Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರ ತಡೆಯಲು ಮುಂದಾದ ಸರ್ಕಾರ?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಡಿಸೆಂಬರ್ 31ರಿಂದ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಯೋಜಿತ ಅನಿರ್ದಿಷ್ಟಾವಧಿ ಮುಷ್ಕರ ತಡೆಯಲು ಸಾರಿಗೆ ಇಲಾಖೆ ಸಕ್ರಿಯವಾಗಿದೆ. ಈ ನಡುವೆ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಲೇ ಬೇಕು ಎಂದು ಕ್ರಿಯಾ ಸಮಿತಿ ಒತ್ತಾಯಿಸುತ್ತಿದೆ.

ಈ ಸಂಬಂಧ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆಸಿ ಮುಷ್ಕರ ತಡೆಗಟ್ಟುವ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಯಿತು. ಎಲ್ಲ ನಾಲ್ಕು ನಿಗಮಗಳ ಹಿರಿಯ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು.

ಆರ್ಥಿಕ ಸವಾಲುಗಳು ಮತ್ತು ನೌಕರರ ಬೇಡಿಕೆಗಳು, ನಿಗಮಗಳ ಆರ್ಥಿಕ ಸ್ಥಿತಿ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆಯಾಯಿತು. ಆದಾಗ್ಯೂ, ಮುಷ್ಕರದ ಕರೆಯನ್ನು ಹೇಗೆ ಪರಿಹರಿಸಬೇಕು ಎಂಬುದರ ಬಗ್ಗೆ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ. ಮುಷ್ಕರಕ್ಕೆ ಕರೆ ಕೊಟ್ಟಿರುವ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹೆಚ್ಚಿನ ಚರ್ಚೆ ನಡೆಸಿ ಎಂದು ಸೂಚಿಸಲಾಯಿತು.

ಈ ನಡುವೆ ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ) ಯನ್ನು ಇನ್ನೂ ಆರು ತಿಂಗಳ ಕಾಲ ವಿಸ್ತರಿ ಆದೇಶ ಹೊರಡಿಸಿರುವ ಸರ್ಕಾರ ಈಗಾಗಲೇ ಜನವರಿ 1 ರಿಂದ ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗವಹಿಸುವುದನ್ನು ತಡೆಯುವುದಕ್ಕೆ ಯತ್ನಿಸಿದೆ. ಇನ್ನೊಂದೆಡೆ ಮುಷ್ಕರದ ಅವಧಿಯಲ್ಲಿ ನಿರಂತರವಾಗಿ ಬಸ್ ಸೇವೆ ಒದಗಿಸುವ ಗುರಿಯನ್ನು ಬಿಎಂಟಿಸಿ ಹೊಂದಿದೆ.

ಮುಷ್ಕರ ತಡೆಗಟ್ಟಲು ಮುಂದಾಯಿತು: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿ, ನಾಲ್ಕು ನಿಗಮಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ಮುಷ್ಕರದಿಂದ ಹಿಂದೆ ಸರಿಯುವಂತೆ ನಾನು ಈಗಾಗಲೇ ನೌಕರರ ಸಂಘಟನೆಗಳಿಗೆ ಮನವಿ ಮಾಡಿದ್ದೇನೆ. ನಿಗಮಗಳ ಆರ್ಥಿಕ ಪರಿಸ್ಥಿತಿಯ ಬಗ್ಗೆಯೂ ಅವರಿಗೆ ತಿಳಿದಿದೆ. ಆದ್ದರಿಂದ, ಮುಷ್ಕರ ಮಾಡದಂತೆ ನಾನು ಅವರನ್ನು ವಿನಂತಿಸಿದ್ದೇನೆ ಮತ್ತು ಮುಷ್ಕರವನ್ನು ತಡೆಯಲು ನಾವು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಈ ಹಿಂದೆ ಅನಿರ್ದಿಷ್ಟಾವಧಿ ಮುಷ್ಕರದ ಉದ್ದೇಶದ ಬಗ್ಗೆ ಕಾರ್ಮಿಕ ಇಲಾಖೆಗೆ ತಿಳಿಸಿತ್ತು. ಇದರ ಪರಿಣಾಮವಾಗಿ, ಡಿಸೆಂಬರ್ 30 ರಂದು ಸಮಿತಿ ಮುಖಂಡರು ಮತ್ತು ನಿಗಮದ ಅಧಿಕಾರಿಗಳ ನಡುವೆ ರಾಜೀಸಂಧಾನ ಸಭೆಯನ್ನು ನಿಗದಿಪಡಿಸಿದೆ.

ಒಂದು ಹಂತದಲ್ಲಿ ಸಾರಿಗೆಯ ನಾಲ್ಕೂ ನಿಗಮಗಳ ಎಂಡಿಗಳಲ್ಲಿ 3 ನಿಗಮಗಳ ಎಂಡಿಗಳು 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಕೊಡುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಕೆಎಸ್‌ಆರ್‌ಟಿಸಿ ಎಂಡಿ ಮಾತ್ರ ನೀವು ದುಡುಕಬೇಡಿ ಸರ್ಕಾರ ಯಾವ ನಿರ್ದಾರ ತೆಗೆದುಕೊಳ್ಳುತ್ತದೋ ಆ ನಿಟ್ಟಿನಲ್ಲಿ ನಾವು ಸಾಗೋಣ ಎಂದು ಹೇಳಿರುವುದಾಗಿ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಇಲ್ಲಿ ಕೆಎಸ್‌ಆರ್‌ಟಿಸಿ ಎಂಡಿಯವರ ನಡೆ ಭಾರಿ ಕುತೂಹಲ ಮೂಡಿಸಿದೆ. ಇತ್ತ ಸರ್ಕಾರ ನಡೆಯೂ ನಿಗೂಢವಾಗಿದೆ. ಹೀಗಾಗಿ ಜಂಟಿ ಕ್ರಿಯಾ ಸಮಿತಿಯ ಮುಂದಿನ ನಡೆಕೂಡ ಯಾವ ರೀತಿ ಇರಲಿದೆ ಎಂಬುದು ತಿಳಿಯಬೇಕಾದರೆ ಡಿ.31ರವರೆಗೂ ಕಾದು ನೀಡಬೇಕಿದೆ.

Leave a Reply

error: Content is protected !!
LATEST
ಸಿಡ್ನಿಯಲ್ಲಿ 2025ರ ನೂತನ ವರ್ಷ ಸ್ವಾಗತಿಸಿದ ಮಿಲಿಯನ್‌ಗಿಂತಲೂ ಹೆಚ್ಚು ಜನರು KSRTC: 4 ಸಾರಿಗೆ ನಿಗಮಗಳು 2,000 ಕೋಟಿ ರೂ. ಸಾಲ ಪಡೆಯಲು ಒಪ್ಪಿದ ಸರ್ಕಾರ ವರ್ಲ್ಡ್ ಆಫ್ ರೆಕಾರ್ಡ್ಸ್: ವಿಶ್ವ ದಾಖಲೆ ಸೇರಿದ 1.9 ವರ್ಷದ ಜನ್ವಿತಾ BBMP ಪೂರ್ವ ವಲಯ: ಪಾದಚಾರಿ ಮಾರ್ಗ ಒತ್ತುವರಿ, ಪ್ಲೆಕ್ಸ್ ಬ್ಯಾನರ್ ತೆರವು ದೆಹಲಿ ರೈತರ ಹೋರಾಟ ಬೆಂಬಲಿಸಿ ಮೈಸೂರಿನಲ್ಲಿ ಪೆಂಜಿನ ಮೆರವಣಿಗೆ ಪ್ರತಿಭಟನೆ ಜ.1ರಿಂದ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ಕೊಠಡಿ ಸ್ಥಗಿತ ಬಿ.ಎಡ್‌  ವಿದ್ಯಾರ್ಥಿಗಳ ವಿಶೇಷ ಪ್ರೋತ್ಸಾಹ ಧನದ ಅರ್ಜಿ ಸಲ್ಲಿಕ್ಕೆ ಅವಧಿ ವಿಸ್ತರಣೆ ಜ.6ರಿಂದ KSRTC ಸಂಸ್ಥೆಯ ನೌಕರರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಜಾರಿ: ನಿರ್ದೇಶಕರ ಆದೇಶ ಸಾರಿಗೆ ಕಾರ್ಮಿಕರ ಬೀದಿಗೆ ತಂದಿದ್ದು ಹೊಸ ಸಂಘಟನೆ ಮುಖಂಡ ನಾವಲ್ಲ: ಜಂಟಿ ಪದಾಧಿಕಾರಿ ಡಿ.31ರಂದು ಜಗಜಿತ್ ಸಿಂಗ್ ದಲೈವಾಲರ ಹೋರಾಟ ಬೆಂಬಲಿಸಿ ರಾಜ್ಯಾದ್ಯಂತ ಪಂಜಿನ ಪ್ರತಿಭಟನಾ ಮೆರವಣಿಗೆ