.

ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ದೆಹಲಿಯ ಪಾಲಂ ವಿಮಾನ ನಿಲ್ದಾಣದಿಂದ ಮೈಸೂರಿಗೆ ನೇರವಾಗಿ ಆಗಮಿಸಿದರು.

ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸಾಂಸ್ಕೃತಿಕ ನಗರಿಗೆ ಮೊದಲ ಬಾರಿಗೆ ಆಗಮಿಸುತ್ತಿರುವ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಸ್ವಾಗತಿಸಿದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಕೊಟ್ಟ ಚುನಾವಣೆ ಪ್ರಣಾಳಿಕೆಯ ಭರವಸೆ ಈಡೇರಿಸುವತ್ತಾ ಕಾಂಗ್ರೆಸ್‌ ಸರ್ಕಾರ...!? KSRTC 4 ನಿಗಮಗಳ ಬಸ್‌ ಚೀಟಿ ದರ ಪರಿಷ್ಕರಣೆಯಿಂದ ತಲೆದೋರಿದ ಚಿಲ್ಲರೆ ಸಮಸ್ಯೆ-ನಿರ್ವಾಹಕರು ಪ್ರಯಾಣಿಕರ ನಡುವೆ ಫೈಟ್‌ KSRTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ NWKRTC: ನಿರ್ವಾಹಕ ಆತ್ಮಹತ್ಯೆಗೆ ಯತ್ನ- ಅಮಾನತು ಮಾಡುವ ಉದ್ದೇಶದಿಂದಲೇ ಮೆಮೋ ಕೊಟ್ಟ ಆರೋಪ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನೈರ್ಮಲ್ಯದ ಕೊರತೆ: ಕಸ ಮುಕ್ತ ಅಭಿಯಾನ ಕನ್ನಡ ನುಡಿ ಪ್ರತಿಯೊಬ್ಬ ಕನ್ನಡಿಗನ ಉಸಿರಾಗಬೇಕು: ಅಂದಾನೆಪ್ಪ ವಿಭೂತಿ ಸರ್ವೇ ನಂ-97 ಪುಸ್ತಕ ಮನುಷ್ಯನ ಬದುಕಿನ ಸಂಕಟಗಳಿಗೆ ಕನ್ನಡಿ ಇದ್ದಂತೆ: ರಘುನಾಥ ನ್ಯೂಡೆಲ್ಲಿ: ದಲೈವಾಲ ಪ್ರಾಣಕ್ಕೆ ಕುತ್ತು ಬಂದರೆ ದೇಶದ ರೈತರು ಕೇಂದ್ರ ಸರ್ಕಾರದ ಮರಣ ಶಾಸನ ಬರೆಯಬೇಕಾಗುತ್ತದೆ ಎಚ್ಚರ ಜ್ವರ ಬಂದಾಗ ಎಳನೀರು ಕುಡಿಯುವುದು ಒಳ್ಳೆಯದೇ..ಏಕೆಂದರೆ? ಬಿಜೆಪಿ ಸರ್ಕಾರದಲ್ಲಿ ನಿರಂತರವಾಗಿ ವರ್ಷಕ್ಕೆ ಎರಡೆರಡು ಬಾರಿ ಬಸ್ ಟಿಕೆಟ್‌ ದರ ಹೆಚ್ಚಳ: ಪಟ್ಟಿ ರಿಲೀಸ್​ ಮಾಡಿದ ಸಾರಿಗ...