CrimeNEWSಬೆಂಗಳೂರು

ನಿಷ್ಠಾವಂತ ಅಧಿಕಾರಿ ಪ್ರತಿಮಾ ಸಾವಿಗೆ ಕಾರಣರಾರು? ಭೂ ಮಾಫಿಯಾಗೆ ಬಲಿಯಾದ್ರಾ?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ನಿಷ್ಠಾವಂತ ಅಧಿಕಾರಿಯ ಸಾವಿಗೆ ಕಾರಣ ಯಾರು ಎಂಬ ಪ್ರಶ್ನೆ ಹುಟ್ಟುಕೊಂಡಿದೆ. ಅತ್ತ ಪೊಲೀಸರು ಸಹ ಆರೋಪಿಯನ್ನು ಪತ್ತೆ ಹಚ್ಚಲು ಬಲೆ ಬೀಸಿದ್ದಾರೆ. 3 ತಂಡ ರಚನೆ ಮಾಡಿ ಹುಡುಕಾಡುತ್ತಿದ್ದಾರೆ. ಹೀಗಿರುವಾಗ ಪ್ರತಿಮಾ ಭೂ ಮಾಫಿಯಾಗೆ ಬಲಿಯಾದ್ರಾ ಎಂಬ ಸುದ್ದಿ ಹರಿದಾಡುತ್ತಿದೆ.

ಖಡಕ್​ ಅಧಿಕಾರಿಯಾಗಿದ್ದ ಪ್ರತಿಮಾ ಹುಣಸಮಾರನಹಳ್ಳಿ ಮತ್ತು ಸೊಣ್ಣಪ್ಪನಹಳ್ಳಿ ಗ್ರಾಮದಲ್ಲಿ ಭೂ ಸರ್ವೆ ಮಾಡಿದ್ದರು. ಆ ವೇಳೆ 4 ಎಕರೆ 5 ಗುಂಟೆ ಜಮೀನಿನಲ್ಲಿ ಅಕ್ರಮ ಗಣಿಗಾರಿಗೆ ಮಾಡಿ 25 ಲಕ್ಷ ರೂ. ನಷ್ಟ ಉಂಟಾಗಿರುವುದು ಬೆಳಕಿಗೆ ಬಂದಿತ್ತು. ಈ ಬಗ್ಗೆ ಪ್ರತಿಮಾ ಸರ್ಕಾರಕ್ಕೆ ವರದಿಯನ್ನು ಸಹ‌‌ ಮಾಡಿದ್ದರು.

ಈ ಅಕ್ರಮ ಗಣಿಗಾರಿಕೆ ಮಾಡಿದ‌ ಹಿನ್ನಲೆ ಶಾಸಕೊಬ್ಬರು ಸೇರಿದಂತೆ ನಾಲ್ವರ ವಿರುದ್ಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿತ್ತು. ಜತೆಗೆ ಅಕ್ರಮದ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ಸಿದ್ದಪಡಿಸಿದ್ದರು. ಈ ವಿಚಾರಗಳ ಬಗ್ಗೆ ಶಾಸಕರೊಬ್ಬರು ಸೇರಿದಂತೆ ಇಬ್ಬರ ವಿರುದ್ಧ ದೇವನಹಳ್ಳಿಯ ಜೆಎಂಎಫ್​​​ಸಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು.

ಈ ಪ್ರಕರಣದಲ್ಲಿ ಪ್ರತಿಮಾ ಅವರು ನೀಡಿದ ಸ್ಥಳ ಪರಿಶೀಲನೆ ಪ್ರತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದೆ ಎನ್ನಲಾಗಿದೆ. ಈ ಎಲ್ಲ ಅಕ್ರಮದ ಬಗ್ಗೆ‌ ಪ್ರತಿಮಾ ಸರ್ಕಾರಕ್ಕೆ ವರದಿ ನೀಡಿದ್ದು, ಇದೇ‌ ಕಾರಣಕ್ಕೆ ಪ್ರತಿಮಾ ಅವರನ್ನು ಕೊಲೆ ಮಾಡಿದ್ದಾರಾ ಎಂಬ ಅನುಮಾನ ಹುಟ್ಟಿಕೊಂಡಿದೆ. ಹಾಗಾಗಿ ಪೊಲೀಸರು ಈ ಆಯಾಮದಲ್ಲಿಯು ಸಹ‌‌ ತನಿಖೆ ನಡೆಸುತ್ತಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ