NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಸಂಘಟನೆಗಳ ಸಭೆ ಕರೆದ ಹಿನ್ನೆಲೆ ನೌಕರರ ಅಹೋರಾತ್ರಿ ಧರಣಿ ತಾತ್ಕಾಲಿಕವಾಗಿ ಕೈ ಬಿಡಲು ನಿರ್ಧಾರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳ ಅಧಿಕಾರಿಗಳು ಮತ್ತು ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ಮಾ.4ರಿಂದ ಫ್ರೀಡಂ ಪಾರ್ಕ್‌ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಕೈಬಿಡುವ ಬಗ್ಗೆ ಸಮಾನ ಮನಸ್ಕರ ವೇದಿಕೆ ನಿರ್ಧರಿಸಿದೆ.

ನಿನ್ನೆ ಅಂದರೆ ಮಾ.5ರಂದು ಸಾರಿಗೆ ನೌಕರರ ಸಂಘಟನೆಗಳ ಮುಖಂಡರ ಸಭೆಯನ್ನು ಮಾ.7ರಂದು ಕರೆದಿರುವ ಬಗ್ಗೆ ನಿಗಮದ ಸಿಬ್ಬಂದಿ ಮತ್ತು ಜಾಗ್ರತಾ ವಿಭಾಗದ ನಿರ್ದೇಶಕರು ಸೂಚನ ಪತ್ರ ಹೊರಡಿಸಿರುವುದರಿಂದ ಇಂದು ಧರಣಿಯನ್ನು ತಾತ್ಕಾಲಿಕವಾಗಿ ಕೈಬಿಡಲಾಗುವುದು ಎಂದು ವೇದಿಕೆಯ ಪದಾಧಿಕಾರಿಗಳು ತಿಳಿಸಿದ್ದಾರೆ.

ಆದರೆ, ಈಗಲೂ ಕೂಡ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಮುಂದುವರೆದಿದ್ದು ವಿವಿಧೆಡೆಯಿಂದ ನೂರಾರು ನೌಕರರು ಆಗಮಿಸುತ್ತಿರುವ ಹಿನ್ನೆಯಲ್ಲಿ ಅವರ ಬರುವಿಕೆಗಾಗಿ ನಾವು ಮುಂದುರಿಸಿದ್ದೇವೆ. ಎಲ್ಲರು ಬಂದು ಸೇರಿದ ಮೇಲೆ ಅಂದರೆ ಮಧ್ಯಾಹ್ನದೊಳಗೆ ಧರಣಿಯನ್ನು ತಾತ್ಕಾಲಿಕವಾಗಿ ಕೈ ಬಿಡುವ ಬಗ್ಗೆ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಒಂದು ವೇಳೆ ನಾಳೆ ಅಂದರೆ ಮಾ.7ರಂದು ನಡೆಯುವ ಸಭೆಯಲ್ಲಿ ನೌಕರರ ಬೇಡಿಕೆಗಳ ವಿರುದ್ಧ ತೀರ್ಮಾನ ತೆಗೆದುಕೊಂಡರೆ ನಾವು ಮತ್ತೆ ಅಹೋರಾತ್ರಿ ಧರಣಿಯನ್ನು ಮುಂದರಿಸುವ ಬಗ್ಗೆಯೂ ನಿರ್ಧಾರ ಮಾಡಬೇಕಿದೆ. ಹೀಗಾಗಿ ನೌಕರರು ಮತ್ತು ಇನ್ನು ಕೆಲ ಮುಖಂಡರ ಬರುವಿಕೆಗಾಗಿ ಕಾಯುತ್ತಿದ್ದೇವೆ ಎಂದು ಪದಾಧಿಕಾರಿಗಳು ತಿಳಿಸಿದ್ದಾರೆ.

ಇನ್ನು ನಾವು ಯಾವುದೇ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಕೈಗೊಂಡಿಲ್ಲ. ಈ ಬಗ್ಗೆ ಯಾವುದೇ ಹೇಳಿಕೆಯನ್ನು ನೀಡಿಲ್ಲ ಎಂದು ವೇದಿಕೆಯ ಪದಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Leave a Reply

error: Content is protected !!
LATEST
ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ