ಬೆಂಗಳೂರು: ಸಾರಿಗೆ ನೌಕರರ ಸಮಸ್ಯೆ ಕೂಡಲೇ ಪರಿಹರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳವಾರ ಸಾರಿಗೆ ನೌಕರರ ಸಂಘಟನೆಗಳು ಮಾ.21ರಿಂದ ಮುಷ್ಕರಕ್ಕೆ ಕರೆ ನೀಡಿವೆ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಈಗಾಗಲೇ ಈ ಸಂಬಂಧ ಸಾರಿಗೆ ಸಚಿವರಾದ ಶ್ರೀರಾಮುಲು ಹಾಗೂ ಅಧಿಕಾರಿಗಳು ಸಂಘಟನೆಯ ಪದಾಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ಹೀಗಾಗಿ ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಹೇಳಿದರು.
ಇನ್ನು ಸಾರಿಗೆ ನೌಕರರು ಮತ್ತು ಕೆಪಿಟಿಸಿಎಲ್ ನೌಕರರ ಸಮಸ್ಯೆ ಪರಿಹರಿಸಲು ಕೂಡಲೇ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.