ಬೆಂಗಳೂರು: ಮೆಜಿಸ್ಟಿಕ್ನಲ್ಲಿ ಧರ್ಮಸ್ಥಳಕ್ಕೆ ಹೊರಡುವ ಮೊದಲ ಕೆಎಸ್ಆರ್ಟಿಸಿ ಬಸ್ನಲ್ಲಿ ಸಿಎಂ ಸಿದ್ದರಾಮಯ್ಯ ಟಿಕೆಟ್ ವಿತರಣೆ ಮಾಡುವ ಮೂಲಕ ಶಕ್ತಿ ಯೋಜನೆಗೆ ಅಧಿಕೃತ ಚಾಲನೆ ನೀಡಿದರು. ಬಳಿಕ ಮೆಜೆಸ್ಟಿಕ್ನಿಂದ ಹೊರಟ ಬಸ್ಗಳಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಾರಿಗೆ ಸಚಿವರು ಹಸಿರು ನಿಶಾನೆ ತೋರಿದರು.
ಈ ಮೂಲಕ ರಾಜ್ಯಾದ್ಯಂತ ಇಂದು ಮಧ್ಯಾಹ್ನದಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭವಾಗಿದೆ. ವಿಧಾನಸೌಧ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಬಳಿಕ ಸಿಎಂ ಸಿದ್ದರಾಮ್ಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಎಂಟಿಸಿ ಬಸ್ನಲ್ಲಿ ಮೆಜೆಸ್ಟಿಕ್ಗೆ ಒಟ್ಟಿಗೆ ಪ್ರಯಾಣ ಬೆಳೆಸಿದರು. ಈ ವೇಳೆ ಡಿಸಿಎಂ ಡಿಕೆಶಿ ಅವರು ಮಹಿಳೆಯರಿಗೆ ಉಚಿತವಾಗಿ ಟಿಕೆಟ್ ವಿತರಣೆ ಮಾಡಿದರು.
ಇದಕ್ಕೂ ಮುನ್ನ ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಕಾರ್ಯಕ್ರಮದಲ್ಲಿ ಸಿಎಂ ಹಾಗೂ ಉಪಮುಖ್ಯಮಂತ್ರಿ ಅವರು ದೀಪ ಬೆಳಗುವುದರ ಮೂಲಕ ಶಕ್ತಿ ಯೋಜನೆ ಉದ್ಘಾಟಿಸಿದರು. ಬಳಿಕ ಶಕ್ತಿ ಯೋಜನೆಯ ಲೋಗೋ ಮತ್ತು ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಬಿಡುಗಡೆ ಮಾಡಿದರು. ಇದೇ ವೇಳೆ ಸಾಂಕೇತಿಕವಾಗಿ ಐದು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಸಚಿವರಾದ ಕೆ. ಜೆ. ಜಾರ್ಜ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಸಕರಾದ ರಿಜ್ವಾನ್ ಅರ್ಷದ್, ಗೋವಿಂದರಾಜ್, ಬಿ.ಕೆ.ಹರಿಪಸ್ರಾದ್, ಯು. ಬಿ. ವೆಂಕಟೇಶ್, ನಾಗರಾಜ್ ಯಾದವ್ ಹಾಗೂ ಎ. ಸಿ. ವೆಂಕಟೇಶ ಉಪಸ್ಥಿತರಿದ್ದರು.