NEWSನಮ್ಮಜಿಲ್ಲೆನಮ್ಮರಾಜ್ಯ

ಸಹಕಾರ ಸಂಘಗಳ ಚುನಾವಣೆ ಮುಂದೂಡಿ ಹೊರಡಿಸಿದ್ದ ಆದೇಶ ಹಿಂಪಡೆದ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ಸಹಕಾರ ಸಂಘಗಳ ಚುನಾವಣೆಗಳನ್ನು ಮುಂದೂಡಿ ಇದೇ ಮಾ.13ರಂದು ಹೊರಡಿಸಿದ್ದ ಆದೇಶವನ್ನು ಸರ್ಕಾರ ಹಿಂಪಡೆದಿದೆ ಎಂದು ಸಹಕಾರ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಎ.ಸಿ.ದಿವಾಕರ್‌ ತಿಳಿಸಿದ್ದಾರೆ.

ಮಾ.13 ರಂದು ಮುಂದಿನ ಆದೇಶದವರೆಗೂ ಹಾಲಿ ಇರುವ ಆಡಳಿತ ಮಂಡಳಿ ಹಾಗೂ ಪದಾಧಿಕಾರಿಗಳನ್ನೇ ಮುಂದುವರಿಯುವಂತೆ ಆದೇಶ ನೀಡಲಾಗಿತ್ತು.

ಆದರೆ ಕೆಲ ಸಾಧಕ ಬಾಧಕಗಳನ್ನು ಗಮನಿಸಿದ ಸರ್ಕಾರ ಮಾ.13ರಂದು ಹೊರಡಿಸಿದ್ದ ಆದೇಶವನ್ನು ಹಿಂಪಡೆದಿರುವ ಬಗ್ಗೆ ಮಾ.16ರಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.

ಕಳೆದ ಮಾರ್ಚ್‌ 13ರಂದೆ ಈ ಆದೇಶ ಹೊರಡಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯಬೇಕಿದ್ದ ಕೆಎಸ್‌ಆರ್‌ಟಿಸಿ ಸೊಸೈಟಿ ಚುನಾವಣೆ ಕೂಡ ಮುಂದೂಡಲ್ಪಟ್ಟಿತ್ತು.

ಆದರೆ, ಆ ಆದೇಶವನ್ನು ಹಿಂಪಡೆದಿರುವುದರಿಂದ ಚುನಾವಣೆ ಅತೀ ಶೀಘ್ರದಲ್ಲೇ  ನಡೆಯಬಹುದು ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ