NEWSಕೃಷಿದೇಶ-ವಿದೇಶ

ನ್ಯೂಡೆಲ್ಲಿ: ವಿವಿಧ ಬೇಡಿಕೆಗಳ ಈಡೇರಿಸದ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಸಮರ ಸಾರಿದ ದೇಶದ ಅನ್ನದಾತರು

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೇಶದ ರೈತರ ಬೃಹತ್ ರ‍್ಯಾಲಿ ಸೋಮವಾರ ದೆಹಲಿಯಲ್ಲಿ ನಡೆದು ಜಂತರ್ ಮಂತರ್‌ನಲ್ಲಿ ಸಮಾವೇಶಗೊಂಡಿತು.

ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯತರ ಸಂಘಟನೆಯ ಕರೆಯ ಮೇರೆಗೆ ಸಹಸ್ರಾರು ರೈತರು ಜಂತರ್ ಮಂತರ್ ನಲ್ಲಿ ಕಿಸಾನ್ ಮಹಾಪಂಚಾಯತ್ ರ‍್ಯಾಲಿ ನಡೆಸಿದರು ದೇಶದ ಹಲವು ರಾಜ್ಯಗಳಿಂದ ರೈತರು ತಂಡೋಪ ತಂಡವಾಗಿ ರ‍್ಯಾಲಿಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿದರು.

ಕೃಷಿ ಉತ್ಪನ್ನಗಳಿಗೆ MSP ಗ್ಯಾರಂಟಿ ಕಾನೂನು ಸೇರಿದಂತೆ ರೈತಪರ ಬೇಡಿಕೆಗಳ ಅನುಷ್ಠಾನಕ್ಕಾಗಿ ದೆಹಲಿಯಲ್ಲಿ ಹಮ್ಮಿಕೊಂಡಿರುವ ಬೃಹತ್ “ಕಿಸಾನ್ ಮಹಾಪಂಚಾಯತ್”ನಲ್ಲಿ ಕರ್ನಾಟಕದ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಬಣದ ವಿವಿಧ ಜಿಲ್ಲೆಗಳ ನೂರಾರು ರೈತರು ರ‍್ಯಾಲಿಯಲ್ಲಿ ಭಾಗವಹಿಸಿದ್ದರು.

ಈ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ (SKM) ರಾಜಕೀಯೇತರ ರಾಷ್ಟ್ರಮಟ್ಟದ ವೇದಿಕೆ ನೇತೃತ್ವದ ಜಗಜಿತ್ ಸಿಂಗ್ ದಲೆವಾಲಾ ವಹಿಸಿದರು, ಇದರಲ್ಲಿ ದೇಶದಾದ್ಯಂತದ ಮಧ್ಯ ಪ್ರದೇಶ, ಬಿಹಾರ್, ಹರಿಯಾಣ, ಪಂಜಾಬ್, ಕರ್ನಾಟಕ ಹಾಗೂ ತಮಿಳುನಾಡು ಮತ್ತಿತರ ರಾಜ್ಯಗಳ ರೈತ ಸಂಘಟನೆಗಳು ಸಕ್ರಿಯವಾಗಿ ಪಾಲ್ಗೊಂಡಿವೆ.

ಹೋರಾಟದ ಮುಖ್ಯ ಬೇಡಿಕೆಗಳು: 1. ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಖಾತರಿ ಕಾನೂನು ಜಾರಿಯಾಗಬೇಕು. 2. ದೇಶದ ರೈತರ ಸಂಪೂರ್ಣ ಸಾಲ ಮನ್ನಾ ಆಗಬೇಕು.

3. ಭಾರತ–ಅಮೆರಿಕ ನಡುವಿನ ವ್ಯಾಪಾರ ಒಪ್ಪಂದಗಳಲ್ಲಿ ಹೈನುಗಾರಿಕೆ, ಕೋಳಿ ಹಾಗೂ ಕುರಿ ಸಾಕಾಣಿಕೆ ಉದ್ಯಮಗಳನ್ನು ಹೊರಗಿಡಬೇಕು. 4. ಫಲವತ್ತಾದ ಕೃಷಿಭೂಮಿಯನ್ನು ಕೈಗಾರಿಕೆಗಳಿಗೆ ವಶಪಡಿಸಿಕೊಳ್ಳುವ ನೀತಿ ಕೈಬಿಡಬೇಕು. 5. ರೈತ ಹೋರಾಟದಲ್ಲಿ ಭಾಗವಹಿಸಿದ ರೈತರ ಮೇಲಿರುವ ಎಲ್ಲಾ ಪೊಲೀಸು ದೂರುಗಳನ್ನು ರದ್ದುಪಡಿಸಬೇಕು.

ಕರ್ನಾಟಕದಿಂದ ರೈತರ ಮುಖಂಡರಾದ ಸುರೇಶ್ ಪಾಟೀಲ್ ಹತ್ತಳ್ಳಿ ದೇವರಾಜ್, ಬರಡನಪುರ ನಾಗರಾಜ್, ಬಸವರಾಜ್ ಪಾಟೀಲ್, ರಮೇಶ್ ಹೂಗಾರ್, ಶಿವರಾಜ್ ನಾಯಕ್ ಮುಂತಾದವರು ಭಾಗವಹಿಸಿದರು.

Deva
the authorDeva

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ