NEWSನಮ್ಮಜಿಲ್ಲೆನಮ್ಮರಾಜ್ಯ

BMTC ಅಧಿಕಾರಿಗಳ ವಾಹನಗಳಿಗೂ ಖಾಸಗಿ ಚಾಲಕರ ನೇಮಕಕ್ಕೆ ಟೆಂಡರ್‌ ಕರೆದ ಸಂಸ್ಥೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶಕ್ತಿ ಯೋಜನೆ ಜಾರಿ ಮಾಡುವ ನಾವು ನಷ್ಟದಲ್ಲಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನ್ಲಾಕೂ ನಿಗಮಗಳಿಗೆ ಮರುಜೀವ ಕೊಟ್ಟಿದ್ದೇವೆ. ಸಾರಿಗೆ ಸಂಸ್ಥೆಗಳು ಈಗ ಲಾಭದತ್ತ ಮುಖ ಮಾಡಿದೆ ಎಂದು ಸದಾ ಸಾರಿಗೆ ಸಂಸ್ಥೆಗಳ ಬಗ್ಗೆ ಹೆಮ್ಮೆಯಿಂದ ಹೇಳಿಕೊಳ್ಳುತ್ತಿರುವ ಸರ್ಕಾರ ಹಿಂಬಾಗಿಲಿನಿಂದ ನಿಗಮಗಳ ಖಾಸಗೀಕರಣಕ್ಕೆ ಮುಂದಾಗುತ್ತಿದೆ ಎಂಬ ಸತ್ಯ ಗುಟ್ಟಾಗಿ ಉಳಿದಿಲ್ಲ.

ಅದಕ್ಕೆ ತಾಜಾ ನಿದರ್ಶನ ಎಂಬಂತೆ ಈಗಾಗಲೇ ಹಂತ ಹಂತವಾಗಿ ಬಿಎಂಟಿಸಿ ವಾಹನಗಳಿಗೆ ಖಾಸಗಿ ಚಾಲಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಈ ಮೂಲಕ ಸಾರಿಗೆ ನಿಗಮಗಳನ್ನು ಸಂಪೂರ್ಣವಾಗಿ ಖಾಸಗೀಕರಣ ಮಾಡಲು ಸರ್ಕಾರ ಹೊರಟಿದೆ ಎಂಬ ಆರೋಪ ಕೇಳಿ ಬಂದಿದೆ.

ಇದಕ್ಕೂ ಮೊದಲು ಇವಿ ಬಸ್‌ಗಳಿಗೆ ಖಾಸಗಿ ಚಾಲಕರ ನೇಮಕ ಮಾಡಿಕೊಂಡಿದ್ದ ಸಾರಿಗೆ ನಿಗಮಗ ಈಗ ಸಂಸ್ಥೆಯ ವಾಹನಗಳಿಗೂ ಖಾಸಗಿ ಚಾಲಕರ ನೇಮಕಕ್ಕೆ ಮುಂದಾಗಿದೆ. ಅದಕ್ಕೆ ತಾಜಾ ಉದಾಹರಣೆ ಎಂಬಂತೆ ಬಿಎಂಟಿಸಿ 50 ಬೊಲೆರೊ ಜೀಪ್ ಗಳ ಚಾಲಕರ ನೇಮಕಕ್ಕೆ ಟೆಂಡರ್ ಕರೆದಿದೆ.

ಇನ್ನು ಚಾಲಕರನ್ನು ಒದಗಿಸಲು ಏಜೆನ್ಸಿಯ ಆಯ್ಕೆಗೆ ನಿಗಮ ಮುಂದಾಗಿದೆ. ಸೆಪ್ಟೆಂಬರ್ 30 ಒಳಗೆ KPPP ಮೂಲಕ ಬಿಡ್ ಸಲ್ಲಿಸಲು ಬಿಎಂಟಿಸಿ ನಿಗಮದ ಈಗಾಗಲೇ ಸೂಚನೆ ನೀಡಿದೆ. ಬಿಎಂಟಿಸಿಯ ಈ ನಡೆಗೆ ಚಾಲಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಂಪೂರ್ಣ ಬಿಎಂಟಿಸಿಯನ್ನು ಖಾಸಗಿಯವರಿಗೆ ಬಿಟ್ಟು ಕೊಡಲು ಸರ್ಕಾರ ಮುಂದಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರೆ, ಕೆಲ ಸಂಘಟನೆಗಳು ಲಿಖಿತವಾಗಿ ಖಾಸಗಿ ಕರಣ ಬೇಡ ಎಂದು ಹೇಳುತ್ತಿವೆ. ಆದರೆ ಕಾಸಗಿಕರಣದ ವಿರುದ್ಧ ಈವರೆಗೂ ಯಾವುದೆ ದೃಢ ನಿರ್ಧಾರ ತೆಗೆದುಕೊಂಡುಲ್ಲ. ಹೀಗಾಗಿ ಸಂಘಟನೆಗಳ ನಡೆ ಸಂಶಯಕ್ಕೆ ಎಡೆ ಮಾಡಿಕೊಡುತ್ತಿದೆ. ಇದೆಲ್ಲವನ್ನು ಗಮನಿಸಿದರೆ ಸಾರಿಗೆ ಸಂಘಟನೆಗಳ ಕೆಲ ಮುಖಂಡರು ಕೂಡ ಪರೋಕ್ಷವಾಗಿ ಕಾಸಗೀಕರಣವನ್ನು ಬೆಂಬಲಿಸುತ್ತಿದ್ದಾರೆಯೇ ಎಂಬ ಅನುಮಾನ ನೌಕರರಲ್ಲಿ ದಟ್ಟವಾಗುತ್ತಿದೆ.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು