CrimeNEWSನಮ್ಮಜಿಲ್ಲೆ

ಮೇಲಧಿಕಾರಿ ಕಿರುಕುಳಕ್ಕೆ ನೊಂದು ನಾಡ ಕಚೇರಿಯ ಅಂಗವಿಕಲ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮೇಲಧಿಕಾರಿಯ ಕಿರುಕುಳದಿಂದ ಮಾನಸಿಕವಾಗಿ ನೊಂದು ಡೆತ್ ನೋಟ್ ಬರೆದಿಟ್ಟು ನಾಡಕಚೇರಿಯ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ನಾಡ ಕಚೇರಿಯಲ್ಲಿ ನಡೆದಿದೆ.

ನಾಡ ಕಚೇರಿಯ ಕಂಪ್ಯೂಟರ್ ಆಪರೇಟರ್‌ ವಿಶೇಷ ಚೇತನರೂ ಆಗಿದ್ದ ಪರಮೇಶ್ ಎಂಬುವವರೇ ಆತ್ಮಹತ್ಯೆ ವಿಷಸೇವಿಸಿ ಆತ್ಮಹತ್ಯೆ ಮಾಡವರು.

ಹುಲ್ಲಹಳ್ಳಿಯ ನಾಡ ಕಚೇರಿಯಲ್ಲಿ ಹಲವು ವರ್ಷಗಳಿಂದ ಕಂಪ್ಯೂಟರ್ ಆಪರೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪರಮೇಶ್ ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿದ್ದಾರೆ.

ವಿಷಯ ತಿಳಿದ ಸಾರ್ವಜನಿಕರು ಕೂಡಲೇ ಅವರನ್ನು ಹುಲ್ಲಹಳ್ಳಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ. ಆರ್. ಆಸ್ಪತ್ರೆಗೆ ದಾಖಲಿಸಿದ್ದರಾದರೂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

ಕಳೆದ ಏಪ್ರಿಲ್‌ನಿಂದ ನನಗೆ ಸಂಬಳವಾಗದೆ ಜೀವನ ನಡೆಸುವುದೇ ಸಮಸ್ಯೆಯಾಗಿತ್ತು. ಅಲ್ಲದೆ ನಾಡಕಚೇರಿಯ ಉಪತಹಸಿಲ್ದಾರ್ ಶಿವಕುಮಾರ್ ಎಂಬುವವರು ನಾನು ಅಂಗವಿಕಲನಾಗಿದ್ದರೂ ನನಗೆ ಮಾನಸಿಕ ಹಿಂಸೆ ನೀಡಿ ನನ್ನ ಮೇಲೆ ವೈಯಕ್ತಿಕ ದ್ವೇಷ ಸಾಧಿಸುತ್ತಾ ಕೆಲಸ ಮಾಡಲು ಬಿಡುತ್ತಿರಲಿಲ್ಲ.

ನನ್ನ ಆತ್ಮಹತ್ಯೆಗೆ ಅವರೇ ಕಾರಣರಾಗಿದ್ದಾರೆ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

error: Content is protected !!
LATEST
ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ