NEWSನಮ್ಮಜಿಲ್ಲೆನಮ್ಮರಾಜ್ಯ

ಸಾಮಾಜಿಕ ಸ್ವಾಸ್ಥ್ಯ ಹಾಳುಗೆಡಹುತ್ತಿರುವವರ ಸರ್ಕಾರ ಮಟ್ಟಹಾಕದೆ ಬಿಡೆದು: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸುವ ವಾಗ್ದಾನವನ್ನು ನಾಡಿನ ಜನತೆಗೆ ನಾವು ಚುನಾವಣಾ ಪೂರ್ವದಲ್ಲೇ ನೀಡಿದ್ದೆವು, ಅದರಂತೆ ಜನತೆ ನಮ್ಮ ಮೇಲೆ ವಿಶ್ವಾಸವಿಟ್ಟು ಬಹುಮತದ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ ಇದನ್ನು ನಾವು ಉಳಿಸಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಂತಿ, ಸೌಹಾರ್ದತೆ ಮತ್ತು‌ ಸಾಮರಸ್ಯದ ವಾತಾವರಣವನ್ನು ನಿರ್ಮಾಣ ಮಾಡುವ ಅಗತ್ಯ ಎಂದಿಗಿಂತಲೂ ಈಗ ಹೆಚ್ಚಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೋಮುವಾದಿ ದುಷ್ಕರ್ಮಿಗಳು ಹೆಚ್ಚಾಗುತ್ತಿದ್ದಾರೆ ಅವರನ್ನು ಪಟ್ಟಹಾಕದೆ ಬಿಡೆವು ಎಂದರು.

ಇನ್ನು ಇತ್ತೀಚಿನ ದಿನಗಳಲ್ಲಿ ಕೋಮುವಾದಿ ದುಷ್ಕರ್ಮಿಗಳು ವಿದ್ವೇಷಕಾರಿ ಚಟುವಟಿಕೆಗಳ ಮೂಲಕ ಧಾರ್ಮಿಕ ಸಾಮರಸ್ಯವನ್ನು ಕೆಡಿಸಿ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳುಗೆಡಹುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂತಹ ಕಾನೂನು ವಿರೋಧಿ ಚಟಿವಟಿಕೆಗಳನ್ನು ನಿಗ್ರಹಿಸಲು ನಮ್ಮ ಸರ್ಕಾರ ವಿಶೇಷ ಕಾರ್ಯಪಡೆಯನ್ನು ರಚಿಸಿದೆ ಎಂದು ತಿಳಿಸಿದರು.

ಈಗಾಗಲೇ ಅಸ್ತಿತ್ವದಲ್ಲಿರುವ ನಕ್ಸಲ್‌ ನಿಗ್ರಹ ಪಡೆಯಿಂದ ಒಬ್ಬರು ಡಿಜಿಪಿ, ಒಬ್ಬರು ಡಿವೈಎಸ್‌ಪಿ, ಒಬ್ಬರು ಸಹಾಯಕ ಕಮಾಂಡೆಂಟ್‌, ನಾಲ್ವರು ಪೊಲೀಸ್ ಇನ್ಸ್‌ಪೆಕ್ಟರ್, 16 ಪಿಎಸ್‌ಐ ಸೇರಿ 248 ಹುದ್ದೆಗಳನ್ನು ಬೇರ್ಪಡಿಸಿ ಟಾಸ್ಕ್‌ ಫೋರ್ಸ್‌ ರಚಿಸಲಾಗಿದೆ ಎಂದು ವಿವರಿಸಿದರು.

ಇನ್ನು ಕೋಮು ಭಾವನೆ ಕೆರಳಿಸುವ ಮತ್ತು ಸಮಾಜದಲ್ಲಿ ಶಾಂತಿ ಕದಡುವ ಕೆಲಸವನ್ನು ಯಾರೇ ಮಾಡಿದರು, ಯಾವುದೇ ಧರ್ಮದ, ಯಾವುದೇ ಸಂಘಟನೆಗೆ ಸೇರಿದವರಾಗಿದ್ದರೂ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಂಡು ತಪ್ಪಿತಸ್ಥರಿಗೆ ಕಾನೂನಿನಡಿ ಶಿಕ್ಷೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.

Megha
the authorMegha

Leave a Reply

error: Content is protected !!