Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಸರಿಸಮಾನ ವೇತನಕ್ಕೆ ಆಗ್ರಹಿಸಿ ಕುಟುಂಬ ಸದಸ್ಯರ ಸಹಿತ ಮಾ.1ರಿಂದ ಮತ್ತೆ ಬೀದಿಗಿಳಿಯಲಿದ್ದಾರೆ ಸಾರಿಗೆ ನೌಕರರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರಿಗೆ ಸರ್ಕಾರವೇ ಕೊಟ್ಟಿರುವ ಲಿಖಿತ ಭರವಸೆಯಂತೆ ವೇತನ ಆಯೋಗ ಮಾದರಿಯಲ್ಲಿ ವೇತನ ಹೆಚ್ಚಳ ಮಾಡಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನೌಕರರ ಸಮಾನ ಮನಸ್ಕರ ವೇದಿಕೆ ವತಿಯಿಂದ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದ್ದಾರೆ.

ಮಾರ್ಚ್‌ 1ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನೌಕರರು ಮತ್ತು ಅವರ ಕುಟುಂಬದವರು ಈ ಅನಿರ್ದಿಷ್ಟಾವಧಿ ಧರಣಿಯಲ್ಲಿ ಭಾಗವಹಿಸಲಿದ್ದಾರೆ. ಅಂದಿನ ಸಾರಿಗೆ ಸಚಿವರಾಗಿದ್ದ ಲಕ್ಷ್ಮಣ ಸವದಿ ಅವರು ಮತ್ತು ಅಂದಿನ ಗೃಹ ಸಚಿವರೂ ಆಗಿದ್ದ ಇಂದಿನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಕೊಟ್ಟ ಲಿಖಿತ ಭರವಸೆಯನ್ನು ಎರಡೂ ವರ್ಷ ಮೀರಿದರೂ ಇನ್ನೂ ಈಡೇರಿಸಿಲ್ಲ.

ಈ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ಆಡಳಿತ ಮಂಡಳಿಗೆ ನೆನಪಿಸುವ ಸಲುವಾಗಿ ನಾವು ಕಳೆದ ಅ.10ರಿಂದ ನ.25ರವರೆಗೂ ರಾಜ್ಯದ 18 ಜಿಲ್ಲೆಗಳಲ್ಲಿ ಬೃಹತ್‌ ಸೈಕಲ್‌ ಜಾಥಾ ಮಾಡಿದ್ದೆವು. ಆದರೂ ಇದಾವುದಕ್ಕೂ ಸರ್ಕಾರ, ಆಡಳಿತ ಮಂಡಳಿ ಗಮನಹರಿಸಿಲ್ಲ. ಹೀಗಾಗಿ ಡಿ19ರಿಂದ 10ದಿನಗಳ ಕಾಲ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶದ ವೇಳೆಯೂ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡಿದ್ದೇವೆ. ಆದರೂ ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸದೆ ನಮ್ಮನ್ನು ಹೊರದಬ್ಬಿತ್ತು.

ಸರ್ಕಾರ 2020ರ ಡಿಸೆಂಬರ್ ತಿಂಗಳಲ್ಲಿ ನಡೆದ ಸಾರಿಗೆ ಮುಷ್ಕರದ ಸಮಯದಲ್ಲಿ (ಅಂದಿನ ಸಾರಿಗೆ ಸಚಿವರಾಗಿದ್ದ ಲಕ್ಷ್ಮಣ್ ಸವದಿ ಮತ್ತು ಅಂದಿನ ಗೃಹ ಮಂತ್ರಿಗಳಾಗಿದ್ದ ಹಾಲಿ ಮುಖ್ಯಮಂತ್ರಿಗಳಾಗಿರುವ ಬಸವರಾಜ ಎಸ್. ಬೊಮ್ಮಾಯಿ ಅವರ ಉಪಸ್ಥಿತಿಯಲ್ಲಿ) ನಡೆದ ಸಂಧಾನ ಸಭೆಯಲ್ಲಿ ಸರ್ಕಾರ ಸಾರಿಗೆ ನೌಕರರಿಗೂ 6 ನೇ ವೇತನ ಆಯೋಗ ಮಾದರಿಯಲ್ಲಿ ವೇತನ ನೀಡುವುದಾಗಿ ಲಿಖಿತ ರೂಪದಲ್ಲಿ ಭರವಸೆ ಕೊಟ್ಟು, ಮೂರು ತಿಂಗಳ ಒಳಗೆ ಈಡೇರಿಸುವುದಾಗಿ ತಿಳಿಸಿತ್ತು.

ಇದಿಷ್ಟೇ ಅಲ್ಲದೆ ಅಂದಿನ ಸಾರಿಗೆ ಸಚಿವರು ಅನೇಕ ಬಾರಿ ಮಾಧ್ಯಮಗಳಲ್ಲಿ 6ನೇ ವೇತನ ಆಯೋಗ ಸಾರಿಗೆ ನೌಕರರಿಗೆ ನೀಡಲು ಸರ್ಕಾರ ಸಿದ್ಧವಿದೆ ಎಂದು ಹೇಳಿಕೆ ನೀಡಿದ್ದರು. ಕೊನೆಗೆ ತೆಗೆದುಕೊಂಡ ಕಾಲಾವಧಿಯೊಳಗೆ ಅವರೇ ಕೊಟ್ಟ ಭರವಸೆ ಈಡೇರಿಸದ ಕಾರಣ 2021ರ ಏಪ್ರಿಲ್ ತಿಂಗಳಲ್ಲಿ ಅನಿವಾರ್ಯವಾಗಿ ನಾವು ಮುಷ್ಕರ ಮಾಡಬೇಕಾಯಿತು. ಆ ಸಂದರ್ಭದಲ್ಲಿ ಸಾವಿರಾರು ನೌಕರರನ್ನು ವಜಾ, ವರ್ಗಾವಣೆ ಮತ್ತು ಅಮಾನತು ಮಾಡಿ, ನೌಕರರು ಮತ್ತು ಕುಟುಂಬ ಸದಸ್ಯರ ಮೇಲೆ ಸುಳ್ಳು ಪೊಲೀಸ್‌ ಕೇಸುಗಳನ್ನು ಹಾಕಿತು ಈ ಸರ್ಕಾರ.

ಬಳಿಕ ಸರ್ಕಾರದಲ್ಲಿ ಮುಖ್ಯಮಂತ್ರಿಗಳ ಪದವಿಗೆ ಅಂದಿನ ಗೃಹ ಸಚಿವರಾಗಿದ್ದ ಬಸವರಾಜ ಎಸ್. ಬೊಮ್ಮಾಯಿ ಅವರೇ ಬಂದಿದ್ದಾರೆ. ಇನ್ನು ಶ್ರೀರಾಮುಲು ಅವರು ಸಾರಿಗೆ ಸಚಿವರಾದ ಮೇಲೆ ಅವರಿಗೂ ಸಹ ಕೊಟ್ಟ ಲಿಖಿತ ಭರವಸೆಯನ್ನು ಈಡೇರಿಸುವಂತೆ ಮತ್ತು ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಆನೇಕ ಬಾರಿ ಮನವಿ ಮಾಡಿಕೊಂಡು ಜತೆಗೆ ಶಾಂತಿಯುತ ಹೋರಾಟಗಳನ್ನು ಮಾಡಿದ್ದೇವೆ.

ಆದರೆ, ಈವರೆಗೂ ಕೊಟ್ಟ ಲಿಖಿತ ಭರವಸೆಯನ್ನು ಈಡೇರಿಸಿಲ್ಲ ಮತ್ತು ಸಮಸ್ಯೆಗಳನ್ನು ಸಂಪೂರ್ಣ ನಿವಾರಣೆ ಮಾಡಿಲ್ಲ. ಕಳೆದ ಕೆಲವು ತಿಂಗಳ ಹಿಂದೆ ಇದೇ ಸಾರಿಗೆ ಸಚಿವರು ಬಹಿರಂಗ ಸಭೆಗಳಲ್ಲಿ ಮತ್ತು ಮಾಧ್ಯಮಗಳ ಮುಂದೆ ಸಾರಿಗೆ ನೌಕರರನ್ನು 7ನೇ ವೇತನ ಆಯೋಗದಲ್ಲಿ ಸೇರ್ಪಡೆ ಮಾಡುವುದು ನನ್ನ ಕಮಿಟ್‌ಮೆಂಟ್ (ಜವಾಬ್ದಾರಿ) ಎಂದು ಹೇಳಿದ್ದಾರೆ.

ಆದರೆ ಈ ಸರ್ಕಾರದ ಕೊನೆಯ ಬಜೆಟ್‌ನಲ್ಲೂ ಸರ್ಕಾರ ಸಾರಿಗೆ ನೌಕರರಿಗೆ ನೀಡಿದ ಲಿಖಿತ ಭರವಸೆಯನ್ನು ಈಡೇರಿಸಿಲ್ಲ. ನಾವು ಈ ಬಜೆಟ್‌ನಲ್ಲಿ ನಮ್ಮ ಬೇಡಿಕೆ ಈಡೇರುತ್ತದೆ ಎಂದು ಚಾತಕ ಪಕ್ಷಿಯಂತೆ ಕಾಯುತ್ತಿದ್ದೆವು. ಇದರಿಂದ ಸಾರಿಗೆ ಸಂಸ್ಥೆಯ 1.07 ಲಕ್ಷ ಸಾರಿಗೆ ನೌಕರರು ಮತ್ತು ಕುಟುಂಬ ಸದಸ್ಯರಿಗೆ ಭಾರಿ ನಿರಾಸೆಯಾಗಿದೆ.

ಸರ್ಕಾರ ಸಾರಿಗೆ ನೌಕರರ ಮೇಲೆ ತೋರುತ್ತಿರುವ ನಿರ್ಲಕ್ಷ್ಯತನವನ್ನು ಖಂಡಿಸಿ ಹಾಗೂ ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ವತಿಯಿಂದ ಸಾರಿಗೆ ನೌಕರರು ಮತ್ತು ಕುಟುಂಬ ಸದಸ್ಯರು ಮಾರ್ಚ್‌ 1ರಿಂದ ಅನಿದಿರ್ಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಬೇಡಿಕೆಗಳು: 1) ಮುಷ್ಕರದ ಸಮಯದಲ್ಲಿ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲಿ, ನೌಕರರಿಗೆ ಆಗಿರುವ ಎಲ್ಲ ಸಮಸ್ಯೆಗಳನ್ನು ನಿವಾರಣೆ ಮಾಡಿ. ದಿನಾಂಕ: 06/04/2021 ರ ಯಥಾಸ್ಥಿತಿ ಕಾಪಾಡುವುದು.

2) ಸರ್ಕಾರ ನೀಡಿರುವ ಲಿಖಿತ ಭರವಸೆಯಂತೆ ಸಾರಿಗೆ ನೌಕರರಿಗೂ ವೇತನ ಆಯೋಗದ ಮಾದರಿಯಲ್ಲಿ, ಸರ್ಕಾರಿ ನೌಕರರ ಸರಿ ಸಮಾನ ವೇತನ ನೀಡುವುದು.

3) ಕಾರ್ಮಿಕ ಸಂಘಟನೆಗಳ ಚುನಾವಣೆ ನಡೆಸುವುದು. 4) ಸಾರಿಗೆ ಸಂಸ್ಥೆಯನ್ನು ಖಾಸಗೀಕರಣ ಮಾಡುವ ಯೋಜನೆಯನ್ನು ಕೂಡಲೇ ಕೈಬಿಡುವುದು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...