NEWSನಮ್ಮಜಿಲ್ಲೆಸಂಸ್ಕೃತಿ

ಗಾಂಧೀಜಿ, ಶಾಸ್ತ್ರಿ ಅವರ ತತ್ವ ಆದರ್ಶ ಮೈಗೂಡಿಸಿಕೊಳ್ಳಬೇಕು : ಸಚಿವ ಎಸ್‌ಟಿಎಸ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು : ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಅಂಗವಾಗಿ ಮೈಸೂರು ನಗರದ ಗಾಂಧಿ ಸ್ಕ್ವೇರ್ ನಲ್ಲಿರುವ ಗಾಂಧಿ ಪ್ರತಿಮೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಮಾಲಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಅವರ ಸರಳತೆ, ಸಮರ್ಥ ನಾಯಕತ್ವವನ್ನು ಇಡೀ ಜಗತ್ತೇ ಒಪ್ಪಿಕೊಂಡಿದೆ. ಜಗತ್ತಿಗೆ ಶಾಂತಿಯ ಸಂದೇಶ ಸಾರಿದ ಅವರ ತತ್ವ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಗಾಂಧೀಜಿಯವರಲ್ಲಿದ್ದ ಅಹಿಂಸಾ ತತ್ವ, ಆಧ್ಯಾತ್ಮಿಕತೆ, ಪ್ರಾಮಾಣಿಕತೆ, ಶಿಸ್ತು ಮೊದಲಾದ ಗುಣಗಳು ಎಲ್ಲರನ್ನೂ ಪ್ರೇರೇಪಿಸುತ್ತಿದೆ. ಮಹಾತ್ಮ ಗಾಂಧೀಜಿಯವರ ವಿಚಾರಗಳು ಕೇವಲ ಭಾರತಕ್ಕೆ ಮಾತ್ರವಲ್ಲದೇ ಇಡೀ ವಿಶ್ವಕ್ಕೆ ಅವಶ್ಯವಾಗಿವೆ ಎಂದರು.

ಗಾಂಧೀಜಿಯವರು ಸತ್ಯ, ಅಹಿಂಸೆಯ ಮಾರ್ಗವನ್ನೇ ಸ್ವಾತಂತ್ರ್ಯ ಚಳವಳಿಗೆ ಅನುಸರಿಸಿದರು. ಅತ್ಯಂತ ಸರಳತೆಯ ಜೀವನ ನಡೆಸಿದರು. ಮಹಾತ್ಮ ಗಾಂಧಿಯವರ ವಿಚಾರಗಳು ಎಂದೆಂದಿಗೂ ಅಮರ ಎಂದು ಹೇಳಿದರು.

ಇನ್ನು ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಈ ದೇಶ ಕಂಡ ಸರಳ ಸಜ್ಜನಿಕೆಯ ಪ್ರಧಾನಿ. ರೈತ ಹಾಗೂ ಸೈನಿಕರಿಗಾಗಿ “ಜೈ ಜವಾನ್ ಜೈ ಕಿಸಾನ್” ಎಂಬ ಘೋಷಣೆ ನೀಡಿದ ದಕ್ಷ ಆಡಳಿತಗಾರರು. ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ತತ್ವವನ್ನು ನಿತ್ಯದ ಬದುಕಿನಲ್ಲಿ ಅಳವಡಿಕೊಳ್ಳುವುದು ಇಂದಿನ ಅಗತ್ಯಗಳಲ್ಲೊಂದಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೇ ಶ್ರೀನಿವಾಸ್, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ ಉಪಸ್ಥಿತರಿದ್ದರು.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC