Please assign a menu to the primary menu location under menu

CrimeNEWSನಮ್ಮಜಿಲ್ಲೆಬೆಂಗಳೂರು

ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪತ್ನಿ ಹಾಗೂ ಪತ್ನಿ ತಂದೆಯ ಅಂದರೆ ಮಾನನ ಕಿರುಕುಳದಿಂದ ಮಾನಸಿಕವಾಗಿ ಭಾರಿ ನೋವು ಅನುಭವಿಸಿದ ಹೆಡ್‌ಕಾನ್‌ಸ್ಟೇಬಲ್ ಒಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜ್ಯದ ರಾಜಧಾನಿಯಲ್ಲಿ ನಡೆದಿದೆ.

ಹುಳಿಮಾವು ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೇಬಲ್ ಎಚ್.ಸಿ.ತಿಪ್ಪಣ್ಣ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಪೊಲೀಸ್. ಮೃತದೇಹವನ್ನು ಸಿವಿ ರಾಮನ್ ನಗರ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಘಟನೆ ಸಂಬಂಧ ಬೈಯ್ಯಪ್ಪನಹಳ್ಳಿ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಿಪ್ಪಣ್ಣ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೇಬಲ್ ಆಗಿದ್ದರು. ಹೆಂಡತಿ ಹಾಗೂ ಮಾವನ ಕಿರುಕುಳ ತಾಳಲಾರದೆ ನಿನ್ನೆ ರಾತ್ರಿ ಬೈಯ್ಯಪ್ಪನಹಳ್ಳಿ ರೈಲ್ವೇ ನಿಲ್ದಾಣಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೂ ಮುನ್ನ ಬರೆದ ಪತ್ರದಲ್ಲೇನಿದೆ?: ನಾನು ನನ್ನ ಹೆಂಡತಿಯ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಹೆಂಡತಿಯ ತಂದೆಯಾದ ಯಮುನಪ್ಪ ಇವನು ನನಗೆ ಜೀವ ಬೆದರಿಕೆ ಹಾಕಿರುತ್ತಾನೆ.

ಅಲ್ಲದೆ  ಡಿ.12 ರಂದು ದೂರವಾಣಿ ಕರೆ ಮಾಡಿ ಕೂಡ ಬೆದರಿಕೆ ಹಾಕಿರುತ್ತಾನೆ. ಬೆಳಗ್ಗೆ ನಾನು ಕಾಲ್ ಮಾಡಿದಾಗಲೂ ಕೂಡ, ‘ನೀನು ಸತ್ತು ಹೋಗು ನನ್ನ ಮಗಳು ಚೆನ್ನಾಗಿರುತ್ತಾಳೆ’ ಎಂದು ಹೇಳಿ ಅವಾಚ್ಯ ಪದಗಳಿಂದ ಬೈದಿದ್ದಾನೆ ಎಂದು ಡೆತ್‌ನೋಟ್‌ ಬರೆದಿದ್ದಾರೆ.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...