NEWSಉದ್ಯೋಗದೇಶ-ವಿದೇಶನಮ್ಮರಾಜ್ಯ

ಮುಂದಿನ 5 ವರ್ಷದಲ್ಲಿ ಉದ್ಯೋಗವಿಲ್ಲದ ಪದವೀಧರರ ಸಂಖ್ಯೆ ಹೆಚ್ಚಾಗಲಿದೆ, ಇತ್ತ ಪ್ಲಂಬರ್, ಎಲೆಕ್ಟ್ರಿಷಿಯನ್ಸ್‌ ಸಿಗಲ್ಲ– ಆಘಾತಕಾರಿ ಎಚ್ಚರಿಕೆ ಕೊಟ್ಟ ರಿತೇಶ್ ಜೈನ್

ವಿಶೇಷವಾಗಿ ನರ್ಸ್‌ಗಳು, ಆರೈಕೆ ಸಿಬ್ಬಂದಿ (Caretakers), ನಿರ್ಮಾಣ ಕಾರ್ಮಿಕರು ಹಾಗೂ ತಾಂತ್ರಿಕ ಕೌಶಲ್ಯ ಹೊಂದಿರುವವರಿಗೆ ಹೆಚ್ಚಿನ ಅವಕಾಶಗಳು ದೊರೆಯುತ್ತಿವೆ. ಮುಂದಿನ ವರ್ಷಗಳಲ್ಲಿ ವಿದೇಶಗಳಲ್ಲಿ ಸಿಗುವ ಹೆಚ್ಚಿನ ವೇತನದ ಆಕರ್ಷಣೆಯಿಂದಾಗಿ, ಭಾರತದ ಕೌಶಲ್ಯಯುತ ಕಾರ್ಮಿಕರು ದೊಡ್ಡ ಮಟ್ಟದಲ್ಲಿ ವಿದೇಶಗಳಿಗೆ ವಲಸೆ ಹೋಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಮುಂದಿನ ಐದು ವರ್ಷಗಳಲ್ಲಿ ಭಾರತದಲ್ಲಿ ಪ್ಲಂಬರ್, ಎಲೆಕ್ಟ್ರಿಷಿಯನ್ ಸೇರಿದಂತೆ ಅಗತ್ಯ ಸೇವೆಗಳ ಸಿಬ್ಬಂದಿಯ ಕೊರತೆ ಉಂಟಾಗಬಹುದು. ಇದರ ಜತೆಗೆ ಇದೇ ವೇಳೆಗೆ ಭಾರತದ ದೇಶದಲ್ಲಿ ಉದ್ಯೋಗವಿಲ್ಲದ ಪದವೀಧರರ ಸಂಖ್ಯೆಯೂ ಕೂಡ ಗಣನೀಯವಾಗಿ ಹೆಚ್ಚಾಗುವ ಅಪಾಯವೂ ಇದೆ ಎಂದು ರಿತೇಶ್ ಜೈನ್ ಎಚ್ಚರಿಕೆ ನೀಡಿದ್ದಾರೆ.

ಹೌದು! ನಮ್ಮ ದೇಶದಲ್ಲಿ ಮುಂದಿನ ಐದು ವರ್ಷಗಳಲ್ಲಿ ಪ್ಲಂಬರ್, ಎಲೆಕ್ಟ್ರಿಷಿಯನ್, ಕಾರ್ಪೆಂಟರ್, ಚಾಲಕರು ಮತ್ತು ಕೇರ್‌ಟೇಕರ್‌ಗಳಂತಹ ಕೌಶಲ್ಯ ಆಧಾರಿತ (Blue-Collar) ಉದ್ಯೋಗಿಗಳ ತೀವ್ರ ಕೊರತೆ ಎದುರಾಗುವ ಸಾಧ್ಯತೆ ಇದೆ ಎಂದು ಪೈನ್‌ಟ್ರೀ (Pinetree) ಸಂಶೋಧನಾ ಸಂಸ್ಥೆಯ ಸಂಸ್ಥಾಪಕ ರಿತೇಶ್ ಜೈನ್ ಎಚ್ಚರಿಕೆ ನೀಡಿದ್ದಾರೆ. ಅವರ ಈ ವಿಶ್ಲೇಷಣಾತ್ಮಕ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಕೆನಡಾ ಮೂಲದ ಸಂಶೋಧನಾ ಸಂಸ್ಥೆ ಪೈನ್‌ಟ್ರೀ ಸಂಸ್ಥಾಪಕ ಜೈನ್ ಅವರು ಲಿಂಕ್ಡ್‌ಇನ್‌ನಲ್ಲಿ (LinkedIn) ಈ ವಿಚಾರದ ಬಗ್ಗೆ ಸುದೀರ್ಘವಾಗಿ ಪೋಸ್ಟ್ ಮಾಡಿದ್ದಾರೆ. ವಿಶ್ವದ ಅನೇಕ ಶ್ರೀಮಂತ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಯುವ ಕಾರ್ಮಿಕರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ.

ಹೀಗಾಗಿ ಆ ದೇಶಗಳು ಭಾರತ ಸೇರಿದಂತೆ ಬೇರೆಬೇರೆ ರಾಷ್ಟ್ರಗಳಿಂದ ಕೌಶಲ್ಯ ಹೊಂದಿರುವ ಪ್ಲಂಬರ್, ಎಲೆಕ್ಟ್ರಿಷಿಯನ್ ಸೇರಿದಂತೆ ಅಗತ್ಯ ಸೇವೆಗಳ ಸಿಬ್ಬಂದಿಯ ನೇಮಿಸಿಕೊಳ್ಳಲು ಮುಗಿಬೀಳುತ್ತಿವೆ. ಇದರ ಪರಿಣಾಮವಾಗಿ, ಇಂಜಿನಿಯರ್‌ಗಳಿಗಿಂತಲೂ ಮೊದಲು ಭಾರತದಲ್ಲಿ ಪ್ಲಂಬರ್‌ಗಳ ಕೊರತೆ ಉಂಟಾಗಬಹುದು ಎಂದು ಜೈನ್ ಆತಂಕ ವ್ಯಕ್ತಪಡಿಸಿದ್ದಾರೆ.

ಯುರೋಪ್, ಅಮೆರಿಕ ಸೇರಿದಂತೆ ಹಲವು ಮುಂಚೂಣಿ ರಾಷ್ಟ್ರಗಳಲ್ಲಿ ಜನನ ಪ್ರಮಾಣ ಕುಸಿಯುತ್ತಿದ್ದು, ವಯೋವೃದ್ಧರ ಸಂಖ್ಯೆ ಹೆಚ್ಚುತ್ತಿದೆ. ಇದರಿಂದಾಗಿ ಅಲ್ಲಿನ ನಿರ್ಮಾಣ, ತಾಂತ್ರಿಕ ನಿರ್ವಹಣೆ, ಆರೋಗ್ಯ ಸೇವೆ ಮತ್ತು ಸಾರಿಗೆ ಕ್ಷೇತ್ರಗಳಲ್ಲಿ ಕಾರ್ಮಿಕರ ಕೊರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪ್ರಸ್ತುತ ಪ್ಲಂಬರ್, ಎಲೆಕ್ಟ್ರಿಷಿಯನ್, ವೆಲ್ಡರ್, ಮೆಕ್ಯಾನಿಕ್‌ಗಳಂತಹ ವೃತ್ತಿಪರರನ್ನು ಹುಡುಕುವುದು ಅಲ್ಲಿನ ಕಂಪನಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಇನ್ನು ಅನೇಕ ಹಿರಿಯ ಕಾರ್ಮಿಕರು ನಿವೃತ್ತಿಯಾಗುತ್ತಿದ್ದು, ವಿದೇಶಗಳ ಯುವ ಪೀಳಿಗೆಯವರು ಈ ಶ್ರಮದಾಯಕ ಕೆಲಸಗಳತ್ತ ಹೆಚ್ಚು ಆಸಕ್ತಿ ತೋರಿಸುತ್ತಿಲ್ಲ. ಜಾಗತಿಕ ಮಟ್ಟದ ಈ ಬಿಕ್ಕಟ್ಟಿನಿಂದಾಗಿ, ಭಾರತದಂತಹ ಯುವ ಜನಸಂಖ್ಯೆ ಹೆಚ್ಚಿರುವ ರಾಷ್ಟ್ರಗಳ ಕಾರ್ಮಿಕರಿಗೆ ವಿದೇಶಗಳಲ್ಲಿ ಭಾರಿ ಬೇಡಿಕೆ ಸೃಷ್ಟಿಯಾಗುತ್ತಿದೆ.

ಇಲ್ಲಿ ವಿಶೇಷವಾಗಿ ನರ್ಸ್‌ಗಳು, ಆರೈಕೆ ಸಿಬ್ಬಂದಿ (Caretakers), ನಿರ್ಮಾಣ ಕಾರ್ಮಿಕರು ಹಾಗೂ ತಾಂತ್ರಿಕ ಕೌಶಲ್ಯ ಹೊಂದಿರುವವರಿಗೆ ಹೆಚ್ಚಿನ ಅವಕಾಶಗಳು ದೊರೆಯುತ್ತಿವೆ. ಮುಂದಿನ ವರ್ಷಗಳಲ್ಲಿ ವಿದೇಶಗಳಲ್ಲಿ ಸಿಗುವ ಹೆಚ್ಚಿನ ವೇತನದ ಆಕರ್ಷಣೆಯಿಂದಾಗಿ, ಭಾರತದ ಕೌಶಲ್ಯಯುತ ಕಾರ್ಮಿಕರು ದೊಡ್ಡ ಮಟ್ಟದಲ್ಲಿ ವಿದೇಶಗಳಿಗೆ ವಲಸೆ ಹೋಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಒಂದು ಕಡೆ ವಿದೇಶಗಳಲ್ಲಿ ಕೌಶಲ್ಯ ಆಧಾರಿತ ಉದ್ಯೋಗಿಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದರೆ, ಮತ್ತೊಂದು ಕಡೆ ಭಾರತದಲ್ಲಿ ಲಕ್ಷಾಂತರ ಯುವಕರು ಕೇವಲ ಪದವಿಗಳನ್ನು (Degrees) ಪಡೆದು ಉದ್ಯೋಗಕ್ಕಾಗಿ ಕಾಯುತ್ತಿದ್ದಾರೆ.

ನಮ್ಮ ಭಾರತ ದೇಶದ ಯುವ ಪದವೀಧರರಲ್ಲಿ ನಿರುದ್ಯೋಗ ಪ್ರಮಾಣ ಇನ್ನೂ ಹೆಚ್ಚಾಗಿಯೇ ಉಳಿದಿದೆ. ಅಂದರೆ, ಭಾರತೀಯ ಉದ್ಯೋಗದಾತರು ಕೌಶಲ್ಯಯುತ ಪ್ರಾಯೋಗಿಕ ಕಾರ್ಮಿಕರ ಕೊರತೆಯನ್ನು ಎದುರಿಸುತ್ತಿದ್ದರೆ, ಇತ್ತ ಕೌಶಲ್ಯರಹಿತ ಪದವೀಧರರಿಗೆ ಸೂಕ್ತ ಉದ್ಯೋಗ ಸಿಗುತ್ತಿಲ್ಲ. ಇದು ಕೂಡ ದೇಶದಲ್ಲಿ ಭಾರಿ ಸಮಸ್ಯೆಗೆ ಕಾರಣವಾಗಬಹುದು ಎಂದು ಹೇಳಲಾಗುತ್ತಿದೆ.

ಇನ್ನು ಮುಂದಿನ ಐದು ವರ್ಷಗಳಲ್ಲಿ ಭಾರತದಲ್ಲಿ ಪ್ಲಂಬರ್, ಎಲೆಕ್ಟ್ರಿಷಿಯನ್ ಸೇರಿದಂತೆ ಅಗತ್ಯ ಸೇವೆಗಳ ಸಿಬ್ಬಂದಿಯ ಕೊರತೆ ಉಂಟಾಗಬಹುದು. ಉದ್ಯೋಗವಿಲ್ಲದ ಪದವೀಧರರ ಸಂಖ್ಯೆ ಹೆಚ್ಚಾಗಿ ಪರಿಸ್ಥಿತಿಯೂ ಅಪಾಯದ ಮಟ್ಟ ತಲುಪಬಹುದು ಹೀಗಾಗಿ ಭಾರತ ಈಗಲೇ ಎಚ್ಚೆತ್ತುಕೊಂಡರೆ ಒಳ್ಳೆಯದು ಎಂಬ ಎಚ್ಚರಿಕೆಯನ್ನು ರಿತೇಶ್ ಜೈನ್ ಕೊಟ್ಟಿದ್ದಾರೆ.

Deva
the authorDeva

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ