NEWSನಮ್ಮಜಿಲ್ಲೆನಮ್ಮರಾಜ್ಯ

ಎಲ್ಲ ಸಹಕಾರ ಸಂಘಗಳಿಗೆ ಹೊರಡಿಸಿದ್ದ ಸರ್ಕಾರದ ಸುತ್ತೋಲೆಗೆ ಹೈಕೋರ್ಟ್‌ ತಡೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಹಕಾರ ಸಂಘಗಳು ಸಂಗ್ರಹಿಸುತ್ತಿರುವ ಠೇವಣಿ ಮತ್ತು ವಿತರಿಸುವ ಸಾಲಗಳಿಗೆ ಬಡ್ಡಿ ದರ ನಿಗದಿ ಪಡಿಸುವ ಸಹಕಾರ ಸಂಘಗಳ ಅಧಿಕಾರಕ್ಕೆ ತಡೆ ನೀಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗೆ ಗುರುವಾರ (ಏ.4) ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಸಹಕಾರ ಸಂಘಗಳ ಹಣವನ್ನು ಡಿಸಿಸಿ ಬ್ಯಾಂಕ್ ಅಥವಾ ಅಪೆಕ್ಸ್ ಬ್ಯಾಂಕ್‌ನಲ್ಲಿ ಇಡುವಂತೆಯೂ ಸರ್ಕಾರ ಹೊರಡಿಸಿರುವ ಸುತ್ತೋಲೆ ಕಾನೂನು ಬಾಹಿರ ಎಂದು ಹೈಕೋರ್ಟ್ ಹೇಳಿದೆ.

ಸಹಕಾರ ಸಂಘಗಳು ಸಂಗ್ರಹಿಸುತ್ತಿರುವ ಠೇವಣಿ ಮತ್ತು ವಿತರಿಸುವ ಸಾಲಗಳಿಗೆ ಬಡ್ಡಿ ದರ ನಿಗದಿ ಪಡಿಸುವ ಅಧಿಕಾರಕ್ಕೆ ರಾಜ್ಯ ಸರ್ಕಾರ ತಡೆ ನೀಡಿ ಮತ್ತು ಸಹಕಾರ ಸಂಘಗಳು ತನ್ನ ಹಣವನ್ನು ಡಿಸಿಸಿ ಬ್ಯಾಂಕ್ ಅಥವಾ ಅಪೆಕ್ಸ್ ಬ್ಯಾಂಕ್‌ನಲ್ಲಿ ಇಡಬೇಕು ಎಂದು ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಬೆಳ್ತಂಗಡಿ‌ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರ ಸಂಘ ಸಹಿತ 20ಕ್ಕೂ ಅಧಿಕ ಸಹಕಾರ ಸಂಘಗಳು‌ ಹೈಕೋರ್ಟ್‌ಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದವು.

ಅರ್ಜಿದಾರರ ಪರ ಹೈಕೋರ್ಟ್ ಹಿರಿಯ ವಕೀಲ ಪಿ.ಪಿ. ಹೆಗ್ಡೆ ವಾದ ಮಂಡಿಸಿದ್ದರು. ಸಹಕಾರ ಸಂಘಗಳು ಸಾಲಗಳ ಮೇಲೆ ನಿಗದಿ ಪಡಿಸುವ ಬಡ್ಡಿ ಇನ್ನಿತರ ವೆಚ್ಚಗಳು, ದರಗಳು ಹಾಗೂ ಠೇವಣಿಗಳ ಮೇಲೆ ನೀಡುವ ಬಡ್ಡಿ ಇತ್ಯಾದಿ ಅಂಶಗಳನ್ನು ನಿಗದಿಪಡಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಈ ಅಧಿಕಾರ ರಿಸರ್ವ್ ಬ್ಯಾಂಕ್‌ಗೆ ಮಾತ್ರ‌ ಇದೆ.

ಆದರೆ ರಿಸರ್ವ್ ಬ್ಯಾಂಕ್ ಈ ಬಗ್ಗೆ ಯಾವುದೇ ಆದೇಶ ಹೊರಡಿಸಿಲ್ಲ. ಸಹಕಾರ ಸಂಘಗಳ ಹಣವನ್ನು ಡಿಸಿಸಿ ಬ್ಯಾಂಕ್ ಅಥವಾ ಅಪೆಕ್ಸ್ ಬ್ಯಾಂಕ್‌ನಲ್ಲಿ ಇಡಬೇಕು ಎಂದು ಸರ್ಕಾರ ಹೊರಡಿಸಿರುವ ಸುತ್ತೋಲೆ ಕೂಡ‌ ಕಾನೂನು ಬಾಹಿರವಾಗಿದೆ. ತಮ್ಮ ವ್ಯವಹಾರಗಳನ್ನು ನಡೆಸುವ ಸಂಪೂರ್ಣ ಅಧಿಕಾರ ಆಯಾಯ ಸೊಸೈಟಿಗಳಿಗೆ ಮಾತ್ರ ಇದೆ. ಅದು ಸಹಕಾರ ಸಂಘಗಳ ಸಂವಿಧಾನ ಬದ್ಧ ಹಕ್ಕಾಗಿದೆ ಎಂದು ವಾದ ಮಂಡಿಸಿದರು.

ಸಹಕಾರ ಸಂಘಗಳ ಹಣವನ್ನು ಡಿಸಿಸಿ ಬ್ಯಾಂಕ್ ಅಥವಾ ಅಪೆಕ್ಸ್ ಬ್ಯಾಂಕ್‌ನಲ್ಲಿ ಇಡಬೇಕು ಎಂಬ ಆದೇಶ ಸರಿಯಾದುದಲ್ಲ. 20 ವರ್ಷಗಳ ಹಿಂದೆ ಬೆಳಗಾವಿಯಲ್ಲಿ ಡಿಸಿಸಿ ಬ್ಯಾಂಕ್ ಮುಳುಗಿದೆ ಎಂದು ನ್ಯಾಯಪೀಠದ ಗಮನ ಸೆಳೆದರು. ಇವರ ವಾದವನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರ ಏಕಸದಸ್ಯ ನ್ಯಾಯಪೀಠ ಸರ್ಕಾರದ ಸುತ್ತೋಲೆಗೆ ತಡೆಯಾಜ್ಞೆ ನೀಡಿ‌ ವಿಚಾರಣೆಯನ್ನು ಮುಂದೂಡಿತು.

ಸರ್ಕಾರದ ಸುತ್ತೋಲೆಗೆ ತಡೆಯಾಜ್ಞೆ ನೀಡಿರುವ ಈ ಆದೇಶ ಕ್ರೆಡಿಟ್,‌ ವಿವಿದೋದ್ದೇಶ, ಸೌಹಾರ್ದ ಸಹಿತ ರಾಜ್ಯದ ಎಲ್ಲ ಸಹಕಾರ ಸಂಘಗಳಿಗೆ ಅನ್ವಯವಾಗುತ್ತದೆ ಎಂದು ಹೈಕೋರ್ಟ್ ಪೀಠ ಸ್ಪಷ್ಟಪಡಿಸಿದೆ.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ