NEWSಕ್ರೀಡೆನಮ್ಮರಾಜ್ಯ

ದೇಶ ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಮಂಗಳೂರಿನ ನ್ಯೂ ಉರ್ವ ಕ್ರೀಡಾಂಗಣದಲ್ಲಿ ನಡೆದ “ಚೀಫ್ ಮಿನಿಸ್ಟರ್ – ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025 ಪಂದ್ಯಾವಳಿ” ಉದ್ಘಾಟಿಸಿ ಮಾತನಾಡಿದರು

ಒಲಂಪಿಕ್ಸ್, ಪ್ಯಾರಾ ಒಲಂಪಿಕ್ಸ್ ಸೇರಿ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದವರಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಎ ಗುಂಪಿನ ಹುದ್ದೆಗಳ ಜೊತೆಗೆ ಇತರೆ ಹುದ್ದೆಗಳನ್ನೂ ಮೀಸಲಿಟ್ಟಿದ್ದೇವೆ ಎಂದರು.

ಡಿವೈಎಸ್‌ಪಿ ಸೇರಿ ಇತರೆ ಪೊಲೀಸ್ ಹುದ್ದೆಗಳಲ್ಲೂ ಶೇ.2ರಷ್ಟಿದ್ದ ಹುದ್ದೆ ಮೀಸಲಾತಿಯನ್ನು ಶೇ.3ಕ್ಕೆ ಹೆಚ್ವಿಸಿದ್ದೇನೆ. ಜತೆಗೆ ಒಲಂಪಿಕ್‌ನಲ್ಲಿ ಪದಕ ತಂದು ರಾಜ್ಯದ, ರಾಷ್ಟ್ರದ ಕೀರ್ತಿ ಹೆಚ್ಚಿಸುವವರಿಗೆ 5 ಕೋಟಿ ರೂಪಾಯಿ ಬಹುಮಾನವನ್ನೂ ಘೋಷಿಸಿದ್ದೇನೆ. ಇನ್ನೂ ಅಗತ್ಯವಾದ ಅನುಕೂಲಗಳನ್ನೆಲ್ಲಾ ಮಾಡಿಕೊಡಲು ಸರ್ಕಾರ ಸಿದ್ಧವಿದೆ. ಒಟ್ಟಿನಲ್ಲಿ ನೀವು ಒಲಿಂಪಿಕ್‌ನಲ್ಲಿ ದೇಶಕ್ಕಾಗಿ ಪದಕ ತರಬೇಕು ಎಂದು ಹುರಿದುಂಬಿಸಿದರು.

ವಿಶ್ವದ ಅತ್ಯಂತ ಜನಪ್ರಿಯ ಆಟಗಳಲ್ಲಿ ಬ್ಯಾಂಡ್ಮಿಂಟನ್ ಕೂಡ ಒಂದು. ಪ್ರಕಾಶ್ ಪಡುಕೋಣೆ, ಪುಲ್ಲೇಲ ಗೋಪಿಚಂದ್, ಸೈನಾ ನೆಹ್ವಾಲ್, ಪಿ.ವಿ.ಸಿಂಧು ಭಾರತೀಯ ಬ್ಯಾಡ್ಮಿಂಟನ್ ಗೆ ಅಡಿಪಾಯ ಹಾಕಿ ದೇಶಕ್ಕೆ ಕೀರ್ತಿ ತಂದಿದ್ದಾರೆ ಎಂದರು.

ಈ ಪಂದ್ಯಾವಳಿ ನಡೆಯುತ್ತಿರುವ ಈ ಉರ್ವ ಒಳಾಂಗಣ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ಮಾಡಿದ್ದು ನಾನೇ, ಉದ್ಘಾಟನೆ ಕೂಡ ನಾನೇ ಮಾಡಿದೆ. ನಮ್ಮ ಸರ್ಕಾರದ್ದೇ ಹಣ ಎಂದರು.

ಇನ್ನು ಹಿಂದಿನ ಬಿಜೆಪಿ ಸರ್ಕಾರ ಈ ಕ್ರೀಡಾಂಗಣ ಪೂರ್ಣಗೊಳ್ಳಲು ಸಹಕಾರ ನೀಡಲಿಲ್ಲ. ಆದರೆ ಮತ್ತೆ ನಾನೇ ಮುಖ್ಯಮಂತ್ರಿ ಆಗಿ ಬಂದು ಒಟ್ಟು 38 ಕೋಟಿ ರೂಪಾಯಿಗಳನ್ನು ನೀಡಿ ಕ್ರೀಡಾಂಗಣ ಪೂರ್ಣಗೊಳಿಸಿದೆ ಎಂದರು.

Megha
the authorMegha

Leave a Reply

error: Content is protected !!
Latest news
ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ