NEWSನಮ್ಮಜಿಲ್ಲೆನಮ್ಮರಾಜ್ಯ

ಇಂದು ಸಾರಿಗೆ ನೌಕರರ ಧರಣಿ : ಮೊದಲ ದಿನವೇ ಸಾವಿರಾರು ನೌಕರರು, ಕುಟುಂಬ ಸದಸ್ಯರಿಂದ ಅಭೂತಪೂರ್ವ ಬೆಂಬಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರಿಗೆ ವೇತನ ಆಯೋಗ ಮಾದರಿಯಲ್ಲಿ ವೇತನ ಹೆಚ್ಚಳ ಮಾಡುತ್ತೇವೆ ಎಂದು ಸರ್ಕಾರವೇ ಕೊಟ್ಟಿರುವ ಲಿಖಿತ ಭರವಸೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ನೌಕರರ ಸಮಾನ ಮನಸ್ಕರ ವೇದಿಕೆ ಇಂದಿನಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಂಡಿದೆ.

ಇಂದು (ಮಾ.1) ಬೆಳಗ್ಗೆ 10ಗಂಟೆಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆರಂಭಗೊಂಡ ಧರಣಿಯಲ್ಲಿ ಸಾವಿರಾರು ನೌಕರರು ಮತ್ತು ಅವರ ಕುಟುಂಬದವರು ಭಾಗವಹಿಸಿದ್ದಾರೆ.

2020ರ ಡಿಸೆಂಬರ್‌ನಲ್ಲಿ ನಡೆದ ಮುಷ್ಕರದ ಸಮಯದಲ್ಲಿ ಸಂಧಾನ ಸಭೆ ನಡೆಸಿದ ಸರ್ಕಾರ ಸಾರಿಗೆ ನೌಕರರಿಗೂ 6 ನೇ ವೇತನ ಆಯೋಗ ಮಾದರಿಯಲ್ಲಿ ವೇತನ ನೀಡುವುದಾಗಿ ಲಿಖಿತ ಭರವಸೆ ಕೊಟ್ಟು, ಮೂರು ತಿಂಗಳ ಒಳಗೆ ಈಡೇರಿಸುವುದಾಗಿ ಹೇಳಿತ್ತು.

ಆದರೆ, ಈವರೆಗೂ ಕೊಟ್ಟ ಲಿಖಿತ ಭರವಸೆಯನ್ನು ಈಡೇರಿಸಿಲ್ಲ ಮತ್ತು ಸಮಸ್ಯೆಗಳನ್ನು ಸಂಪೂರ್ಣ ನಿವಾರಣೆ ಮಾಡಿಲ್ಲ. ಕೆಲವು ತಿಂಗಳ ಹಿಂದೆ ಸಾರಿಗೆ ಸಚಿವ ಶ್ರೀರಾಮುಲು ಅವರು ಬಹಿರಂಗ ಸಭೆಗಳಲ್ಲಿ ಮತ್ತು ಮಾಧ್ಯಮಗಳ ಮುಂದೆ ಸಾರಿಗೆ ನೌಕರರನ್ನು 7ನೇ ವೇತನ ಆಯೋಗದಲ್ಲಿ ಸೇರ್ಪಡೆ ಮಾಡುವುದು ನನ್ನ ಕಮಿಟ್‌ಮೆಂಟ್ (ಜವಾಬ್ದಾರಿ) ಎಂದು ಹೇಳಿದ್ದಾರೆ.

ಆದರೆ ಈ ಸರ್ಕಾರದ ಕೊನೆಯ ಬಜೆಟ್‌ನಲ್ಲೂ ಸರ್ಕಾರ ಸಾರಿಗೆ ನೌಕರರಿಗೆ ನೀಡಿದ ಲಿಖಿತ ಭರವಸೆಯನ್ನು ಈಡೇರಿಸಿಲ್ಲ. ನಾವು ಈ ಬಜೆಟ್‌ನಲ್ಲಿ ನಮ್ಮ ಬೇಡಿಕೆ ಈಡೇರುತ್ತದೆ ಎಂದು ಚಾತಕ ಪಕ್ಷಿಯಂತೆ ಕಾಯುತ್ತಿದ್ದೆವು. ಇದರಿಂದ ಸಾರಿಗೆ ಸಂಸ್ಥೆಯ 1.07 ಲಕ್ಷ ಸಾರಿಗೆ ನೌಕರರು ಮತ್ತು ಕುಟುಂಬ ಸದಸ್ಯರಿಗೆ ಭಾರಿ ನಿರಾಸೆಯಾಗಿದೆ.

ಸರ್ಕಾರ ಸಾರಿಗೆ ನೌಕರರ ಮೇಲೆ ತೋರುತ್ತಿರುವ ಈ ನಿರ್ಲಕ್ಷ್ಯತನವನ್ನು ಖಂಡಿಸಿ ಹಾಗೂ ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಇಂದಿನಿಂದ ಅನಿದಿರ್ಷ್ಟಾವಧಿ ಧರಣಿ ಸತ್ಯಾಗ್ರಹ ಮಾಡುತ್ತಿದ್ದೇವೆ ಎಂದು ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್‌ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ತಿಳಿಸಿದರು.

ಸರಿ ಸಮಾನ ವೇತನ ನೀಡಬೇಕು: ಪ್ರಮುಖವಾಗಿ ಮುಷ್ಕರದ ಸಮಯದಲ್ಲಿ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲಿ, ನೌಕರರಿಗೆ ಆಗಿರುವ ಎಲ್ಲ ಸಮಸ್ಯೆಗಳನ್ನು ನಿವಾರಣೆ ಮಾಡಿ. ದಿನಾಂಕ: 06/04/2021 ರ ಯಥಾಸ್ಥಿತಿ ಕಾಪಾಡಬೇಕು. ಜತೆಗೆ ಸರ್ಕಾರ ನೀಡಿರುವ ಲಿಖಿತ ಭರವಸೆಯಂತೆ ಸಾರಿಗೆ ನೌಕರರಿಗೂ ವೇತನ ಆಯೋಗದ ಮಾದರಿಯಲ್ಲಿ, ಸರ್ಕಾರಿ ನೌಕರರ ಸರಿ ಸಮಾನ ವೇತನ ನೀಡಬೇಕು.

ಇನ್ನು 1992ರಲ್ಲಿ ಕಾರ್ಮಿಕ ಸಂಘಟನೆಗಳ ಚುನಾವಣೆ ನಡೆಸಿದ್ದು ಆ ಬಳಿಕ ಈವರೆಗೂ ಚುನಾವಣೆ ನಡೆಸಿಲ್ಲ ಹೀಗಾಗಿ ಕೂಡಲೇ ಚುನಾವಣೆ ನಡೆಸುವುದಕ್ಕೆ ಕ್ರಮ ಜರುಗಿಸಬೇಕು. ಸಾರಿಗೆ ಸಂಸ್ಥೆಯನ್ನು ಖಾಸಗೀಕರಣ ಮಾಡುವ ಯೋಜನೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿ ಧರಣಿ ನಡೆಸುತ್ತಿದ್ದಾರೆ.

ನೌಕರರು ಡ್ಯೂಟಿಗೆ ಗೈರಾಗದೆ ತಮ್ಮ ಪಾಲಿನ ಕರ್ತವ್ಯವನ್ನು ಮಾಡಿಕೊಂಡು ಮತ್ತು ರಜೆ ಇರುವವರು ಈ ಧರಣಿಯಲ್ಲಿ ಭಾಗವಹಿಸುತ್ತಿದ್ದಾರೆ. ಅಲ್ಲದೆ ನೌಕರರ ಕುಟುಂಬದವರು ಕೂಡ ಈ ಹೋರಾಟವನ್ನು ಅಪಾರ ಸಂಖ್ಯೆಯಲ್ಲೇ ಬೆಂಬಲಿಸುತ್ತಿದ್ದು ಸರ್ಕಾರ ಸಂಸ್ಥೆಯ ನೌಕರರಷ್ಟೇ ಅಲ್ಲ ಅಧಿಕಾರಿಗಳ ಬೇಡಿಕೆಯೂ ಇದೆ ಆಗಿದ್ದು, ಇದನ್ನು ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.

10ರಿಂದ 25 ಮಂದಿಯಷ್ಟೇ ಭಾಗಿಯಾಗಿದ್ದರು: ಇತ್ತೀಚೆಗೆ ಸಾರಿಗೆ ನೌಕರರ ಪರ ಎಂದು ಹೇಳಿಕೊಂಡು ಅಗ್ರಿಮೆಂಟ್‌ ಮಾಡಬೇಕು ಎಂದು ಒತ್ತಾಯಿಸಿ ಇದೇ ಫ್ರೀಂಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ ಬೃಹತ್‌ ಧರಣಿಯಲ್ಲಿ ಘಟಾನುಘಟಿ ನಾಯಕರೆನಿಸಿಕೊಂಡವರು ಭಾಗವಹಿಸಿದ್ದರು. ಆದರೆ ಆ ವೇಳೆ 10ರಿಂದ 25 ಮಂದಿಯಷ್ಟು ಮಾತ್ರ ಬೃಹತ್‌ ಧರಣಿ ಮಾಡಿ ಕೊನೆಗೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಾಗದೆ ಕೈ ಬಿಟ್ಟರು.

ಆದರೆ, ಇಂದಿನಿಂದ ಆರಂಭವಾಗಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ನಿರೀಕ್ಷೆಗೂ ಮೀರಿ ನೌಕರರು ಭಾಗವಹಸಿದ್ದಾರೆ, ಅಂದರೆ ಈಗಲಾದರೂ ಆ ಸಂಘಟನೆಗಳು ಅರ್ಥ ಮಾಡಿಕೊಳ್ಳಬೇಕು ನೌಕರರು ಶಾಶ್ವತ ಪರಿಹಾರಕ್ಕಾಗಿ ಎದುರು ನೋಡುತ್ತಿದ್ದಾರೆ, ನಾಲ್ಕು ವರ್ಷಕ್ಕೊಮ್ಮೆ ನಡೆಯುವ ಮುಷ್ಕರ ನಮಗೆ ಬೇಡ ಎಂದು ನಿರ್ಧರಿಸಿ ನಮಗೆ ಬೆಂಬಲ ನೀಡಲಿಲ್ಲ ಎಂಬುದನ್ನು.

Leave a Reply

error: Content is protected !!
LATEST
KSRTCಯ 4ನಿಗಮಗಳ ಸಾರಿಗೆ ನೌಕರರಿಗೆ ಶೇ.45ರಷ್ಟು ವೇತನ ಹೆಚ್ಚಳಕ್ಕೆ ವೇದಿಕೆ ಆಗ್ರಹ NWKRTC: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲಕನ ಕಾಲು ಮುರಿತ ಸಾರಿಗೆ ನೌಕರರು ಕರ್ತವ್ಯದ ವೇಳೆ ರೀಲ್ಸ್​ ಮಾಡಿದರೆ ಕೆಲಸದಿಂದ ವಜಾ: ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ ಜು.22ರಂದು ಬೆಂವಿವಿಯ ಸಂವಹನ ವಿಭಾಗದ ಸುವರ್ಣ ಮಹೋತ್ಸವ- ರಾಷ್ಟ್ರೀಯ ಸಮ್ಮೇಳನ ಕಿರಿಯ ವಕೀಲರಿಗೆ ಗೌರವಾನ್ವಿತ ಸಂಬಳ ಕೊಡಿ: ಹಿರಿಯ ವಕೀಲರಿಗೆ ಸುಪ್ರೀಂ ಕೋರ್ಟ್‌ ಸಿಜೆ ಚಂದ್ರಚೂಡ್ ಕಿವಿ ಮಾತು ಬದಲಿ ಜಾಗದಲ್ಲಿ ಮನೆ ಕಟ್ಟಿಕೊಡ್ತೇವೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ 24 ಗಂಟೆ ಉಚಿತ ವಿದ್ಯುತ್‌, ಪ್ರತಿಯೊಬ್ಬರಿಗೂ ಉಚಿತ ಚಿಕಿತ್ಸೆ, ಗುಣಮಟ್ಟದ ಶಿಕ್ಷಣ, ಯುವಕರಿಗೆ ಉದ್ಯೋಗ ಮಹಿಳೆಯರಿಗೆ ತಿ... ಮಳೆ ಹಾನಿ ಪ್ರದೇಶಗಳಿಗೆ ಸಚಿವ ಕೆ.ವೆಂಕಟೇಶ್ ಭೇಟಿ: ಮೃತ ಕುಟುಂಬಕ್ಕೆ ಸಾಂತ್ವನ ಪರಿಹಾರ ಧನ ವಿತರಣೆ ಗೊರೂರು ಜಲಾಶಯದಿಂದ 25ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ: ಇಂಜಿನಿಯರ್ ಆನಂದ್ ಶೈಕ್ಷಣಿಕ ಸಂಸ್ಥೆಗಳು ಶೇ. 25 ರಷ್ಟು ಸೇವಾ ಶುಲ್ಕ ಪಾವತಿಸಿ ಲಾಭ ಪಡೆಯಿರಿ: ತುಷಾರ್  ಗಿರಿನಾಥ್