NEWSಕೃಷಿನಮ್ಮಜಿಲ್ಲೆ

ಚೆಂಡು ಹೂವಿನ ಬೆಲೆ ತೀವ್ರ ಕುಸಿತ- ರಸ್ತೆ ಬದಿ ಹೂ ಸುರಿದು ಬೆಳೆಗಾರ ರೈತರ ಅಕ್ರೋಶ

ವಿಜಯಪಥ ಸಮಗ್ರ ಸುದ್ದಿ

ಕೋಲಾರ: ಸಾಲು ಸಾಲು ಹಬ್ಬಗಳು ಮುಗಿದ ಬಳಿಕ ಚೆಂಡು ಹೂವಿನ (Marigold Flower) ಬೆಲೆ ತೀವ್ರ ಕುಸಿತವಾಗಿದೆ. ಈ ಹಿನ್ನೆಲೆ ರೈತರೊಬ್ಬರು ತಾವು ಬೆಳೆದ ಹೂವನ್ನು ರಸ್ತೆಬದಿ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ನೆರ್ನಹಳ್ಳಿಯ ರೈತ ನಾರಾಯಣಪ್ಪ ಅವರು ದೇವರ ಪಾದದ ಬಳಿ ಇರಬೇಕಾದ ಹೂವನ್ನು ರಸ್ತೆಯಲ್ಲಿ ಚೆಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ನಾಲ್ಕು ಎಕರೆ ಪ್ರದೇಶದಲ್ಲಿ ಒಂದು ಚೆಂಡು ಹೂ ಸಸಿಗೆ 4 ರೂ. ನೀಡಿ ನಾಟಿ ಮಾಡಿ, ಎಕರೆಗೆ ಸುಮಾರು 50 ಸಾವಿರ ರೂ. ಖರ್ಚು ಮಾಡಿ ಬೆಳೆಯಲಾಗಿದೆ. ಆದರೆ ಮಾರುಕಟ್ಟೆಯಲ್ಲಿ ಕೇಳುವವರಿಲ್ಲ, ಮಾರುಕಟ್ಟೆಗೆ ಹೋದರೆ ಕೆಜಿಗೆ 10 ರೂ. ನೀಡುತ್ತೇವೆ ಎಂದು ಹೇಳುತ್ತಾರೆ.

ಮಾರುಕಟ್ಟೆಯಲ್ಲಿ ಹೂವಿನ ಬೆಲೆ ಇಲ್ಲದೆ ಹೂವಿನ ಬೆಳೆಗಾರರು ಕಂಗಾಲಾಗಿದ್ದಾರೆ. ನಾರಾಯಣಪ್ಪ ಎಕರೆಗೆ 50 ಸಾವಿರದಂತೆ ಖರ್ಚು ಮಾಡಿ ಚೆಂಡು ಹೂವು ಬೆಳೆದಿದ್ದರು. ಆದರೆ ಬೆಲೆ ಕುಸಿತ ಕಂಡ ಹಿನ್ನೆಲೆ ಕೋಲಾರ ಮುಖ್ಯರಸ್ತೆ ಬದಿಯಲ್ಲಿ ಸುರಿದು ಆಕ್ರೋಶ ಹೊರಹಾಕಿದ್ದಾರೆ.

ಮಾರುಕಟ್ಟೆಗೆ 50 ಕೆಜಿ ಚೆಂಡು ಹೂ ತೆಗೆದುಕೊಂಡು ಹೋದರೆ ಕೆಜಿಗೆ 10 ರೂ.ನಂತೆ ಮಾರುಕಟ್ಟೆಯ ಕಮಿಷನ್‌ ಕಳೆದು 400 ರೂ. ಮಾತ್ರ ಸಿಗುತ್ತದೆ. ಆದರೆ ಇಲ್ಲಿಂದ ಚೆಂಡು ಹೂ ಮಾರಾಟ ಮಾಡಲು ಮಾರುಕಟ್ಟೆಗೆ ದ್ವಿಚಕ್ರ ವಾಹನದಲ್ಲಿ ಹೋದರೂ ಸುಮಾರು 200 ರೂ. ಖರ್ಚಾಗುತ್ತದೆ. ಅದರಲ್ಲಿ ಊಟ ಇತರೆ ಖರ್ಚು ಕಳೆದರೆ ರೈತರಿಗೆ ಏನು ಸಿಗುವುದಿಲ್ಲ.

ಇನ್ನು ಚೆಂಡು ಹೂ ಕಟಾವು ಮಾಡಲು ಕೂಲಿ ಕಾರ್ಮಿಕರ ಕೂಲಿಗೂ ಇದು ಸಾಕಾಗುವುದಿಲ್ಲ ಎಂದು ಹೇಳುತ್ತಿರುವ ಇನ್ನು ಕೆಲ ರೈತರು ವಿಧಿಯಿಲ್ಲದೆ ತೋಟದಲ್ಲೇ ಬಿಡಲಾಗಿದೆ. ಫಲವತ್ತಾಗಿ ವ್ಯವಸಾಯ ಮಾಡಿದ್ದರಿಂದ ಹೆಚ್ಚಿನ ಇಳುವರಿ ಬಂದಿತ್ತು. ಚೆಂಡು ಹೂವಿನ ಬೆಲೆ ಇಲ್ಲದೆ ಸರಿಯಾದ ಸಮಯಕ್ಕೆ ಕಟಾವು ಮಾಡದೆ, ಚೆಂಡು ಹೂವು ಉದುರಿ ನೆಲ ಕಚ್ಚುತ್ತಿದೆ.

ಸರ್ಕಾರ ರೈತರ ಪರ ಎಂದು ಹೇಳುತ್ತದೆ. ಆದರೆ ರೈತರು ಸಂಕಷ್ಟ ಸ್ಥಿತಿಯಲ್ಲಿರುವಾಗ ಯಾವ ಸರ್ಕಾರವೂ ಸಂಬಂಧಪಟ್ಟ ಅಧಿಕಾರಿಗಳು ಸಹ ರೈತರ ಬಳಿ ಬರುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರೈತರು ಬೆಳೆದ ಚೆಂಡು ಹೂವಿಗೆ ಮಾರುಕಟ್ಟೆ ವ್ಯವಸ್ಥೆಯೇ ಇಲ್ಲ. ಆದ್ದರಿಂದ ಚೆಂಡು ಹೂವು ಮತ್ತು ಇತರೆ ಹೂವು ಬೆಳೆದ ರೈತರು ಸಂಕಷ್ಟ ಸ್ಥಿತಿಯಲ್ಲಿದ್ದಾರೆ. ತೋಟಗಾರಿಕೆ ಇಲಾಖೆ ಸೂಕ್ತ ಪರಿಹಾರ ನೀಡಬೇಕು, ಇಲ್ಲವೇ ಸೂಕ್ತ ಬೆಂಬಲ ಬೆಲೆ ಒದಗಿಸಬೇಕು.

ರೈತರು ನಷ್ಟ ಅನುಭವಿಸಿದರೆ, ವ್ಯಾಪಾರಿಗಳು ಮತ್ತು ಮಧ್ಯವರ್ತಿಗಳು ಇದರ ಲಾಭ ಪಡೆದುಕೊಳ್ಳುತ್ತಿದ್ದಾರೆ. ಆದ್ದರಿಂದ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಚೆಂಡು ಹೂವು ಬೆಳೆದ ರೈತರ ನೆರವಿಗೆ ಬರಬೇಕು ಎಂದು ಬೆಳೆಗಾರರು, ಪ್ರಗತಿಪರ ರೈತರು ಮತ್ತು ರೈತ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ KSRTC: ವಾರದೊಳಗೆ ವೇತನ ಹೆಚ್ಚಳದ 38ತಿಂಗಳ ಹಿಂಬಾಕಿ ನಿವೃತ್ತ ನೌಕರರ ಬ್ಯಾಂಕ್‌ ಖಾತೆಗೆ ಜಮಾ! ಚೆಂಡು ಹೂವಿನ ಬೆಲೆ ತೀವ್ರ ಕುಸಿತ- ರಸ್ತೆ ಬದಿ ಹೂ ಸುರಿದು ಬೆಳೆಗಾರ ರೈತರ ಅಕ್ರೋಶ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಿ: ತುಷಾರ್ ಗಿರಿನಾಥ್ ನಲ್‌ಜಲ್ ಮಿತ್ರ ತರಬೇತಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಅನುರಾಧ ಚಾಲನೆ ನ.19 ರಿಂದ ಡಿ.10ರವರೆಗೆ ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನಕ್ಕೆ ಚಾಲನೆ BMTC ಘಟಕದಲ್ಲಿ ಆತ್ಮಹತ್ಯೆ ಮಾಡಿಕೊಂಡ ಚಾಲಕನ ಕುಟುಂಬ ಪರನಿಂತ ನೌಕರರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈ ಕೋರ್ಟ್‌ ... KKRTC: ತಡರಾತ್ರಿ 20ಕ್ಕೂ ಹೆಚ್ಚು ವಾಹನಗಳ ಮೇಲೆ ಕಲ್ಲು ತೋರಿದ 15ಕ್ಕೂ ಹೆಚ್ಚು ದರೋಡೆಕೋರರು- ತಪ್ಪಿದ ಭಾರಿ ಅನಾಹುತ! KSRTC: ವೇತನ ಹೆಚ್ಚಳ ಸಂಬಂಧ ಗೌಪ್ಯ ಸಭೆಗೆ ಸಜ್ಜಾದ ಅಧಿಕಾರಿಗಳು-ಸಿಬ್ಬಂದಿ ವರ್ಗ ಸಮಾಜ ಪರಿವರ್ತನೆಗೆ ದಾಸಶ್ರೇಷ್ಠ ಕನಕರ ದಾರಿಯಲ್ಲಿ ನಡೆಯೋಣ: ಸಚಿವ ಮುನಿಯಪ್ಪ