CrimeNEWSನಮ್ಮರಾಜ್ಯ

ಬೆಳ್ಳಂಬೆಳಗ್ಗೆ ಭ್ರಷ್ಟರ ಬೇಟೆಯಾಡುತ್ತಿರುವ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿತ್ತು ಕೆಜಿ ಗಟ್ಟಲೇ ಚಿನ್ನ..!

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅಕ್ರಮ ಆಸ್ತಿ, ಹಣ ಗಳಿಸಿರುವ ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತರು ಶಾಕ್‌ ಕೊಟ್ಟಿದ್ದಾರೆ. ಬೆಂಗಳೂರು ಸೇರಿ ರಾಜ್ಯದ ಹಲವೆಡೆ ದಾಳಿ ನಡೆಸಿದ್ದು, ಈ ವೇಳೆ ಕೆಜಿ ಗಟ್ಟಲೇ ಚಿನ್ನ, ಲಕ್ಷಾಂತರ ರೂಪಾಯಿ ನಗದು ಪತ್ತೆಯಾಗಿದೆ.

ಬೆಂಗಳೂರಿನ ಮೂರು ಕಡೆ ಸೇರಿದಂತೆ ಸುಮಾರು 13 ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ಅಧಿಕಾರಿಗಳೂ ದಾಳಿ ಮಾಡಿದ್ದಾರೆ. ಈ ವೇಳೆ 200ಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು-3 ಕಡೆ, ಕಲಬುರಗಿ, ಬೀದರ್-2 ಕಡೆ, ಬಳ್ಳಾರಿ, ಕೊಪ್ಪಳ, ಚಿಕ್ಕಬಳ್ಳಾಪುರ, ಮೈಸೂರು, ಕೋಲಾರ, ಧಾರವಾಡದಲ್ಲಿ ದಾಳಿ ನಡೆಸಿದ್ದಾರೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಸಂಬಂಧ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದಾರೆ.

ಬೆಸ್ಕಾಂ ಎಕ್ಸಿಕ್ಯುಟಿವ್ ಇಂಜಿನಿಯರ್ ಮನೆ ಮೇಲೆ ದಾಳಿ: ಬೆಸ್ಕಾಂ ಎಕ್ಸಿಕ್ಯುಟಿವ್ ಇಂಜಿನಿಯರ್ ಚೆನ್ನಕೇಶವ ನಿವಾಸದ ಮೇಲೆ ದಾಳಿ ನಡೆಸಿದ್ದು, ಈ ವೇಳೆ 6 ಲಕ್ಷ ನಗದು, ಸುಮಾರು 3 ಕೆಜಿ ಚಿನ್ನಾಭರಣ ಸೇರಿ 28 ಕೆಜಿ ಬೆಳ್ಳಿ ಪತ್ತೆಯಾಗಿದೆ. 25 ಲಕ್ಷ ರೂ. ಮೌಲ್ಯದ ಡೈಮಂಡ್ಸ್ ಸೇರಿ ಒಂದೂವರೆ ಕೋಟಿ ರೂ. ಮೌಲ್ಯದ ಚಿನ್ನಾಭರಣ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿದೆ.

ಡಿಎಚ್‌ಒ ಡಾ. ಪ್ರಭುಲಿಂಗ ಕೆ. ಮಾನಕರ್ ಮನೆ ಮೇಲೆ ದಾಳಿ: ಯಾದಗಿರಿ ಡಿಎಚ್‌ಒ ಡಾ. ಪ್ರಭುಲಿಂಗ ಕೆ. ಮಾನಕರ್ ಅವರ ಮನೆ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಅವರ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯ ಮನೆ ಮೇಲೆ ರೇಡ್ ಮಾಡಿದ್ದು, ಈ ವೇಳೆ ಆದಾಯಕ್ಕಿಂತ ಅಧಿಕ ಹಣಗಳಿಕೆ ಮಾಡಿರುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ಲೋಕಾಯುಕ್ತ ಎಸ್ಪಿ ಎ.ಆರ್.ಕರ್ನೂಲ್ ನೇತೃತ್ವದಲ್ಲಿ ರೇಡ್ ಮಾಡಲಾಗಿದ್ದು, ಹತ್ತಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿ, ಸಿಬ್ಬಂದಿಯಿಂದ ಹುಡುಕಾಟ ನಡೆಸಲಾಗಿದೆ. ಅಂದಹಾಗೆ ಡಾ. ಪ್ರಭುಲಿಂಗ ಮಾನಕರ್ ಈ ಹಿಂದೆ ಕಲಬುರಗಿಯ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ಕೋಲಾರದಲ್ಲೂ ಭ್ರಷ್ಟರ ಬೇಟೆ: ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಮಹದೇವಪುರದಲ್ಲಿರುವ ಕ್ರೆಡಲ್ (KRIDL) ಸೂಪರಿಂಟೆಂಡೆಂಟ್ ಇಂಜಿನಿಯರ್ ತಿಮ್ಮರಾಜಪ್ಪ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಿಮ್ಮರಾಜಪ್ಪ ಅವರಿಗೆ ಸೇರಿದ ಎಂಟುಕಡೆಗಳಲ್ಲಿ ದಾಳಿ ನಡೆದಿದೆ. ಕೋಲಾರ, ಬೆಂಗಳೂರು, ಬೆಳಗಾವಿಯಲ್ಲಿ ಲೋಕಾ ಪೊಲೀಸರು ದಾಳಿ ಮಾಡಿ ಪರಿಶೀಲಿಸಿದ್ದಾರೆ. ಕೋಲಾರ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ಬೀದರ್​ನಲ್ಲೂ ಭ್ರಷ್ಟರ ಬೇಟೆ: ಬೀದರ್‌ನಲ್ಲಿ ಬೆಳ್ಳಂಬೆಳ್ಳಗೆ ಏಕಕಾಲಕ್ಕೆ ಮೂರು ಕಡೆ ದಾಳಿ ನಡೆದಿದ ಲೋಕಾಯುಕ್ತ‌ರು ಪಶು ವಿವಿಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯ ನಿವಾಸ ಹಾಗೂ ಕಾಂಪ್ಲೆಕ್ಸ್ ಗಳಲ್ಲಿ ಶೋಧನೆ ಕಾರ್ಯ ಮಾಡುತ್ತಿದ್ದಾರೆ.

ಪಶು ವಿವಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಸುನೀಲ್ ಎಂಬ ಸಿಬ್ಬಂದಿ ನಿವಾಸ ಹಾಗೂ ಕಾಂಪ್ಲೆಕ್ಸ್ ಮೇಲೆ ಲೋಕಾಯುಕ್ತರು ದಾಳಿ ಮಾಡಿದ್ದಾರೆ. ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆ ದಾಳಿ ಮಾಡಿದ್ದು, ಜತೆಗೆ ಬೀದರ್‌ನ ಗುಮ್ಮೆ ಕಾಲೋನಿಯಲ್ಲಿರುವ ನಿವಾಸ ಹಾಗೂ ಮೈಲೂರು ಕ್ರಾಸ್ ನಲ್ಲಿರುವ ಕಾಂಪ್ಲೆಕ್ಸ್ ಮೇಲೂ ದಾಳಿ ನಡೆದಿದೆ.

ಅಲ್ಲದೆ ಬೆಂಗಳೂರಿನಲ್ಲಿರುವ ನಿವೃತ್ತಿ ಉಪ ಕುಲಪತಿ ಮನೆ ಮೇಲೂ ದಾಳಿ ನಡೆದಿದೆ. ಬೀದರ್‌ನ ಪಶು ವಿವಿಯಲ್ಲಿ ಕೆಲಸ ಮಾಡಿ ನಿವೃತ್ತರಾದ ಉಪ ಕುಲಪತಿಗಳಾದ ನಾರಾಯಣ ಸ್ವಾಮಿ ಅವರ ಮೇಲೆ ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆ ದೂರಿನ ಅನ್ವಯ ಲೋಕಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಡಿವೈಎಸ್ಪಿ ಓಲೇಕಾರ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ತೋಟಗಾರಿಕೆ ಇಲಾಖೆ ಉಪನಿರ್ದೇಶಕನಿಗೆ ಬಿಸಿ ಮುಟ್ಟಿಸಿದರು: ರಾಮನಗರ ಜಿಲ್ಲೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮುನೇಗೌಡ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು ಇದೇ ವೇಳೆ ಅವರ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಕ್ರಾಸ್ ಬಳಿ ಇರುವ ಮುನೇಗೌಡ ಮನೆಗೂ ಬೆಳ್ಳಂಬೆಳಗ್ಗೆ ಎಂಟ್ರಿಕೊಟ್ಟು ಶಾಕ್‌ ನೀಡಿದ್ದಾರೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...