NEWSದೇಶ-ವಿದೇಶನಮ್ಮರಾಜ್ಯ

ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ 140 ಕೋಟಿ ಭಾರತೀಯರ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು. ತ್ಯಾಗ ಮನೋಭಾವದಿಂದ ಯೋಧರು ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ. ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ. 140 ಕೋಟಿ ಭಾರತೀಯರ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಟೌನ್‌ಹಾಲ್‌ನಲ್ಲಿ ಆಯೋಜಿಸಿದ್ದ “ಜೈ ಹಿಂದ್ ಸಭಾ” ಕಾರ್ಯಕ್ರಮದಲ್ಲಿ  ಮಾತನಾಡಿದರು.

ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ಭಾರತ ತನ್ನ ಇತಿಹಾಸದಲ್ಲೇ ಯಾವತ್ತೂ ರಾಜಿ ಆಗಿಲ್ಲ. ಮುಂದೆಯೂ ಆಗುವುದಿಲ್ಲ. ಇದು ಪ್ರತಿಯೊಬ್ಬ ಭಾರತೀಯರ ಬದ್ಧತೆ ಎಂದು ಹೇಳಿದರು.

ಇನ್ನುಮುಂದೆ ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ವಿಧಿಸುವುದನ್ನು ನಿಲ್ಲಿಸಲಾಗುವುದು. ಹಾಗೆಯೇ ನಿವೃತ್ತ ಯೋಧರ ಕಲ್ಯಾಣಕ್ಕೆ ಅಗತ್ಯ ಕ್ರಮಗಳನ್ನೆಲ್ಲ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋಧರ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಗೌರವಿಸಿದರು.

Megha
the authorMegha

Leave a Reply

error: Content is protected !!