NEWSನಮ್ಮಜಿಲ್ಲೆನಮ್ಮರಾಜ್ಯ

ಮಸಣ ಕಾರ್ಮಿಕರ ಬೇಡಿಕೆ ಈಡೇರಿಸಬೇಕು: ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಸಣ ಕಾರ್ಮಿಕರು ಯಾರೂ ಅನುಕೂಲವಂತರಲ್ಲ, ಶೋಷಿತ ಸಮುದಾಯ, ಆರ್ಥಿಕವಾಗಿ ತೀರಾ ಹಿಂದುಳಿದ ಸಮುದಾಯದ ಜನ ಮಾತ್ರ ಈ ರೀತಿ ಕೆಲಸ ಮಾಡುವುದು, ಅವರ ಸಮಸ್ಯೆಗಳ ಬಗ್ಗೆ ಸರ್ಕಾರ ಗಮನ ನೀಡಬೇಕು, ಬೇಡಿಕೆಗಳನ್ನು ಈಡೇರಿಸುವ ಮೂಲಕ ಅವರ ನೆರವಿಗೆ ನಿಲ್ಲಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘದ ವತಿಯಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ತಮ್ಮ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಬುಧವಾರದಿಂದ ಪ್ರಾರಂಭವಾದ ಬೃಹತ್ ಪ್ರತಿಭಟನಾ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡ ಅವರು ಮಸಣ ಕಾರ್ಮಿಕರ ಹೋರಾಟಕ್ಕೆ ಆಮ್ ಆದ್ಮಿ ಪಕ್ಷ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಘೋಷಿಸಿದರು.

ಮಸಣ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಹುಟ್ಟು ಆಕಸ್ಮಿಕ ಸಾವು ಅನಿವಾರ್ಯ, ಸತ್ತಾಗ ಸೇವೆ ಮಾಡುವವರಿಗೂ ಇಂದು ಸಾಕಷ್ಟು ಸಮಸ್ಯೆಗಳಿವೆ. ಮಸಣದಲ್ಲಿ ಕೆಲಸ ಮಾಡುವವರೆಗೆ ಯಾವುದೇ ಭದ್ರತೆ ಇಲ್ಲ, ಸಂವಿಧಾನದ ಪ್ರಕಾರ ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ, ಆದರೆ ಮಸಣ ಕಾರ್ಮಿಕರು ಇಂದು ಸಮಸ್ಯೆಯ ಜೊತೆಯೇ ಬದುಕುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಹಿಂದುಳಿದ ವರ್ಗಗಗಳ ಅಭಿವೃದ್ಧಿಗಾಗಿ 30 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದ್ದೇವೆ ಎಂದು ರಾಜ್ಯ ಸರ್ಕಾರ ಹೇಳಿದೆ. ಅದರಲ್ಲಿ 11 ಸಾವಿರ ಕೋಟಿಯನ್ನು ಗ್ಯಾರಂಟಿಗಳ ಅನುಷ್ಠಾನಕ್ಕೆ ಖರ್ಚು ಮಾಡಲಾಗಿದೆ. ಕೂಡಲೇ ಮಸಣ ಕಾರ್ಮಿಕರು ಬೇಡಿಕೆ ಇಟ್ಟಿರುವ 10 ಬೇಡಿಕೆಗಳನ್ನು ಈಡೇರಿಸಲಿ, ಅವರನ್ನು ನೌಕರರು ಎಂದು ಪರಿಗಣಿಸಿ ಎಂದರು.

ಸಫಾಯಿ ಕರ್ಮಚಾರಿಗಳ ಜೊತೆ ಮಸಣ ಶುಚಿ ಕಾರ್ಮಿಕರೆಂದು ಪರಿಗಣಿಸಿ ಒಪ್ಪಿ ನೆರವು ನೀಡಬಹುದು ಎಂದು ಅಧಿಕಾರಿಗಳು ಮತ್ತು ಮಂತ್ರಿಗಳು ಹಲವು ಬಾರಿ ಭರವಸೆ ನೀಡಿದ್ದಾರೆ. ಚಿತಾಗಾರಗಳಲ್ಲಿ ಕೆಲಸ ಮಾಡುವವರಿಗೆ ಉದ್ಯೋಗ ಭದ್ರತೆ ಒದಗಿಸಿ ಕನಿಷ್ಠ ವೇತನ ನೀಡುವುದಾಗಿ ಹೇಳಿದ್ದಾರೆ ಆದರೆ ಇದೆಲ್ಲವೂ ಬಾಯಿ ಮಾತಿನಲ್ಲಿದ್ದು ಮಸಣ ಕಾರ್ಮಿಕರನ್ನು ಕಡೆಗಣಿಸಲಾಗಿದೆ ಎಂದು ಹೇಳಿದರು.

ಮಸಣ ಕಾರ್ಮಿಕರ ಹೋರಾಟದಲ್ಲಿ ನಾನು ಎಂದಿಗೂ ಜೊತೆಯಾಗಿರುತ್ತೇನೆ, ಮುಖ್ಯಮಂತ್ರಿಗಳ ಭೇಟಿಗೂ ಜೊತೆ ಬರುತ್ತೇನೆ. ಯಾವುದೇ ತಾಲೂಕು, ಜಿಲ್ಲಾ ಕೇಂದ್ರದಲ್ಲಿ ಹೋರಾಟ ಮಾಡಿದರೂ ಆಮ್ ಆದ್ಮಿ ಪಕ್ಷ ನಿಮ್ಮ ಜೊತೆ ಕೈ ಜೋಡಿಸಲಿದೆ ಎಂದು ಹೇಳಿದರು.

ಮಸಣ ಕಾರ್ಮಿಕರ ಪ್ರಮುಖ ಬೇಡಿಕೆಗಳು: ಪ್ರತಿ ಸಾರ್ವಜನಿಕ ಮಸಣಕ್ಕೆ ಕಾರ್ಮಿಕರೊಬ್ಬರನ್ನು ಸ್ಥಳೀಯ ಸಂಸ್ಥೆಗಳ ಮಸಣ ನಿರ್ವಾಹಕ ನೌಕರನನ್ನಾಗಿ ನೇಮಿಸಿಕೊಳ್ಳಬೇಕು. ಗುಂಡಿ ಅಗೆಯುವ ಮತ್ತು ಮುಚ್ಚುವ ಕೆಲಸವನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗವೆಂದು ಪರಿಗಣಿಸಿ, ಗುಂಡಿ ಅಗೆಯುವ ಮತ್ತು ಮುಚ್ಚುವ ಕಾರ್ಮಿಕರಿಗೆ ಸ್ಥಳೀಯ ಸಂಸ್ಥೆಗಳ ಮೂಲಕ ಕನಿಷ್ಠ ₹3500 ಕೂಲಿ ಪಾವತಿಸಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಲಾಗಿದೆ.

45 ವರ್ಷ ಮೇಲ್ಪಟ್ಟ ಮಸಣ ಕಾರ್ಮಿಕರಿಗೆ ಮಾಸಿಕ ₹3000 ಸಹಾಯಧನ ನೀಡಬೇಕು. ಗುಂಡಿ ಅಗೆಯಲು ಸಲಕರಣೆ ಒದಗಿಸಬೇಕು, ಅವರಿಗೆ ಭವಿಷ್ಯ ನಿಧಿ ಯೋಜನೆ ಜಾರಿ ಮಾಡಬೇಕು.

ಮಸಣ ಕಾರ್ಮಿಕರಿಗೆ 5 ಎಕರೆ ನೀರಾವರಿ ಜಮೀನು ಉಚಿತವಾಗಿ ನೀಡಬೇಕು. ಹಿತ್ತಲು ನಿವೇಶನ ಸಹಿತ 10 ಲಕ್ಷ ರೂ. ಮೌಲ್ಯದ ಮನೆ ನೀಡಬೇಕು. ಮಸಣ ಕಾರ್ಮಿಕ ಕುಟುಂಬದ ಸದಸ್ಯರಿಗೆ ಮಾಸಿಕ 10 ಕೆ.ಜಿ. ಸಮಗ್ರ ಆಹಾರ ಮತ್ತು ಆರೋಗ್ಯ ಸಾಮಗ್ರಿ ಕಿಟ್ ವಿತರಿಸಬೇಕು. ಕೋವಿಡ್ ವಿಮೆ ಜಾರಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಉದ್ಯೋಗ ಖಾತ್ರಿ ಯೋಜನೆಯಡಿ ಮಸಣ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ವರ್ಷದಲ್ಲಿ ಕನಿಷ್ಠ 200 ದಿನ ಉದ್ಯೋಗ ನೀಡಬೇಕು. ಉದ್ಯೋಗ ನೀಡದೇ ಇರುವಾಗ ಹೈನುಗಾರಿಕೆ ಮತ್ತಿತರ ಉದ್ಯೋಗದಲ್ಲಿ ತೊಡಗಲು 75% ಸಹಾಯಧನ ಇರುವಂತೆ ₹ 5 ಲಕ್ಷ ಸಾಲ ನೀಡುವಂತೆ ಕೋರಲಾಗಿದೆ.

ಮಸಣ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು. ಉದ್ಯೋಗ ಸಿಗದ 25 ವರ್ಷ ಮೇಲ್ಪಟ್ಟ ವಿದ್ಯಾವಂತರಿಗೆ ತಲಾ 10 ಸಾವಿರ ರೂಪಾಯಿ ನಿರುದ್ಯೋಗ ಭತ್ಯೆ ನೀಡಬೇಕು ಮತ್ತು ಎಲ್ಲಾ ಗ್ರಾಮಗಳಲ್ಲಿ ದಲಿತರಿಗೆ ಮಸಣಕ್ಕೆ ಸ್ಥಳ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಮಸಣ ಕಾರ್ಮಿಕ ಸಂಘ ಒತ್ತಾಯಿಸಿದೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ