NEWSನಮ್ಮರಾಜ್ಯರಾಜಕೀಯ

ಸ್ಥಳ ತೋರಿಸದೆ ಕಿತ್ತಾಡಿಕೊಳ್ಳುತ್ತಿದ್ದ ಮಹಿಳಾಧಿಕಾರಿಗಳ ಎತ್ತಂಗಡಿ ಮಾಡಿದ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಳೆದ ಮೂರು ದಿನಗಳಿಂದ ಭಾರಿ ಸುದ್ದಿಯಾಗುತ್ತಿರುವ ಐಪಿಎಸ್‌ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಮತ್ತು ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಗಳಕ್ಕೆ ಅಂತ್ಯ ಹಾಡುವ ಸಲುವಾಗಿ ಸರ್ಕಾರ ಈ ಇಬ್ಬರಿಗೂ ಸ್ಥಳ ನಿಯೋಜನೆ ಮಾಡದೆ ಎತ್ತಗಂಡಿ ಮಾಡಿದೆ.

ಈ ಇಬ್ಬರು ಮಹಿಳಾಧಿಕಾರಿಗಳ ಕಿತ್ತಾಟದಿಂದ ಸರ್ಕಾರಕ್ಕೆ ಭಾರಿ ಮುಜುಗರವಾಗುತ್ತಿತ್ತು. ಇದರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಮಧ್ಯಪ್ರವೇಶ ಮಾಡಿರುವ ರಾಜ್ಯ ಸರ್ಕಾರ ಇಬ್ಬರನ್ನೂ ಯಾವುದೇ ಹುದ್ದೆ ನೀಡದೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಇನ್ನು ಈ ಇಬ್ಬರ ಜಗಳದ ನಡುವೆ ಹೆಸರು ಕೇಳಿ ಬಂದ ಮತ್ತೊಬ್ಬ ಐಎಎಸ್‌ ಅಧಿಕಾರಿ ಮನೀಶ್ ಮೌದ್ಗಿಲ್ ಅವರನ್ನೂ ವರ್ಗಾವಣೆ ಮಾಡಲಾಗಿದೆ.

ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಹಾಗೂ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಡಿ. ರೂಪಾ ಮೌದ್ಗಿಲ್ ಅವರಿಗೆ ಯಾವುದೇ ಹುದ್ದೆ ನೀಡದೆ ವರ್ಗಾವಣೆ ಮಾಡಿದ್ದು, ಸರ್ವೇ ಮತ್ತು ಭೂ ದಾಖಲೆ ಇಲಾಖೆಯ ಆಯುಕ್ತರಾಗಿದ್ದ ಮನೀಶ್ ಮೌದ್ಗಿಲ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿ ವರ್ಗಾವಣೆ ಮಾಡಿ ಆದೇಶಿಸಿದೆ.

ಈ ಇಬ್ಬರು ಉನ್ನತ ಮಹಿಳಾ ಅಧಿಕಾರಿಗಳು ಕಿತ್ತಾಡಿಕೊಂಡು ಸರ್ಕಾರ ಮುಜುಗರದ ಪರಿಸ್ಥಿತಿಗೆ ಸಿಲುಕಿತ್ತು. ಹೀಗಾಗಿ ಸೋಮವಾರ ಸರ್ಕಾರವು ಈ ಇಬ್ಬರಿಗೂ ಛೀಮಾರಿ ಹಾಕಿತ್ತು. ಅಲ್ಲದೆ ನೀವು ಆರೋಪ ಮತ್ತು ಪ್ರತ್ಯಾರೋಪಗಳನ್ನು ಸಾರ್ವಜನಿಕವಾಗಿ ಮಾಡಬಾರದು ಎಂದು ನಿರ್ದೇಶನ ನೀಡಿತ್ತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ವಿಧಾನಮಂಡಲದ ಅಧಿವೇಶನದ ಬಗ್ಗೆ ಕಾಳಜಿ ವಹಿಸಿದ್ದರೂ ಸಹ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿವರಣೆಯನ್ನು ಕೇಳಲು ಸೂಚನೆ ನೀಡಿದ್ದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ