ಮಂಡ್ಯ: ನಂಜನಗೂಡು ತಾಲೂಕಿನ ಯುವತಿಯೊಬ್ಬಳ ಶವ ಜಿಲ್ಲೆಯ ಬೂದನೂರು ಸಮೀಪದ ಕೆರೆಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದ ಚಾಂದಿನಿ (22) ಎಂಬ ಯುವತಿಯ ಶವವೆ ಕೆರೆಯಲ್ಲಿ ಪತ್ತೆಯಾಗಿರುವುದು. ಈಕೆ ನಂಜನಗೂಡು ಮೂಲದ ಯುವತಿ ಎಂದು ಗುರುತು ಪತ್ತೆಯಾಗಿದ್ದು, ಮಂಡ್ಯ ಜಿಲ್ಲೆಯ ಬೂದನೂರು ಗ್ರಾಮದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಕೆರೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರ ಬಹುದು ಎಂದು ಹೇಳಲಾಗುತ್ತಿದೆ.
ಇನ್ನು ಭಾನುವಾರ ಮಧ್ಯಾಹ್ನ ಯುವಕನೊಬ್ಬನೊಂದಿಗೆ ಈ ಯುವತಿ ಬೈಕ್ನಲ್ಲಿ ಬಂದು ಕೆಲಕಾಲ ಕೆರೆಯ ಬಳಿ ಕುಳಿತಿದ್ದನ್ನು ಗನಿಸಿದ್ದಾಗ ಕೆಲ ಸ್ಥಳೀಯರು ನೋಡಿದರು ಎಂದು ತಿಳಿದು ಬಂದಿದೆ..
ಆ ಬಳಿಕ ಯುವತಿ ತನ್ನ ಬ್ಯಾಗ್, ಚಪ್ಪಲಿಯನ್ನು ಕೆರೆಯ ದಡದಲ್ಲೇ ಬಿಟ್ಟು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಸಂಜೆ ಕೆರೆ ದಡದಲ್ಲಿದ್ದ ಬ್ಯಾಗ್ ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಯುವತಿಯ ಮೃತದೇಹವನ್ನು ಕೆರೆಯಿಂದ ಮೇಲೆತ್ತಿ ಮಂಡ್ಯ ಮಿಮ್ಸ್ ಶವಗಾರಕ್ಕೆ ರವಾನೆ ಮಾಡಿದ್ದಾರೆ.