ದುಬೈ: ಕೊನೆಗೂ 140 ಕೋಟಿ ಭಾರತೀಯರ ಕನಸು ನನಸಾಗಿದೆ. ನ್ಯೂಜಿಲೆಂಡ್ ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ 4 ವಿಕೆಟ್ಗಳ ಗೆಲುವು ಸಾಧಿಸುವ ಮೂಲಕ ಭಾರತ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ ಮುಡಿಗೇರಿಸಿಕೊಂಡಿದೆ. 2024ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಗೆದ್ದಿದ್ದ ಭಾರತಕ್ಕಿದು ಸತತ 2ನೇ ಐಸಿಸಿ ಟ್ರೋಫಿ ಆಗಿರುವುದು ವಿಶೇಷ.
ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 50 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿತ್ತು. ಸ್ಪರ್ಧಾತ್ಮಕ ಮೊತ್ತದ ಗುರಿ ಬೆನ್ನಟ್ಟಿದ ಭಾರತ 49 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿ ಗೆಲುವು ಸಾಧಿಸಿತು. ಸಂಘಟಿತ ಬೌಲಿಂಗ್, ಬ್ಯಾಟಿಂಗ್ ಪ್ರದರ್ಶನದೊಂದಿಗೆ 2000 ಇಸವಿಯಲ್ಲಿ ಕಿವೀಸ್ ವಿರುದ್ಧ ಫೈನಲ್ ಸೋಲಿಗೆ ಅಂದರೆ 25 ವರ್ಷಗಳ ಬಳಿಕ ಭಾರತ ಸೇಡು ತೀರಿಸಿಕೊಂಡಿದೆ.
1998-99ರ ಚೊಚ್ಚಲ ಆವೃತ್ತಿಯಲ್ಲೇ ಚೋಕರ್ಸ್ ದಕ್ಷಿಣ ಆಫ್ರಿಕಾ ಟ್ರೋಫಿ ಮುಡಿಗೇರಿಸಿಕೊಂಡಿತ್ತು. 2000-01ರ ಆವೃತ್ತಿಯಲ್ಲಿ ನ್ಯೂಜಿಲೆಂಡ್ ಟ್ರೋಫಿ ಗೆದ್ದುಕೊಂಡಿತ್ತು. ಆದ್ರೆ 2002-03ರ ಆವೃತ್ತಿಯಲ್ಲಿ 2 ದಿನ ಫೈನಲ್ ನಡೆದರೂ ಮಳೆಗೆ ಪಂದ್ಯ ಬಲಿಯಾಯ್ತು. ಆದ್ದರಿಂದ ಭಾರತ ಮತ್ತು ಶ್ರೀಲಂಕಾವನ್ನ ಜಂಟಿಯಾಗಿ ಚಾಂಪಿಯನ್ಸ್ ಎಂದು ಘೋಷಿಸಲಾಯಿತು.
ಇನ್ನೂ 2004ರಲ್ಲಿ ವೆಸ್ಟ್ ಇಂಡೀಸ್, 2006-07, 2009-10ರಲ್ಲಿ ಆಸ್ಟ್ರೇಲಿಯಾ, 2013ರಲ್ಲಿ ಭಾರತ, 2017ರಲ್ಲಿ ಪಾಕಿಸ್ತಾನ ಚಾಂಪಿಯನ್ ಆಗಿತ್ತು. 2000, 2017ರಲ್ಲಿ ಭಾರತ ಫೈನಲ್ ತಲುಪಿದ್ರೂ ಟ್ರೋಫಿ ಗೆಲ್ಲುವ ಅವಕಾಶ ಕಳೆದುಕೊಂಡಿತ್ತು. 2000 ಇಸವಿಯಲ್ಲಿ ಕಿವೀಸ್ ವಿರುದ್ಧ, 2017ರಲ್ಲಿ ಪಾಕಿಸ್ತಾನದ ವಿರುದ್ಧ ಫೈನಲ್ನಲ್ಲಿ ಸೋತು ನಿರಾಸೆ ಅನುಭವಿಸಿತ್ತು. ಸದ್ಯ 25 ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿವೀಸ್ ವಿರುದ್ಧ ಗೆದ್ದು ಭಾರತ ಸೇಡು ತೀರಿಸಿಕೊಂಡಿದೆ.
ದಾಖಲೆಯ ಶತಕದ ಜೊತೆಯಾಟ: ಚೇಸಿಂಗ್ ಆರಂಭಿಸಿದ ಟೀಂ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ (Rohit Sharma), ಶುಭಮನ್ ಗಿಲ್ ಸ್ಫೋಟಕ ಇನ್ನಿಂಗ್ಸ್ ಕಟ್ಟುವಲ್ಲಿ ಯಶಸ್ವಿಯಾದರು. 112 ಎಸೆತಗಳಲ್ಲಿ ಈ ಜೋಡಿ 105 ರನ್ಗಳ ಜೊತೆಯಾಟ ನೀಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲೇ ಫೈನಲ್ ಪಂದ್ಯದಲ್ಲಿ ಶತಕದ ಜೊತೆಯಾಟ ಎಂಬ ದಾಖಲೆಗೂ ರೋಹಿತ್ ಗಿಲ್ ಪಾತ್ರರಾದರು.
ಗಿಲ್ 50 ಎಸೆತಗಳಲ್ಲಿ 31 ರನ್ ಗಳಿಸಿ ಔಟಾದರು. ಈ ಬೆನ್ನಲ್ಲೇ ವಿರಾಟ್ ಕೊಹ್ಲಿ ಕೇವಲ 1 ರನ್ ಗಳಿಸಿ ಎಲ್ಬಿಡಬ್ಲ್ಯೂಗೆ ತುತ್ತಾದರು. ಆ ಬಳಿಕವೂ ಕಿವೀಸ್ ಬೌಲರ್ಗಳನ್ನು ಬೆಂಡೆತ್ತಿದ ರೋಹಿತ್ 76 ರನ್ (83 ಎಸೆತ, 3 ಸಿಕ್ಸರ್, 7 ಬೌಂಡರಿ) ಗಳಿಸಿ ಪೆವಿಲಿಯನ್ಗೆ ಮರಳಿದರು.
Related

You Might Also Like
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ಅಂಗವಿಕಲರ ಬಸ್ಪಾಸ್ ಸೇರಿ ಎಲ್ಲ ಸರ್ಕಾರಿ ಸೌಲಭ್ಯಗಳಿಂದ ವಂಚಿತ ಅಂಗವಿಕಲ ಭೀಮಪ್ಪನಿಗೆ ಬೇಕಿದೆ ಸರ್ಕಾರದ ಆಸರೆ !
ತುಮಕೂರು: ಜಿಲ್ಲೆ ಹೊಸಹಳ್ಳಿ ಗ್ರಾಮ, ರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ಮಿಡಿಗೆಸಿ, ಮಧುಗಿರಿ ತಾಲೂಕಿನ ಅಂಗವಿಕಲ ಭೀಮಪ್ಪನಿಗೆ ಸರ್ಕಾರಿ ಸೌಲಭ್ಯ ಸಿಗಬೇಕಿದೆ. ಪೋಲಿಯೋಗೆ ಒಳಗಾಗಿರುವ ಭೀಮಪ್ಪನಿಗೆ ಬೆರಳಿನ ಗುರುತು ಸಹ...
ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು: ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ, ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ. ಕೆಅರ್ಎಸ್,...
KSRTC: ನಾಳೆಯಿಂದ ಸಾರಿಗೆ ನೌಕರರ ಉಪವಾಸ-ಧರಣಿ ಸತ್ಯಾಗ್ರಹ: ಚಂದ್ರಶೇಖರ್
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ನಾಳೆಯಿಂದ (ಜು.29)...